ಕರ್ನಾಟಕ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಜೊತೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿದ್ದೂ, ಪ್ರತಿ ದಿನ ಒಂದೊಂದು ವಲಯದ ಜನರಿಗೆ ಒಂದೊಂದು ರೀತಿಯ ಗುಡ್ ನ್ಯೂಸ್ ನೀಡುತ್ತಾ ಬರುತ್ತಿದೆ. ಆದ್ರೆ ಇಂದು ಬಹಳ ವಿಶೇಷ ಎಂಬಂತೆ ರೈತರಿಗೆ ಒಂದೊಳ್ಳೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಸಿಎಂ, ಮಧ್ಯಮಾವಧಿ ಆದರೂ ಆಗಿರಬಹುದು, ದೀರ್ಘಾವಧಿ ಸಾಲ ಆಗಿರಬಹುದು. ಒಟ್ಟೂ 300 ಕೋಟಿಯಷ್ಟು ಇರಬಹುದು. ಅದನ್ನು ಮನ್ನಾ ಮಾಡುತ್ತೇವೆ ಅಂತ ಘೋಷಿಸಿದ್ದಾರೆ.
ಇನ್ನು ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದ್ರೇ ಸಾಕು, ಅದರ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಪಡೆದಿದ್ದರೆ ರೈತರಿಗೆ ಗುಡ್ ನ್ಯೂಸ್
ಹೌದು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಬಿಜೆಪಿಯವರು 2018 ರ ತಮ್ಮ ಮ್ಯಾನಿಫೆಸ್ಟೊದಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು ಘೋಷಿಸಿದ್ದಾರೆ ಅಂತ ರೈತರ ಬಡ್ಡಿ ಮನ್ನಾ ಘೋಷಣೆಗೆ ವಿರೋಧ ಪಕ್ಷದ ಶಾಸಕ ಎಸ್ಟಿ ಸೋಮಶೇಖರ್ ಸೇರಿದಂತೆ ಹಲವರು ಸಿಎಂ ಅವರನ್ನು ಅಭಿನಂದಿಸಿದ್ದಾರೆ. ಇನ್ನು ಸಿಎಂ ಘೋಷಿಸುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು. ವಿಶೇಷ ಅಂದ್ರೆ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಘೋಷಣೆಗೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕೂಡ ಅಭಿನಂದಿಸಿದರು. ಇದು ರೈತರಿಗೆ ಒಳ್ಳೆಯ ಸ್ಕೀಮ್, ಇದಕ್ಕಾಗಿ ಸಿಎಂ ಅವರಿಗೆ ಅಭಿನಂದನೆ ಹೇಳ್ತೇನೆ ಅಂತ ಹೇಳಿದ್ದಾರೆ.
ಹೌದು ಸಾಕಷ್ಟು ರೈತರು ಕೃಷಿ ಹಾಗೂ ಇನ್ನಿತರ ಕಾರಣಗಳಿಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಪಡೆದುಕೊಂಡಿರುತ್ತಾರೆ. ಸಾಲ ತೀರಿಸುವುದು ಅಥವಾ ಸಾಲಕ್ಕೆ ಆಗಿರೋ ಬಡ್ಡಿ ಕಟ್ಟೋದ ಅಂತ ಪರದಾಡುವವರ ಸಂಖ್ಯೆ ಕೂಡ ಹೆಚ್ಚಾಗಿಯೇ ಇದೆ. ಏನೇ ಅಗತ್ಯತೆ ಮತ್ತು ಅನಿವಾರ್ಯತೆಗೆ ಕಟ್ಟುಬಿದ್ದು ರೈತರು ಬ್ಯಾಂಕ್ ಗಳಲ್ಲಿ ಸಾಲ ಪಡೆದು ಏನು ಮಾಡಲಾಗದ ಪರಿಸ್ಥಿತಿಯಲ್ಲಿ ಇರ್ತಾರೆ. ಹೀಗಾಗಿ ಅಂತ ರೈತರಿಗೆ ಸ್ವಲ್ಪ ಒತ್ತಡ ಹಾಗೂ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ತೆಗೆದುಕೊಂಡಿರ್ತಕ್ಕಂತ ರೈತರು ಅಸಲನ್ನು ಅಲ್ಪಾವಧಿ ಮತ್ತು ಅವಧಿ ಅಥವಾ ದೀರ್ಘಾವಧಿ ಯಾವುದೇ ಒಂದು ಹಂತದಲ್ಲಿ ಸಾಲವನ್ನು ಮರುಪಾವತಿ ಮಾಡಿದ್ದೆ ಆದಲ್ಲಿ ಬಡ್ಡಿಯನ್ನು ಮಂದ ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಅಂದ್ರೆ ತಮ್ಮ ಸಾಲದ ಮರುಪಾವತಿಯನ್ನು ಮಾಡಲು ಇಚ್ಛಿಸುವ ರೈತರಿಗೆ ಆ ಸಾಲದ ಮೇಲಿನ ಬಡ್ಡಿಯನ್ನ ಬಡ್ಡಿಯ ಹೊರೆಯನ್ನ ಇಳಿಸುವ ಪ್ರಯತ್ನವನ್ನು ಇದೀಗ ರಾಜ್ಯ ಸರ್ಕಾರ ಮಾಡ್ತಾ ಇದೆ ಅಂತ ಹೇಳಬಹುದು. ಹೀಗಾಗಿ ಯಾರೆಲ್ಲಾ ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲವನ್ನು ತೆಗೆದುಕೊಂಡು ಬಡ್ಡಿಯನ್ನು ಕಟ್ಟಲಾಗದೆ ಸಾಲವನ್ನು ಮರುಪಾವತಿ ಮಾಡಲಾಗದೆ ಪರದಾಡುವಂಥವರು ಸ್ವಲ್ಪ ನಿರಾಳರಾಗಬಹುದು ಅಂತ ಹೇಳಬಹುದು. ಯಾಕಂದ್ರೆ ಸಾಲದ ಮೇಲಿನ ಬಡ್ಡಿಯ ಹೊರೆಯನ್ನು ರಾಜ್ಯ ಸರ್ಕಾರ ಇದೀಗ ಇಳಿಸಿದ್ದು ಇದರ ಸದುಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬಹುದು.
ಇದನ್ನೂ ಓದಿ: ಎಲೆಕ್ಟ್ರಿಕಲ್ ವಾಹನಗಳ ಮೇಲೆ ಸಿಗಲಿದೆ ಭರ್ಜರಿ ಡಿಸ್ಕೌಂಟ್; ಎಥರ್ ಎಲೆಕ್ಟ್ರಿಕಲ್ ಸ್ಕೂಟರ್ ಮೇಲೆ 24ಸಾವಿರ ರಿಯಾಯಿತಿ
ಇದನ್ನೂ ಓದಿ: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 1-10ನೇ ತರಗತಿ ಮಕ್ಕಳ ಬ್ಯಾಗ್ ಹೊರೆ ತಪ್ಪಿಸಲು ಮಹತ್ವದ ಕ್ರಮ