ಸರ್ಕಾರಿ ಹುದ್ದೆಯಲ್ಲಿ ಕೆಲಸ ಮಾಡುವ ಕನಸು ಹೊತ್ತಿರುವವರಿಗೆ ಈಗ ಕಂದಾಯ ಇಲಾಖೆಯು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಯ ಬಗ್ಗೆ ಪೂರ್ಣ ವಿವರಗಳು ಈ ಲೇಖನದಲ್ಲಿ ಓದಿ.
ಹುದ್ದೆಯ ಬಗ್ಗೆ ವಿವರಗಳು :-
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 1,000 ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇಲ್ಲವೇ ಸಿಬಿಎಸ್ಸಿ ಅಥವಾ ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಇಲ್ಲವೇ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ ಮುಗಿಸೊರಬೇಕು. ಮೂರು ವರ್ಷಗಳ ಡಿಪ್ಲೋಮಾ ಇಲ್ಲವೇ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು.
ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಥವಾ ಪ್ರವರ್ಗ 2ಎ ಅಥವಾ 2ಬಿ ಅಥವಾ 3ಎ ಅಥವಾ 3ಬಿ ಅಭ್ಯರ್ಥಿಗಳು 750 ರೂಪಾಯಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ ಅಥವಾ ಪಂಗಡ ಅಥವಾ ಪ್ರವರ್ಗ -1 ಹಾಗೂ ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂಪಾಯಿಗಳನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ ಹೇಗೆ?
ಗ್ರಾಮಾಂತರ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಜಿಲ್ಲಾಧಿಕಾರಿ ನೇತೃತ್ವದ ಮೆರಿಟ್ ಪಟ್ಟಿಯ ಆಧಾರದ ಮೇಲೆ ನಡೆಯುತ್ತಿತ್ತು. ಈಗ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಹೆಚ್ಚು ಪಾರದರ್ಶಕ ಮತ್ತು ನ್ಯಾಯಯುತವಾದ ಆಯ್ಕೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕವಾಗುವಂತೆ ಘೋಷಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ಪರೀಕ್ಷೆಯನ್ನು ಆಫ್ಲೈನ್-ಓಎಂಆರ್ನಲ್ಲಿ ನಡೆಸಲಾಗುತ್ತದೆ. ಒಟ್ಟು 200 ಅಂಕಗಳಿಗೆ 2 ಪತ್ರಿಕೆಗಳು ಇರುತ್ತವೆ. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಕನಿಷ್ಠ 50 ಅಂಕಗಳನ್ನು ಗಳಿಸಬೇಕು ಎಂಬ ನಿಯಮ ಇದೆ. ಪರೀಕ್ಷೆಗಳು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭಾರ್ಥಿಗಳನ್ನು ಕೌನ್ಸೆಲಿಂಗ್ ಮಾಡಲಾಗುತ್ತದೆ. ನಂತರ ಇಲಾಖೆಯ ಸ್ಥಳ ಮೀಸಲಾತಿ ನಿಯಮದ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ :-
- ಪರಿಕ್ಷೆ ದಿನಾಂಕ :- ಪರೀಕ್ಷೆಯನ್ನು ನಡೆಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.
- ಕನಿಷ್ಠ ಅಂಕ: ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ ಪಡಿಸಲಾಗಿದೆ.
- ನಕಾರಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕಗಳನ್ನು ಕಡಿತ ಗೊಳಿಸಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
- ಭಾಷೆ: ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿರುತ್ತದೆ.
ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ: ಗಡುವು ಮುಗಿದರೂ HSRP ನಂಬರ್ ಪ್ಲೇಟ್ ಹಾಕದೆ ಇದ್ದರೆ ದಂಡ ಕಟ್ಟಲೇ ಬೇಕು.