ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ಹಿನ್ನೆಲೆ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ. ಹೌದು ಬರ ಪರಿಸ್ಥಿತಿ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿರುವ ರಾಜ್ಯ ಸರಕಾರ, ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಎಸ್‍ಡಿಆರ್ ಎಫ್ ಅಡಿಯಲ್ಲಿ 105 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಕೇಂದ್ರದ ಅಧ್ಯಯನ ತಂಡ ಅಕ್ಟೋಬರ್ 4ರಿಂದ ಆರು ದಿನ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿಯನ್ನು ಸಲ್ಲಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರನ್ನು ಖುದ್ದು ಭೇಟಿ ಮಾಡಿ, ಕರ್ನಾಟಕಕ್ಕೆ ಬರ ಪರಿಹಾರ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರಿದ್ದರು. ಆದರೆ, ಕೇಂದ್ರದಿಂದ ಯಾವುದೇ ಪರಿಹಾರ ಬಾರದ ಹಿನ್ನೆಲೆ ರಾಜ್ಯ ಸರಕಾರ ರೈತರಿಗೆ ಪ್ರಾಥಮಿಕ ಪರಿಹಾರವಾಗಿ 2ಸಾವಿರ ಹಣ ಬಿಡುಗಡೆ ಮಾಡಿದೆ.
ಮುಖ್ಯವಾಗಿ ಶೇಕಡ 33ಕ್ಕಿಂತ ಹೆಚ್ಚು ಪ್ರಮಾಣದ ಬೆಳೆಹಾನಿಯಾಗಿರುವ ಮಳೆಯಾಶ್ರಿತ ಬೆಳೆಗಳಿಗೆ 1 ಸಾವಿರ ರೂಪಾಯಿ, ನೀರಾವರಿ ಬೆಳೆಗಳಿಗೆ 2 ಸಾವಿರ ರೂಪಾಯಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2,500 ರೂಪಾಯಿಗಳನ್ನು ಹಾಗೂ ಪ್ರತಿ ರೈತರಿಗೆ ಗರಿಷ್ಟ 2 ಹೆಕ್ಟೇರ್ ಗೆ ಸೀಮಿತಗೊಳಿಸಬೇಕು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿನ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಮೂರು ಹಂತದಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಅದರ ಹಿನ್ನೆಲೆ ಪರಿಹಾರದ ಹಣವನ್ನ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಬರ ಪರಿಹಾರದ ಹಣ ಯಾವಾಗ? ಹೇಗೆ ಸಿಗಲಿದೆ ಗೊತ್ತಾ
ಹೌದು ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇಕಡ 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಯಿಂದಾಗಿ, ರೈತರಿಗೆ ಅರ್ಥಿಕವಾಗಿ ನೆರವಾಗಲು ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ ಬರದ ಕಾರಣ ರಾಜ್ಯ ಸರಕಾರದಿಂದ ಮೊದಲನೆ ಕಂತಿನಲ್ಲಿ ತಲಾ 2,000 ರೂಪಾಯಿಯನ್ನು ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಒಟ್ಟು 105 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಬೆಳೆಹಾನಿ ಪರಿಹಾರವನ್ನು ಭೂಮಿ ಸೆಲ್ ನಿರ್ವಹಿಸುತ್ತಿರುವ ಪರಿಹಾರ ತಂತ್ರಾಂಶದ ಮೂಲಕ ವಿತರಿಸಲಾಗುತ್ತದ್ಯಂತೆ. ಅಲ್ದೇ ಅತೀ ಕಡಿಮೆ ಭೂಮಿ ಹೊಂದಿರುವ ರೈತರಿಂದ ಪರಿಹಾರ ವಿತರಣೆ ಆರಂಭಿಸಬೇಕು ಅನ್ನೋ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದ್ಯಂತೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಈ ಪರಿಹಾರಕ್ಕೆ ಆರ್ ಟಿಸಿ ಸಹಿತ ಅಗತ್ಯ ದಾಖಲೆ ಹೊಂದಿರಬೇಕು, ಹಾಗೂ ಡಿಬಿಟಿ ಮೂಲಕ ಮಾತ್ರವೇ ಪರಿಹಾರ ಮೊತ್ತ ಪಾವತಿಸತಕ್ಕದ್ದು ಎಂದು ಷರತ್ತು ವಿಧಿಸಲಾಗಿದೆ. ಮುಖ್ಯವಾಗಿ ಮಳೆಯಾಶ್ರಿತ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ ಗೆ 8,500 ರೂಪಾಯಿ, ನೀರಾವರಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್ ಗೆ 17,500ರೂಪಾಯಿ, ಬಹುವಾರ್ಷಿಕ ಬೆಳೆ ಹಾನಿಗೆ ಹೆಕ್ಟೇರ್ ಗೆ 22,500ರೂಪಾಯಿ ಪರಿಹಾರ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಉಂಟಾಗಿದ್ದು, 18,171 ಕೋಟಿ ರೂಪಾಯಿ ಪರಿಹಾರ ರೂಪದಲ್ಲಿ ಆರ್ಥಿಕ ನೆರವು ನೀಡಲು ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ನೆರವು ಬಾರದ ಕಾರಣ ಇದೀಗ ಮೊದಲ ಕಂತಿನ ಹಣ ಬಿಡುಗಡೆ ಮಾಡಲಾಗಿದೆ.
ಇನ್ನು ರಾಜ್ಯ ಸರಕಾರದಿಂದ ದಿನಾಂಕ:13-9-2023 ರಂದು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು ಮತ್ತು ದಿನಾಂಕ:12-10-2023 ರಂದು 21 ತಾಲ್ಲೂಕುಗಳನ್ನು, ದಿನಾಂಕ: 04-11-2023 ರಂದು 7 ತಾಲ್ಲೂಕುಗಳನ್ನು ಹೀಗೆ ಒಟ್ಟು 223 ತಾಲ್ಲೂಕಿನ ರೈತರಿಗೆ ಬರ ಪರಿಹಾರದ ಅರ್ಥಿಕ ನೆರವು ಸಿಗಲಿದೆ. ಪ್ರಸ್ತುತ ರಾಜ್ಯ ಸರಕಾರದಿಂದ ಜಿಲ್ಲಾ ಮಟ್ಟಕ್ಕೆ ದಿನಾಂಕ: 05-01-2024 ರಂದು ಮೊದಲ ಕಂತಿನ ರೂ 105.00 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದ್ದು, ಅಂದ್ರೆ ನಿನ್ನೆ ಪರಿಹಾರದ ಹಣ ಬಿಡುಗಡೆ ಮಾಡಲಾಗಿದೆ. ಜೊತೆ ಬರ ಪೀಡಿತ ತಾಲ್ಲೂಕು ಎಂದು ಈ ಹಿಂದೆ ಘೋಷಣೆ ಮಾಡಿದ ತಾಲ್ಲೂಕುಗಳಲ್ಲಿ ಇರುವ ರೈತರಿಗೆ ಈ ಹಣ ಸಿಗಲಿದೆ. ನಿನ್ನೆ ಮೊದಲ ಕಂತಿನ ಹಣ ಬಿಡುಗಡೆಗೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, fruits ತಂತ್ರಾಂಶದಲ್ಲಿ ನೋಂದಾವಣೆ ಅಗಿರುವ ರೈತರ ಖಾತೆಗೆ ಇನ್ನು 4-5 ದಿನಗಳ ಒಳಗಾಗಿ ನೇರ ನಗದು ವರ್ಗಾವಣೆ ಮೂಲಕ ಮೊದಲನೆ ಕಂತಿನ 2,000 ರೈತರ ಖಾತೆಗೆ ಜಮಾ ಅಗಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ndrf ಅನುದಾನ ಬಿಡುಗಡೆ ಆದ ನಂತರ sdrf ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೋಳಿಸಲಾಗುವುದು ಅಂತ ಕೂಡ ಹೇಳಲಾಗುತ್ತಿದೆ.
ಇದನ್ನೂ ಓದಿ: ಉಚಿತ ಮನೆಗಾಗಿ ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ? ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ಪಡೆಯೋದು ಹೇಗೆ