ಇದೇ ಬರುವ ಜೂನ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಾಗಿ ಆಹಾರ ಇಲಾಖೆಯು ತಿಳಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿಯೂ ಈಗಾಗಲೇ ಇಲಾಖೆ ತಿಳಿಯದೆ. ಈಗ ಇಲಾಖೆಯು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಕೆಲವು ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ.
ಸೈಬರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದರೆ ಮಾನ್ಯವಾಗುವುದಿಲ್ಲ:- ಹಲವು ಬಾರಿ ಸೈಬರ್ ಕೇಂದ್ರಗಳು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಹೆಚ್ಚಿನ ಹಣ ಕೇಳುತ್ತಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಸೈಬರ್ ಕೇಂದ್ರಗಳಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾನ್ಯ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಗ್ರಾಮ್ ಒನ್ ಕೇಂದ್ರ ಅಥವಾ ಬಾಪೂಜಿ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿದರೆ ಮಾತ್ರ ನಿಮ್ಮ ಅರ್ಜಿ ಮಾನ್ಯವಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಇನ್ನೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೇವಲ ಕರ್ನಾಟಕದ ರಾಜ್ಯದ ನಿವಾಸಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ಜಾಣತನ ahara.kar.nic.in ಕ್ಕೆ ತೆರಳಿ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬೇಕು. ನೀವು ಅರ್ಜಿ ಸಲ್ಲಿಸಿದ ರೇಷನ್ ಕಾರ್ಡ್ ನ ಅಪ್ಡೇಟ್ ಗಳು ಸಹ ಇದೆ ವೆಬ್ಸೈಟ್ ನಲ್ಲಿ ಲಭ್ಯವಿದೆ. ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವಾಗ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಬಿ ಪಿ ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೊಸ ಬಿ ಪಿ ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀಡಬೇಕಾದ ದಾಖಲೆಗಳು :- ಬಿ ಪಿ ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಹಳೆ ರೇಷನ್ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಹಾಗೂ ಮನೆಯ ಎಲ್ಲ ಸದಸ್ಯರ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ವಯಸ್ಸಿನ ಪುರಾವೆಯನ್ನು ನೀಡಬೇಕು ಹಾಗೂ ವಿಳಾಸದ ಪುರಾವೆ ಹಾಗೂ ಕುಟುಂಬದ ಯಜಮಾನಿ ವಿವರಗಳನ್ನು ನೀಡಬೇಕು. ಹಾಗೂ ಬಿ ಪಿ ಎಲ್ ಕಾರ್ಡ್ ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ.
ಹೊಸ ಎ ಪಿ ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ನೀಡಬೇಕಾದ ದಾಖಲೆಗಳು :- ಎ ಪಿ ಎಲ್ ಕಾರ್ಡ್ ಅರ್ಜಿ ಸಲ್ಲಿಸಲು ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಹಳೆ ರೇಷನ್ ಕಾರ್ಡ್, ಕುಟುಂಬ ಸದಸ್ಯರ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ವಯಸ್ಸಿನ ಪುರಾವೆ ನೀಡಿಬೇಕು ಹಾಗೂ ಕುಟುಂಬದ ಯಜಮಾನಿಯ ವಿವರಗಳನ್ನು ನೀಡಬೇಕಾಗುತ್ತದೆ.
ಇದನ್ನೂ ಓದಿ: 9% FD ಬಡ್ಡಿ ಆಫರ್! ಈ ಬ್ಯಾಂಕುಗಳಲ್ಲಿ ಉಳಿಸಿ ಲಕ್ಷಾಧಿಪತಿ ಆಗಿ!
ಅರ್ಜಿ ಶುಲ್ಕ ವಿವರ :-
ಎಲ್ಲ ವಿವರಗಳನ್ನು ಆನ್ಲೈನ್ ನಲ್ಲಿ ತುಂಬಿದ ನಂತರ ನೀವು ಯಾವುದೇ ರೀತಿಯ ಶುಲ್ಕ ಪಾವತಿಸುವ ಅಗತ್ಯ ಇಲ್ಲ. ನಿಮ್ಮ ರೇಷನ್ ಕಾರ್ಡ್ ವಿತರಣೆ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನೀಡಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸಲು ನೀವು ನಿಖರ ದಾಖಲೆಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಲು ಅವಕಾಶ ಇರುತ್ತದೆ. ಆದರೆ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತಪ್ಪಾದ ಮಾಹಿತಿಯನ್ನು ಸಲ್ಲಿಸಬಾರದು.
ಇದನ್ನೂ ಓದಿ: ATM ನಿಂದ ಒಂದು ತಿಂಗಳಿಗೆ ಎಷ್ಟು ಉಚಿತವಾಗಿ ಹಣ ತೆಗೆಯಬಹುದು?