ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಾಡಿದ ಸರ್ಕಸ್ ಹಾಗೂ ಗ್ಯಾರಂಟಿ ಗಳು ಸಖತ್ ಸೌಂಡ್ ಮಾಡಿದ್ವು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರಂಟಿಗಳ ಪಾತ್ರ ಬಹಳ ಪ್ರಮುಖವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಗ್ಯಾರಂಟಿಗಳ ಜಾರಿಗೆ ಬದ್ಧವಾಗಿತ್ತು. ಈ ಪೈಕಿ ಈಗಾಗಲೇ 3 ಗ್ಯಾರಂಟಿಗಳು ಜಾರಿಯಾಗಿದ್ದು, ಇನ್ನುಳಿದ 2 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಜಾರಿ ಮಾಡಲು ಸರ್ಕಾರವೂ ಸನ್ನದ್ಧವಾಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಶಾಸಕಾಂಗ ಸಭೆ ನಡೆಸಿರುವ ಡಿಕೆಶಿ ಇದೀಗ ಹೊಸ ಅಪ್ಡೇಟ್ ನೀಡಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆ ಮೂಲಕ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ಗ್ರಾಮೀಣ ಭಾಗ ಸೇರಿ ಬಡತನದಲ್ಲಿ ಬದುಕುತ್ತಿರುವ ಕೋಟ್ಯಂತರ ಕುಟುಂಬಗಳಿಗೆ ಸಹಾಯ ಮಾಡಲಿದೆ.
ಹೀಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯ ತನಕ 1.50 ಕೋಟಿ ಮನೆಯೊಡತಿಯರು ನೋಂದಣಿ ಮಾಡಿಸಿದ್ದಾರೆ. ಹೀಗೆ ಕೋಟ್ಯಂತರ ಜನರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಹೌದು ಗೃಹಲಕ್ಷ್ಮಿ ಯೋಜನೆ ಬಗ್ಗೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ ನಡೆಸಿದರು. ಈ ವೇಳೆ ಮಾತನಾಡಿ, ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆಗಸ್ಟ್ 20ರ ಬದಲಿಗೆ ಆಗಸ್ಟ್ 27ರಂದು ರಾಜ್ಯದ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹೀಗಿದೆ ನೋಡಿ ಇಂದಿನ ತರಕಾರಿಗಳ ದರ! ಇಳಿಕೆ ಕಾಣದ ಟಮೊಟೋ ಬೆಲೆ
ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಹೌದು ಈ ವಿಚಾರದ ಕುರಿತು ಸೋಶಿಯಲ್ ಮೀಡಿಯಾದಲ್ಲೂ ಡಿಕೆಶಿ ವಿಷಯ ಅಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಆರಂಭವಾಗಲಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲು ಉದ್ದೇಶಿಸಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಮೊದಲಾದವರು ಉಪಸ್ಥಿತರಿದ್ದರು ಅಂತ ಡಿಕೆಶಿ ಹೇಳಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹತ್ವದ ಮೀಟಿಂಗ್ ನಂತರ ವಿಕಾಸಸೌಧದಲ್ಲಿ ಮಾಧ್ಯಮ ಸಿಬ್ಬಂದಿಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನೇರಪ್ರಸಾರ ಆಗಲಿದೆ. ಪ್ರತಿ ಗ್ರಾಮ ಪಂಚಾಯಿತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ.
ಪ್ರತಿ ವಾರ್ಡಿನಲ್ಲಿ ಸಂಭ್ರಮದಿಂದ ಆಚರಣೆ ಮಾಡುವಂತೆ ತಿಳಿಸಿದ್ದೇವೆ. ಜೂಮ್ & ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರ ವ್ಯವಸ್ಥೆ ಮಾಡಿದ್ದೇವೆ ಅಂತ ಉಪಮುಖ್ಯಮಂತ್ರಿ ಮಾಹಿತಿ ನೀಡಿದರು. ರಾಜ್ಯದ ನಾನಾ ಕಡೆ ಅನೇಕ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನ ಮನೆಯ ಮುಂದೆ ರಂಗೋಲಿ ಹಾಕಿ ಸಂಭ್ರಮ ಆಚರಣೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಪಕ್ಷಾತೀತವಾಗಿ ಎಲ್ಲರೂ ಗೃಹಲಕ್ಷ್ಮಿಯನ್ನು ಆಹ್ವಾನ ಮಾಡಿಕೊಳ್ಳಬೇಕು ಅಂತ ಇದೇ ವೇಳೆ ಡಿಸಿಎಂ ತಿಳಿಸಿದರು. ಹಾಗೇ ಗುತ್ತಿಗೆದಾರರು ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿದ್ದಾರೆ ಎನ್ನುವ ಪ್ರಶ್ನೆಗೆ, ಅವರಿಗೆ ಆಲ್ ದಿ ಬೆಸ್ಟ್, ಒಳ್ಳೆಯದಾಗಲಿ, ಈ ಹೋರಾಟದ ಹಿಂದೆ ಇರುವವರಿಗೂ ಒಳ್ಳೆಯದಾಗಲಿ. ಆದರೆ ನ್ಯಾಯ ಏನಿದೆಯೋ ಅದರಂತೆ ನಾವು ನಡೆಯಲಿದ್ದೇವೆ ಅಂತ ಗ್ಯಾರಂಟಿ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೌದು ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಎಲ್ಲ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಸೇರಿ ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಯೋಜನೆಗೆ ನೋಂದಣಿ ಮಾಡಿಸಿಕೊಂಡಿರುವ ಮಹಿಳೆಯರ ಖಾತೆಗಳಿಗೆ ಆಗಸ್ಟ್ ತಿಂಗಳ 2000 ರೂಪಾಯಿ ಜಮಾ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ವಿಡಿಯೊ ಸಂವಾದ ನಡೆಸಿದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಈ ವಿಷಯ ತಿಳಿಸಿದ್ದಾರೆ.
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram