Yuva Nidhi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನ ಒಂದೊಂದಾಗಿ ಜಾರಿಗೊಳಿಸಲು ಮುಂದಾಗಿದೆ. ಹೌದು ಕೊಟ್ಟಿರುವ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಕರ್ನಾಟಕ ಯುವನಿಧಿ ಯೋಜನೆ ಅನುಷ್ಠಾನದ ಸಲುವಾಗಿ ಸರ್ಕಾರ ಆದೇಶ ಹೊರಡಿಸಿದೆ. ಅಧಿಕೃತವಾಗಿ ಸಿದ್ದು ಸರ್ಕಾರ ಯುವನಿಧಿ ಯೋಜನೆಯ ಚಾಲನೆಗೆ ಹಸಿರು ನಿಶಾನೆ ತೋರಿಸಿದ್ದು, ಯೋಜನೆಯ ಲಾಭವನ್ನ ಇದೀಗ ಅರ್ಹರು ಪಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕವಾಗಿ ಧನಸಹಾಯ ಮಾಡುವ ಉದ್ದೇಶದಿಂದ ನಿರುದ್ಯೋಗಿ ಭತ್ಯೆ ಎಂಬಂತೆ ಇದೀಗ ಸರ್ಕಾರ ನಿರುದ್ಯೋಗಿ ಯುವಕ ಯುವತಿಯರಿಗೆ ಯೋಜನೆಯ ಲಾಭವನ್ನ ನೀಡಲು ಮುಂದಾಗಿದೆ. ಹೌದು ಕಳೆದ ವರ್ಷ ಪಧವಿ ತೇರ್ಗಡೆಯಾದ ಯುವಕ ಯುವತಿಯರಿಗೆ ಮಾಸಿಕವಾಗಿ 3000 ರೂಪಾಯಿ ಹಾಗೂ ಡಿಪ್ಲೊಮಾ ಪಾಸ್ ಆದಂತಹ ನಿರುದ್ಯೋಗಿಗಳಿಗೆ ಮಾಸಿಕ 1500 ರೂಪಾಯಿಯಂತೆ ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ ಯೋಜನೆ” ಜಾರಿಗೊಳಿಸಲು ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸವನ್ನ ಹೊರಡಿಸಿದೆ. ಅಲ್ಲದೇ ಯುವನಿಧಿ ಯೋಜನೆ ಅನುಷ್ಠಾನಗೊಳಿಸಲು ಷರತ್ತು, ನಿಬಂಧನೆಗಳು ಹಾಗೂ ಅನರ್ಹತೆಯ ಮಾನದಂಡಗಳನ್ನು ವಿಧಿಸಿ ಆದೇಶವನ್ನ ರಾಜ್ಯ ಸರ್ಕಾರ ಹೊರಡಿಸಿದೆ.
ಹೌದು ಈಗಾಗ್ಲೇ ರಾಜ್ಯ ಸರ್ಕಾರ ಯುವನಿಧಿ(Yuva Nidhi) ಯೋಜನೆಯ ರುಪುರೇಶೆಗಳನ್ನ ತಜ್ಞ ಅಧಿಕಾರಿಗಳ ತಡದೊಂದಿಗೆ ಸಮಾಲೋಚನೆ ನಡೆಸಿ ಸಿದ್ದಪಡಿಸಿ ಇದೀಗ ಯೋಜನೆಯ ಅನುಷ್ಠಾನಕ್ಕೆ ಆದೇಶ ಹೊರಡಿಸಿದೆ. ಇನ್ನು 2023 ಶೈಕ್ಷಣಿಕ ವರ್ಷದಲ್ಲಿ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂ. ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ ನಿರುದ್ಯೋಗ ಭತ್ಯೆಯನ್ನ ನೀಡಲು ನಿರ್ಧರಿಸಿ ಆದೇಶ ಹೊರಡಿಸಿದೆ. ಹೌದು ಪಧವಿಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿವರೆಗೂ ಕೂಡ ಮಾಸಿಕವಾಗಿ 3000 ರೂಪಾಯಿ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಇದನ್ನೂ ಓದಿ: ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಮತ್ತೊಮ್ಮೆ ಮದುವೆಯಾದ ಚಂದ್ರಪ್ರಭಾ ಹಾಗೂ ಭಾರತಿ ಪ್ರಿಯಾ – ಕಣ್ಣೀರೀಟ್ಟ ಜೋಡಿ
ಯಾರ್ಯಾರು ಅರ್ಹರು? ಯಾರಿಗೆಲ್ಲ ಅನ್ವಯವಾಗುತ್ತೆ?
ಹೌದು ಆಡಳಿತಾತ್ಮಕ ಅನುಮೋದನೆ ನೀಡಿ ಇದೀಗ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪದವಿ ಅಥವಾ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ. ಇನ್ನು ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯವಾಗಲಿದ್ದು, ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆ ಲಾಭವನ್ನ ಸ್ಥಗಿತಗೊಳಿಸಲಾಗುವುದು. ಜೊತೆಗೆ ನಿರುದ್ಯೋಗ ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇನ್ನು ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಅಂದ್ರೆ ವಾಸ್ತವವಾಗಿ ಹೇಳುವ ಮನಸ್ಥಿತಿ ಇರಬೇಕು. ಹೌದು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಂದ್ರೆ ಉದ್ಯೋಗದಲ್ಲಿದ್ರೂ ಇಲ್ಲ ಅಂತ ಹೇಳುವುದು ಅಥವಾ ಹೇಳದೆ ಅಗೆಯೇ ಇದ್ರೆ ದಂಡ ವಿಧಿಸಲಾಗುವುದು ಅಂತ ಸರ್ಕಾರ ತಿಳಿಸಿದೆ.
ಪದವಿ ಪಡೆದು 180 ದಿನಗಳು ಕಳೆದರೂ ಉದ್ಯೋಗ ಸಿಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿರುವ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಮೂಲಕ ಉದ್ಯೋಗ ಹುಡುಕಾಟಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಆರ್ಥಿಕ ಸಂಕಷ್ಟದಿಂದ ಅವರನ್ನು ಪಾರುಮಾಡುವುದು ನಮ್ಮ ಈ ಯೋಜನೆಯ ಉದ್ದೇಶವಾಗಿದೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರು ಕೂಡ ಯೋಜನೆಯ ಲಾಭ ಪಡೆಯಬಹುದಾಗಿದೆ. ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊಂದಿದ್ದು, ಉದ್ಯೋಗ ಸಿಗದೆ ಸಂಕಷ್ಟದಲ್ಲಿರುವ ನಾಡಿನ ಯುವಶಕ್ತಿಗೆ ಆರ್ಥಿಕ ನೆರವು ನೀಡಿ ಅವರ ಭವಿಷ್ಯದ ಕನಸಿಗೆ ಬೆಂಬಲವಾಗಿ ನಿಲ್ಲಲು ನಾವು ಬದ್ಧರಿದ್ದೇವೆ ಅಂತ ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರಿಸುವವರು, ಶಿಶಿಕ್ಷು ವೇತನ ಪಡೆಯುತ್ತಿರುವವರು, ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು,ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಈ ಯೋಜನೆಯ ಲಾಭ ಪಡೆಯಲು ಅನರ್ಹರಾಗಿರುತ್ತಾರೆ. ಅಂದ್ರೆ ಇವರಿಗೆ ಯೋಜನೆಯ ಲಾಭ ಸಿಗುವುದಿಲ್ಲ.
ಇದನ್ನೂ ಓದಿ: ಚಂದನವನಕ್ಕೆ ಗುಡ್ ಬೈ ಹೇಳಿದ್ರ ಜೆ.ಕೆ, ಇಂಡಸ್ಟ್ರಿ ಸಹವಾಸ ಸಾಕು ಅಂತ ಹೇಳಿದ್ದೇಕೆ?
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram