ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯದ ಮಹಿಳೆಯರಿಗೆ ಒಂದಿಲ್ಲೊಂದು ಸಿಹಿ ಸುದ್ದಿ ಸಿಗ್ತಾನೆ ಇದೆ. ಉಚಿತ ಬಸ್ ಪ್ರಯಾಣ, ಮನೆಯೊಡತಿ ಖಾತೆಗೆ 2ಸಾವಿರ ಹಣ ಸೇರಿದಂತೆ ಗೃಹಜ್ಯೋತಿ ಯೋಜನೆಯಡಿಯಲ್ಲಿ ಪ್ರತಿ ಮನೆಗೆ 200ಯುನಿಟ್ ವಿದ್ಯುತ್ ಉಚಿತ ಹೀಗೆ ಒಂದಿಲ್ಲೊಂದು ಯೋಜನೆಯ ಮೂಲಕ ಮಹಿಳೆಯರ ಮನಸ್ಸು ಗೆಲ್ಲುವಲ್ಲಿ ಸಿದ್ದರಾಮಯ್ಯ ಸರ್ಕಾರ ಯಶಸ್ವಿಯಾಗ್ತಿದೆ. ಈ ಮಧ್ಯೆ ಶ್ರವಣ ಮಾಸದ ಮೊದಲ ಹಬ್ಬ ಹೆಂಗಳೆಯರ ನೆಚ್ಚಿನ ಹಬ್ಬ ವರಮಹಾಲಕ್ಷ್ಮಿ ಗೆ ಗೃಹಲಕ್ಷ್ಮಿಯರಿಗೆ ಮತ್ತೊಂದು ಗಿಫ್ಟ್ ನೀಡಲು ಮುಂದಾಗಿದೆ. ಹೌದು ರಾಜ್ಯದ ಜನರಿಗೆ 5ಗ್ಯಾರಂಟಿ ನೀಡಿವ ಮೂಲಕವೇ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ ಒಂದಾದ ನಂತರ ಒಂದರಂತೆ ಗ್ಯಾರಂಟಿ ಯೋಜನೆಗಳನ್ನ ಈಡೇರಿಸುತ್ತ ಬಂದಿದೆ. ಸದ್ಯ ಇದೀಗ ಮಹಿಳೆಯರಿಗೆ ಮತ್ತೊಂದು ಗ್ಯಾರಂಟಿ ಯೋಜನೆಯನ್ನ ನೀಡಲು ತೀರ್ಮಾನಿಸಿದ್ದು ಈ ಕುರಿತು ಸುತ್ತೋಲೆ ಹೊರಡಿಸಿ ಆದೇಶ ನೀಡಿದೆ.
ಇದನ್ನೂ ಓದಿ: ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?
ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿಗೆ ಬಂಪರ್ ಉಡುಗೊರೆ
ಹೌದು ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ ಮತ್ತು ಕುಂಕುಮ ನೀಡುವ ಕುರಿತು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾಗಿದೆ. ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀ ಕೃಪಾಕಟಾಕ್ಷವು ಲಭಿಸಲೆಂದು ಈ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಆದೇಶಿಸಲಾಗಿದೆ.
ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ ಇರಲಿದ್ದು, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲಿಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಈ ದಿನ ಮಹಿಳೆಯರು ಬಹಳ ಭಕ್ತಿಭಾವಗಳಿಂದ ಮನೆಯಲ್ಲಿ ಶುದ್ಧಿಯಾಗಿ ವರ ಮಹಾಲಕ್ಷ್ಮಿ ಪೂಜೆ ಮಾಡಿ, ದೇವಾಲಯಗಳಿಗೆ ದೇವರ ದರ್ಶನಾರ್ಥಿಯಾಗಿ ಬಂದು ಅರಿಶಿನ, ಕುಂಕುಮ, ಹೂವು ಮುಂತಾದ ಪ್ರಸಾದಗಳನ್ನು ಸ್ವೀಕರಿಸುತ್ತಾರೆ. ಹೀಗಾಗಿ ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರದಿಂದ ಇದೀಗ ಮಹಿಳೆಯರಿಗೆ ಸಂಪ್ರದಾಯಿಕ ಉಡುಗೊರೆ ಸಿಗಲಿದೆ.
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ, ಬಹಳ ಮಹತ್ವ ಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಪ್ರತಿ ವರ್ಷದ ಶಾವಣ ಮಾಸದ ಶುಕ್ಲಪಕ್ಷದ ಪೌರ್ಣಮಿಯ ಮೊದಲ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತ ಆಚರಿಸುವುದು ಪುರಾಣೋಕ್ತವಾಗಿದ್ದು, ಆ ದಿನ ಶ್ರೀವರ ಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಿ ಪ್ರಸಾದವನ್ನು ನೈವೇದ್ಯ ಮಾಡಿ ಪ್ರಸಾದವನ್ನು ಸ್ವೀಕರಿಸಿದಲ್ಲಿ, ಸಕಲ ಸೌಭಾಗ್ಯಗಳೂ, ಐಶ್ವರ್ಯ, ಚತುರ್ವಿದ ಫಲಗಳೂ, ಧನ ಧಾನ್ಯಾಧಿಗಳೂ ಲಭಿಸುತ್ತವೆ ಅನ್ನೋ ನಂಬಿಕೆ ಅನಾದಿ ಕಾಲದಿಂದಲೂ ಬೆಳೆದುಕೊಂಡು ಬಂದಿದೆ.
ಹೀಗಾಗಿ ಆಗಸ್ಟ್ 25, 2023ರ ಶುಕ್ರವಾರದಂದು ಬರುವ ವರ ಮಹಾಲಕ್ಷ್ಮೀ ವ್ರತದ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡುವುದು ಹಾಗೂ ಅದರ ವೆಚ್ಚವನ್ನು ಆಯಾಯ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಲು ತಿಳಿಸಲಾಗಿದೆ. ಹೀಗಾಗಿ ಪ್ರಸಾದ ರೂಪವಾದ ಅರಿಶಿಣ, ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ಲಕೋಟೆಯನ್ನು ತಯಾರಿಸಿಕೊಂಡು ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡಲಾಗುತ್ತದೆ ಅಂತ ಹೇಳಲಾಗ್ತಿದೆ. ಈ ಕುರಿತು ಸರ್ಕಾರವೇ ಅಧಿಸೂಚನೆ ಕೂಡ ಹೊರಡಿಸಿದೆ.
ಇದನ್ನೂ ಓದಿ: ಪತ್ನಿ, ಮಗುಗೆ ಗುಂಡು ಹಾರಿಸಿ ತಾನು ಸತ್ತ! ಅಮೇರಿಕಾದಲ್ಲಿ ಸ್ವಂತ ಮನೆಯಿದ್ರು ಯಾಕಿಗಾಯ್ತು!
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram