ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ. ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ 6ನೇ ತರಗತಿಗೆ ಅಡ್ಮಿಷನ್ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿನ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2023 ಆಗಿದ್ದು, 5ನೇ ತರಗತಿ ಪಾಸ್ ಮಾಡಿರುವ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ದಾಖಲಿಸಲು ಡಿಸೆಂಬರ್ 31ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆ ತೆಗೆದುಕೊಳ್ಳಬಹುದು.
ಅರ್ಜಿಯನ್ನು ಆಯಯಾ ಜಿಲ್ಲೆಯಲ್ಲಿನ ಹತ್ತಿರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದು. ಇನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ, ಶ್ರೀ ನಾರಾಯಣ ಗುರು ವಸತಿ ಶಾಲೆ, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಸೇರಿ ಒಟ್ಟು 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ ಅನ್ನೋ ಸಂಪೂರ್ಣ ಮಾಹಿತಿಯನ್ನ ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸೋದು ಹೇಗೆ?
ಇನ್ನು ವಸತಿ ಶಾಲೆಗಳಲಿ ಪ್ರವೇಶಾತಿ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಅನ್ನೋದನ್ನ ನೋಡ್ತಾ ಹೋಗೋಣ. ಮೊದಲಿಗೆ ಪೋಷಕರು ತಮ್ಮ ಮಕ್ಕಳ ಪರವಾಗಿ ನಿಮ್ಮ ಹತ್ತಿರದ KREIS ಅಧೀನದ ಯಾವುದೇ ಶಾಲಾ/ಕಾಲೇಜುಗಳ ಪ್ರಾಂಶುಪಾಲರ ಮೂಲಕ ಉಚಿತವಾಗಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವ್ಯಾವು ಅನ್ನೋದನ್ನ ನೋಡೋದಾದ್ರೆ, ಮೊದಲಿಗೆ Student Achievement Tracking System (SATS) ಸಂಖ್ಯೆ, ಇತ್ತೀಚಿನ ಭಾವಚಿತ್ರ, ಮೀಸಲಾತಿ ಕೋರಿದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜೊತೆಗೆ ವಿಶೇಷ ಪ್ರವರ್ಗಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನ ಒದಗಿಸಬೇಕು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪಟ್ಟಿ ನೋಡೋದಾದ್ರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ, ಶ್ರೀ ನಾರಾಯಣ ಗುರು ವಸತಿ ಶಾಲೆ, ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಸೇರಿ ಒಟ್ಟು 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಇದೇ ಡಿಸೆಂಬರ್ 31ರ ಒಳಗಾಗಿ ಹತ್ತಿರದ KREIS ವಸತಿ ಶಾಲೆಗಳಿಗೆ ತೆರಳಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24X7 ಸಹಾಯವಾಣಿ ಸಂಖ್ಯೆ 9482300400 ಕ್ಕೆ ಕರೆ ಮಾಡಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಅಲ್ಪಸಂಖ್ಯಾತರ ನವೋದಯ ಮಾದರಿ ಶಾಲೆಯಲ್ಲಿ ಶೇ. 75% ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ. 25 % ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಹೀಗಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ. ಗಳಿಗಿಂತ ಮೀರಿರಬಾರದು. ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1.00 ಲಕ್ಷ ರೂ. ಗಳಿಗಿಂತ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ. ಗಳಿಗಿಂತ ಮೀರಿರಬಾರದು, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ. ಗಳಿಗಿಂತ ಮೀರಿರಬಾರದು.
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಏನೆಲ್ಲಾ ದಾಖಲೆಗಳು ಬೇಕು?
ಇನ್ನು ಅಂಗವಿಕಲ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಶೇ. 04% ಕಾಯ್ದಿರಿಸಲಾಗಿದೆ. ದುರ್ಬಲ ವರ್ಗ, ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ ಶೇ. 05% ಕಾಯ್ದಿರಿಸಲಾಗಿದೆ. ಮುಖ್ಯವಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೀಗಾಗಿ ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅದಕ್ಕಾಗಿ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರುಗಳು ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಉಚಿತ ಸೇವೆ ಪಡೆಯಲು ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಅಥವಾ ನವೋದಯ ಮಾದರಿ ವಸತಿ ಶಾಲೆಗಳ ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಇಲ್ಲವೇ ಮೊದಲೇ ನೀಡಿರುವ ನಂಬರ್ ಗೂ ಕರೆ ಮಾಡಬಹುದು.
ಇದನ್ನೂ ಓದಿ: ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ