ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು ಮಕ್ಕಳ ಕನಸುಗಳಿಗೆ ರೆಕ್ಕೆ ಮೂಡಿದಂತಾಗಿದೆ. ಸರ್ಕಾರದ ‘ಶಕ್ತಿ ಯೋಜನೆ’ಗೆ ಅಭೂತಪೂರ್ವವಾದ ಪ್ರತಿಕ್ರಿಯೆ ಮತ್ತು ಸಕಾರಾತ್ಮಕ ಸ್ಪಂದನೆ ದೊರಕಿದೆ.
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ಎಲ್ಲ ಕಡೆ ವೈರಲ್ ಆಗಿದ್ರು ಅಷ್ಟೇ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವೈರಲ್ ಆದ ಫೋಟೋ ಕುರಿತು ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ರು. ಅಲ್ದೇ ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು ಅಂತ ಒಂದಷ್ಟು ಸಾಲುಗಳನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದುಕೊಂಡಿದ್ರು.
ಹೌದು ಶಕ್ತಿ ಯೋಜನೆಗೆ ಚಾಲನೆ ಕೊಟ್ಟಾಗ ತಾಯಿಯೊಬ್ಬರು ಬಸ್ ಹತ್ತುವ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಹಳ ಖುಷಿಯಿಂದ ಯೋಜನೆಯ ಲಾಭ ಪಡೆದುಕೊಂಡ್ರು. ಆಗ ಆ ಸಂದರ್ಭದಲ್ಲಿ ತೆಗೆದ ಫೋಟೊ ಸಖತ್ ವೈರಲ್ ಆಗಿತ್ತು. ಇದನ್ನ ಗಮನಿಸಿದ ಸಿದ್ದರಾಮಯ್ಯ ಸಂಗವ್ವ ಗೆ ತಮ್ಮ ಟ್ವಿಟರ್ ಮೂಲಕ ಧನ್ಯವಾದ ತಿಳಿಸಿ, ಟಿಕೆಗಳಿಗೆ ತಲೆ ಕೆಡಿಸಿಕೊಳ್ಳೋದಿಲ್ಲ ನಿಮ್ಮಿಂದ ಒಳ್ಳೆ ಆರಂಭ ಸಿಕ್ಕಿದೆ, ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ.
ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಅಂತ ಆ ಫೋಟೋವನ್ನ ಸಿದ್ದರಾಮಯ್ಯ ಶೇರ್ ಮಾಡಿಕೊಂಡಿದ್ರು. ಈಗ ಮತ್ತೊಂದು ಫೋಟೋವನ್ನ ಸಿದ್ದರಾಮಯ್ಯ ಹಂಚಿಕೊಂಡಿದ್ದು ಅದೇ ಸಂಗವ್ವ ನಾ ಜೊತೆ ಸಿಎಂ ಫೋಟಿಸ್ ಕ್ಲಿಕ್ಕಿಸಿಕೊಂಡಿದ್ದು ಹಂಚಿಕೊಂಡಿದ್ದಾರೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಬೆಳಗಾವಿಯ ಸಂಗವ್ವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?
ಸ್ನೇಹಿತರೆ ನಿಮ್ಮೆಲ್ಲರಿಗೂ ಗೊತ್ತಿರುವಂತೆ ಕಲರ್ಸ್ ಕನ್ನಡ ವಾಹಿನಿ ಸಾಧಕರನ್ನ ಸನ್ಮಾನಿಸುವ ದೃಷ್ಟಿಯಿಂದ ಅನುಭಂಧ ಅವರ್ಡ್ಸ್ ನೀಡುತ್ತೆ. ಈ ವರ್ಷವೂ ಕೂಡ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಎಲ್ಲ ಕ್ಷೇತ್ರದ ಗಣ್ಯಮಾನ್ಯರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಆದ್ರೆ ಈ ಕಾರ್ಯಕ್ರಮಕ್ಕೆ ಮೆರಗು ತಂದಿದ್ದು ಬೆಳಗಾವಿಯ ಸಂಗವ್ವ ಅವ್ರ ಆಗಮನ. ಅಲ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಸಂಗವ್ವ ಅವ್ರನ್ನ ಭೇಟಿಯಾದದ್ದು ಖುಷಿ ತಂದಿದೆ ಅಂತ ಸಿಎಂ ಕೆಲವೊಂದು ಫೋಟೋಗಳನ್ನ ಹಂಚಿಕೊಂಡು ಹೀಗೆ ಬರೆದುಕೊಂಡಿದ್ದಾರೆ.
ಹೌದು ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ( ಸಂಗವ್ವ ) ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು. ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ Colors Kannada ವಾಹಿನಿಗೆ ಧನ್ಯವಾದಗಳು ಅಂತ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಇಂದಿನ ತರಕಾರಿ ದರ ಎಷ್ಟಿದೆ ನೋಡಿ? ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಬೆಲೆ ಎಷ್ಟಾಗಿದೆ?
ಇದನ್ನೂ ಓದಿ: ಬಂದೇ ಬಿಡ್ತು ಬಿಗ್ ಬಾಸ್ ಮೊದಲ ಪ್ರೋಮೋ; ಬಿಗ್ ಬಾಸ್ ಸೀಸನ್ 10ಕ್ಕೆ ಮುಹೂರ್ತ ಫಿಕ್ಸ್?
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram