ಫೆಬ್ರವರಿ 20 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಮಾಡುವ ಬಗ್ಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಈಗ ಮತ್ತೆ ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳ ಪಟ್ಟಿ ಇಲ್ಲಿದೆ.
ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳು:-
1) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಅಂದರೆ ಅಭ್ಯರ್ಥಿಯು ಕರ್ನಾಟಕ ಪರೀಕ್ಷಾ ಮಂಡಳಿ ಅಥವಾ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು.
ಮುಖ್ಯ ಅಂಶ:- ಈ ಆದೇಶವನ್ನು ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಹಾಗೂ ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021 ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018 ಅನುಸಾರವಾಗಿ ಈ ನಿಯಮವನ್ನು ಜಾರಿಗೊಳಿಸಿದೆ.
2) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಎಂದರೆ ಎನ್.ಐ.ಓ.ಎಸ್ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ ಅಥವಾ ಹೆಚ್.ಎಸ್.ಸಿ. ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
3) ಮೇಲಿನ ಎರಡು ಶೈಕ್ಷಣಿಕ ಅರ್ಹತೆಯೂ ಇಲ್ಲದೆ ಇದ್ದರೆ ಅಭ್ಯರ್ಥಿಯು ಮೂರು ವರ್ಷಗಳ ಡಿಪ್ಲೋಮಾ ಇಲ್ಲವೇ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಅಂದರೆ ಜೆ.ಓ.ಸಿ ಅಥವಾ ಜೆ.ಓ.ಡಿ.ಸಿ ಅಥವಾ ಜೆ.ಎಲ್.ಡಿ.ಸಿ ಪೂರ್ಣಗೊಳಿಸಿರಬೇಕು.
ಸೂಚನೆ:- ಐಟಿಐ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಎನ್ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ದೂರಕಲಿಕೆ ಶಿಕ್ಷಣ ಇಲ್ಲವೇ ಪದವಿ ಪೂರ್ವ ಮಂಡಳಿಯು ನಡೆಸುವ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣ ಆಗಿದ್ದಲ್ಲಿ ಮಾತ್ರವೇ ಪಿಯುಸಿ ಗೆ ತತ್ಸಮಾನವೆಂದು ಪರಿಗಣನೆ ಮಾಡಲಾಗುತ್ತದೆ.
ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿ ಸಲ್ಲಿಸಿ
ಸರ್ಕಾರದ ಆದೇಶದಲ್ಲಿ ಇರುವ ಮುಖ್ಯ ಅಂಶ :-
ಸರ್ಕಾರದ 19.02.2024 ರ ಆದೇಶದ ಅನುಸಾರವಾಗಿ ಒಬ್ಬ ಅಭ್ಯರ್ಥಿಯು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಬೇಕು ಎಂಬ ನಿಯಮ ಇದ್ದಿತ್ತು. ಹಾಗೂ ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಕಲ್ಯಾಣ-ಕರ್ನಾಟಕ ಮತ್ತು ಉಳಿದ ಮೂಲ ವೃಂದಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅವರ ಆದ್ಯತೆಯನ್ನು ಸಹ ನಮೂದಿಸಬೇಕು ಎಂಬುದನ್ನು ತಿಳಿಸಿತ್ತು. ಹಿಂದೆ ತಿಳಿಸಿದ ನಿಯಮದಂತೆ ಕಲ್ಯಾಣ-ಕರ್ನಾಟಕ ಮತ್ತು ಉಳಿದ ಮೂಲ ವೃಂದಕ್ಕೆ ಅಭ್ಯರ್ಥಿಗಳ ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗಿದೆ ಎಂಬುದನ್ನು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಯದಾಗಿದೆ.
ನೂತನ ಆದೇಶದ ಅನುಸಾರವಾಗಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಇನ್ನು ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಲು ಸಾಧ್ಯವಿದೆ. ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ಅರ್ಹತೆಗಳನ್ನು ಮತ್ತು ನಿಯಮಗಳನ್ನು ಪಾಲಿಸುವುದು ಮುಖ್ಯವಾಗಿದೆ. ಜೊತೆಗೆ ಅರ್ಜಿ ಸಲ್ಲಿಸುವಾಗ ನೀವು ಯಾವ ಜಿಲ್ಲೆಗೆ ಅರ್ಜಿ ಸಲ್ಲಿಸುತ್ತಾ ಇದ್ದೀರಿ ಎಂಬ ಸ್ಪಷ್ಟ ಅರಿವು ನಿಮಗೆ ಇರಲಿ.
ತಿದ್ದುಪಡಿ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: LIC ಯ ಹೊಸ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 12000 ರೂಪಾಯಿ ಪಿಂಚಣಿ ಪಡೆಯಬಹುದು.