ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ಇನ್ನು ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದೆ.
ರಾಜ್ಯ ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್ ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ರಾಜ್ಯ ಸರ್ಕಾರವು ಈ ವಾರವೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು, ರೈತರು ತಪ್ಪದೇ ಪಹಣಿ-ಆಧಾರ್ ಕಾರ್ಡ್ ಜೋಡಣೆ ಮಾಡಬೇಕು. ಇದರ ಜೊತೆಗೆ ಮತ್ತೊಂದು ಕೆಲಸವನ್ನ ಅಗತ್ಯವಾಗಿ ಮಾಡುವಂತೆ ತಿಳಿಸಿದೆ. ಇಲ್ಲದಿದ್ರೆ ಬರ ಪರಿಹಾರದ ಹಣ ಬರೋದಿಲ್ವಂತೆ ಹಾಗಾದ್ರೆ ಏನದು ಕೆಲಸ ಏನ್ ಮಾಡಬೇಕು ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಈ ವಾರವೇ ಜಮೆ ಆಗಲಿದೆ ಬರ ಪರಿಹಾರದ ಹಣ
ಮೊದಲಿಗೆ ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್ಐಡಿ(FID) ಮಾಡಿಸಲೇಬೇಕು. ರೈತರು ಸರಕಾರದ ಯಾವುದೇ ಯೋಜನೆಯಡಿ ಸವಲತ್ತು ಮತ್ತು ಬ್ಯಾಂಕ್ ಸಾಲ ಪಡೆಯಲು ಸದರಿ ಎಫ್ಐಡಿಯು ಕಡ್ಡಾಯವಾಗಿದೆ. ಹೀಗಾಗಿ ಎಲ್ಲಾ ರೈತರೂ ತಪ್ಪದೇ ಮಾಡಿಸಿಕೊಳ್ಳುವಂತೆ ಹಾಗೂ ತಮ್ಮ ಎಲ್ಲಾ ಜಮೀನುಗಳ ವಿವರವನ್ನು ಎಫ್ಐಡಿಯಲ್ಲಿ ಸಲ್ಲಿಸಬೇಕು. ಒಂದು ವೇಳೆ ಎಫ್ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್ಐಡಿ ಮಾಡದೆ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್ಐಡಿ ಮಾಡಿಸಬೇಕು.
ಹೌದು ಸರಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ ಪೋಟ್ಸ್ ಐಡಿಗೆ ಸೇರಿಸಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರ ಧನವನ್ನು ನೇರವಾಗಿ ‘ಡಿಬಿಟಿ’ ಮೂಲಕ ವಿತರಿಸಲಾಗುತ್ತದೆ. ಹೀಗಾಗಿ ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳಬಹುದು.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.
ಇನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ದೇ ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಭಾರತೀಯ ನೌಕಾಪಡೆಯ 910 ಹಿರಿಯ ಡ್ರಾಫ್ಟ್ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.