ಇನ್ಮುಂದೆ ಗ್ರಾಹಕರಿಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿರುವ ಆರ್‌ಬಿಐ ಇದೀಗ 2000 ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಹೌದು 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದಿದೆ. ಹೀಗಾಗಿ ನೋಟ್ ಬ್ಯಾನ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದೀಗ 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಆಗಿದೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಟ್ವೀಟ್ ಗಳನ್ನ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಹಾಗಾದ್ರೆ ನೋಟ್ ಬ್ಯಾನ್ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? ಎಲ್ಲವನ್ನ ನೋಡೋಣ..
ನೋಟ್ ಬ್ಯಾನ್ ಉದ್ದೇಶ ಇದ್ದವರು ಅದನ್ನ ಯಾಕೆ ಪರಿಚಯಿಸಿದ್ರು
ಹೌದು ನಿನ್ನೆ ಇದ್ದಕ್ಕಿದ್ದ ಹಾಗೆ ಖೋಟ ನೋಟುಗಳ ಕಡಿವಾಣಕ್ಕೆ ಮುಂದಾದರು ಕೇಂದ್ರ ಸರ್ಕಾರ ಹಾಗೂ ಆರ್ ಬಿ ಐ 2000ರೂಪಾಯಿ ಮುಖ ಬೆಳೆಯ ನೋಟುಗಳನ್ನ ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಹರಿಹಾಯ್ದು ಕೇಂದ್ರ ಸರ್ಕಾರದ ನಿಲುವನ್ನ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಹೌದು ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವಲ್ಲಿ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಅಂತ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನೋಟ್ ಬ್ಯಾನ್ ನಿರ್ಣಯ ತಪ್ಪು ಅಂತ ಹೇಳಿದ್ದಾರೆ.
ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ @narendramodi ಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು.
1/2— Siddaramaiah (@siddaramaiah) May 19, 2023
ಇದನ್ನೂ ಓದಿ: 2 ಸಾವಿರ ನೋಟು ಬ್ಯಾನ್! ನಿಮ್ಮತ್ರ 2000 ನೋಟಿದ್ದರೆ ಏನು ಮಾಡಬೇಕು?
ಆಡಳಿತ ವೈಫಲ್ಯ ಮುಚ್ಚು ಹಾಕುವ ಹತಾಶೆಯ ಪ್ರಯತ್ನವಿದು
ಹೌದು ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಅದು ಕೂಡ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಕೇಂದ್ರ ಸರ್ಕಾರ ಪ್ರತ್ನಿಸಿದೆ ಎಂದು ಕಿಡಿ ಕಾರಿದ್ದಾರೆ. ನಿಜಕ್ಕೂ ಇದು ಬೇಸರದ ಸಂಗತಿ. ಬಿಜೆಪಿ ಕೇಂದ್ರ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆಯಿಲ್ಲ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದ್ದರೆ ಅದನ್ನು 2016ರಲ್ಲಿ ಏಕೆ ಪರಿಚಯಿಸಿದರು. ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯ ಹತಾಶ ಪ್ರಯತ್ನ ಇದಾಗಿದೆ ಎಂದು ನೋಟ್ ಬ್ಯಾನ್ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ. ಇದು ಕೇಂದ್ರ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ನಿಟ್ಟಿನಲ್ಲಿ ಮಾಡಿರುವ ಕೆಲಸವಾಗಿದೆ. ಇದರರಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತದೆ ಎಂದು ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಕಪ್ಪು ಹಣವನ್ನು ನಿಯಂತ್ರಿಸುವುದಕ್ಕೆ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್!2ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು?
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram