ವಿದ್ಯಾರ್ಥಿಗಳಿಗೆ ಸಿಗಲಿದೆ 10ಸಾವಿರ ಸ್ಕಾಲರ್ ಶಿಪ್; 6 ರಿಂದ 12ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್

ಕುಟುಂಬದ ಆರ್ಥಿಕ ಮತ್ತು ಸಾಮಾಜಿಕ ಹಿನ್ನೆಲೆಯು ವಿದ್ಯಾರ್ಥಿಗೆ ಅವಕಾಶಗಳ ಹರಿವನ್ನು ನಿರ್ಧರಿಸುವಲ್ಲಿ ಪ್ರಮುಖ ಅಂಶವಾಗಿದೆ. ಹೆಚ್ಚಾಗಿ, ಅನೇಕ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಏಕೈಕ ಕಾರಣದಿಂದ ಕೆಲವು ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ಇದು ಅನ್ಯಾಯದ ಪರಿಸ್ಥಿತಿಗೆ ಕಾರಣವಾಗುತ್ತದೆ, ಇದು ಪ್ರತಿಭೆಯ ವ್ಯರ್ಥಕ್ಕೆ ಕಾರಣವಾಗುತ್ತದೆ. ಹೀಗಾಗಿ ಭಾರತ ಸರ್ಕಾರವು ಪ್ರಾರಂಭಿಸಿದ ವಿದ್ಯಾರ್ಥಿವೇತನವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸುಧಾರಿಸಿಕೊಳ್ಳಲು ನೆರವಾಗಲಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಉದ್ದೇಶವನ್ನು ಈ ವಿದ್ಯಾರ್ಥಿ ವೇತನ ಹೊಂದಿದೆ.

WhatsApp Group Join Now
Telegram Group Join Now

ಈ ವಿದ್ಯಾರ್ಥಿವೇತನದ ಮೂಲಕ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವ ದರವನ್ನು ಹೆಚ್ಚಿಸಲು ಸರ್ಕಾರವು ಈ ರೀತಿಯ ಕೆಲವೊಂದು ಹೊಸ ಹೊಸ ವಿದ್ಯಾರ್ಥಿ ವೇತನ ನೀಡುತ್ತಿದೆ. ಅದರಲ್ಲೂ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಾಗಿದ್ದರೆ ಅಂತವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಅಂತ ಹೇಳಬಹುದು. ಸರ್ಕಾರದಿಂದ 10,000 ರೂಪಾಯಿ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದ್ದು, ಈ ವಿದ್ಯಾರ್ಥಿ ವೇತನ ಯಾರು ಪಡೆಯಬಹುದು, ಹೇಗೆ ಇನ್ನು, ಇದಕ್ಕೆ ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲ ಮಾಹಿತಿಯನ್ನ ತಿಳಿಸಿಕೊಡ್ತೀನಿ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?ಸಂಪೂರ್ಣ ಮಾಹಿತಿ ಇಲ್ಲಿದೆ

ಹೌದು ಸರ್ಕಾರ ಹಾಗೂ ಇತರ ಸಂಸ್ಥೆಗಳು ಹಣಕಾಸಿನ ವಿಚಾರವಾಗಿ ಈ ವಿದ್ಯಾರ್ಥಿಯು ಕೂಡ ಅರ್ಧಕ್ಕೆ ವಿದ್ಯಾಭ್ಯಾಸವನ್ನ ಮೊಟಕು ಗೊಳಿಸಬಾರದು ಅನ್ನೋ ಉದ್ದೇಶದಿಂದ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಇದೀಗ ವಿದ್ಯಾರ್ಥಿ ವೇತನಗಳನ್ನ ನೀಡಲು ಮುಂದಾಗಿದೆ. ಅದರಲ್ಲೂ ಪ್ರಸಕ್ತ ಸಾಲಿಗಾಗಿ ಪ್ರತಿಭಾವಂತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿನ 6 ರಿಂದ 12ನೇ ತರಗತಿಯ ವಿದ್ಯಾರ್ಥಿ ಗಳಿಗೆ ವಾರ್ಷಿಕ 10 ಸಾವಿರ ರೂಪಾಯಿಗಳ ಪ್ರೋತ್ಸಾಹಿತ ವಿದ್ಯಾರ್ಥಿವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕಚೇರಿಯ ಅಧಿಕೃತ ಜಾಲತಾಣಕ್ಕೆ ಭೇಟಿ ಕೊಟ್ಟು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಎಸ್‌ಬಿಐ(SBI) ಫೌಂಡೇಶನ್‌ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ವಿದ್ಯಾರ್ಥಿ ವೇತನ ನೀಡಲಾಗುವುದು.

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ(State Bank Of India) ಪ್ರಮುಖ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಲವು ವರ್ಷಗಳಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.

ಹಿಂದಿನ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಅಂತಹ ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.buddy4study.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವಂಬರ್ 30 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ ಒಂದು ಅದ್ವಿತೀಯ ಶಕ್ತಿಯುತ ವಾಹನವಾಗಿದೆ. ಕಡಿಮೆ ಚಾರ್ಜ್ ನಲ್ಲಿ ಹೆಚ್ಚಿನ ಮೈಲೇಜ್

ಇದನ್ನೂ ಓದಿ: ಭಾರತದಲ್ಲಿ ಲಂಚ್ ಆಯ್ತು ಒಪ್ಪೋ A79 5ಜಿ ಫೋನ್ ಫೀಚರ್ಸ್ ಏನ್ ಗೊತ್ತಾ? ಮಸ್ತ್ ಕ್ಯಾಮೆರಾ, ಅತೀ ಕಡಿಮೆ ಬೆಲೆ!

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram