ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಣಿ, ಬಾಣಂತಿಯರಿಗಾಗಿಯೇ ವಿಶೇಷ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಹೌದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ(Pradhan Mantri Matru Vandana Yojana) ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶ ಕೆ.ಹೆಚ್.ವಿಜಯಕುಮಾರ್ ಅವರು ತಿಳಿಸಿದ್ದಾರೆ.
ಈ ಯೋಜನೆಯನ್ನು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಪಡೆಯುವುದಕ್ಕಾಗಿ ಆಯ್ಕೆಯಾದ ಫಲಾನುವಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಅಂತ ತಿಳಿಸಿದ್ದು, ಅರ್ಹರು ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು. ಹಾಗಾದ್ರೆ ಅರ್ಜಿ ಹೇಗೆ ಸಲ್ಲಿಸೋದು, ಎಲ್ಲಿ ಸಲ್ಲಿಸಬೇಕು, ಬೇಕಾದ ದಾಖಲೆಗಳೇನು ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ? ದಾಖಲೆಗಳೇನು ಬೇಕು?
ಹೌದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ(Pradhan Mantri Matru Vandana Yojana) ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಈ ಯೋಜನೆಯಲ್ಲಿ ಕೆಲವು ಬದಲಾವಣೆಯಾಗಿದ್ದು, ಪ್ರಸ್ತುತ ಮಾತೃ ವಂದನಾ ಯೋಜನೆಯಡಿ ಮೊದಲ ಎರಡು ಜೀವಂತ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ಲಭ್ಯವಾಗುತ್ತದೆ. ಆದರೆ ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ 5000ರೂಪಾಯಿಗಳನ್ನು ನೀಡಲಾಗುವುದು. ಮೊದಲನೇಯ ಕಂತು 3000ರೂಪಾಯಿಗಳನ್ನು ಗರ್ಭಿಣಿ ಎಂದು ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಎರಡನೇ ಕಂತು 2000ರೂಪಾಯಿಗಳನ್ನು ಮಗುವಿನ ಜನನ ನೋಂದಣಿ ಹಾಗೂ 3ನೇ ಪೆಂಟಾ ಪೂರ್ಣಗೊಂಡ ನಂತರ ನೀಡಲಾಗುತ್ತದೆ. ಎರಡನೇ ಹೆಣ್ಣು ಮಗು ಜನನಿಸಿದರೆ ಒಂದೇ ಕಂತಿನಲ್ಲಿ 6000 ರೂಪಾಯಿಗಳನ್ನು ನೀಡಲಾಗುವುದು. ಎರಡನೇ ಮಗುವಿಗೆ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಗರ್ಭಿಣಿ ಅವಧಿಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇನ್ನು ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಅಂತ ತಿಳಿಸಿದ್ದಾರೆ.
ಇನ್ನು ಅರ್ಹ ಗರ್ಭಿಣಿಯರು ಬಾಣಂತಿಯರು ಯೋಜನೆಯ ಲಾಭ ಪಡೆದುಕೊಳ್ಳಬಹುದು ಅಂತ ತಿಳಿಸಿದ್ದು, ಅರ್ಹ ಫಲಾನುಭವಿಗಳು ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಆನ್ಲೈನ್ ಮೂಲಕವು ನೋಂದಾಯಿಸಿಕೊಳ್ಳಬಹುದು. ಅಂದ್ರೆ ಸ್ವಯಂ ಫಲಾನುಭವಿಯ ಫೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅಲ್ದೇ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಮಹಿಳಾ ಮೇಲ್ವಿಚಾರಕಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಇನ್ನು ಮುಖ್ಯವಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಅಂದ್ರೆ ತಾಯಿ ಕಾರ್ಡ್ ಪ್ರತಿ. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದು ನಕಲು ಪ್ರತಿ ನೀಡಬೇಕಾಗುತ್ತೆ. ಇನ್ನು ಅರ್ಜಿ ನಮೂನೆಗಳು ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತವೆ. ಅಲ್ಲಿಯೇ ಅರ್ಜಿ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನ ನೀಡಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.
ಇದನ್ನೂ ಓದಿ: ಗೃಹಲಕ್ಷ್ಮೀ ಹಣ ಬಂದಿಲ್ವಾ ಯೋಚ್ನೆ ಬಿಡಿ; ನಿಮ್ಮ ಪತಿಯ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು
ಇದನ್ನೂ ಓದಿ: ಹೊಸ APL ಹಾಗೂ BPL ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ