ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕ್ರಮಕ್ಕೆ ಚಾಲನೆ ನೀಡಿ ಫಲನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಿದರು.

WhatsApp Group Join Now
Telegram Group Join Now

ಇನ್ನು ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವ ಭರವಸೆ ನೀಡಿತ್ತು. ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ವಿತರಿಸಿ, ಉಳಿದಂತೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಐದು ಕೆಜಿ ಅಕ್ಕಿಗೆ ಒಟ್ಟು 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ. ಆದ್ರಿಗ ಇದರಲ್ಲೂ ಒಂದು ಹೊಸ ಬದಲಾವಣೆ ತಂದಿದ್ದು. ಕಾರ್ಡಿ ನ ಯಜಮಾನರು ಇಲ್ಲದಿದ್ರೂ ಎರಡನೇ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಪ್ಲಾನ್ ಮಾಡ್ತಿದ್ದು, ಶೀಘ್ರದಲ್ಲಿ ಯೋಜನೆಯಲ್ಲಿ ಹೊಸ ಬದಲಾವಣೆ ತರಲು ಸರ್ಕಾರ ಮುಂದಾಗಿದೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಕಾಂಗ್ರೆಸ್ ಸರ್ಕಾರದಿಂದ ಜಾರಿಯಾಗಲಿದೆ ಹೊಸ ಪ್ಲಾನ್

ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದ್ರೇ ಅಕ್ಕಿ ಸಿಗದ ಕಾರಣ 5 ಕೆಜಿ ಅಕ್ಕಿ ಬದಲಾಗಿ ಹಣವನ್ನು ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಈಗ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯಜಮಾನರು ಇಲ್ಲದೇ ಇದ್ರೂ, 2ನೇ ವ್ಯಕ್ತಿ ಖಾತೆಗೆ ಹಣ ಜಮಾಗೂ ಸರ್ಕಾರ ಚಿಂತನೆ ನಡೆಸಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆಯ ನಡೆಸಿದರು.

ಈ ಸಭೆಯ ಬಳಿಕ ಮಾತನಾಡಿದಂತ ಅವರು, ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈವರೆಗೆ ಒಟ್ಟು 2,444.11 ಕೋಟಿ ರೂಪಾಯಿ ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನು 7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಿದ್ದಾರೆ, ಅಲ್ದೇ ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಭರವಸೆಗಳನ್ನ ಉಳಿಸಿಕೊಳ್ಳಲು ಸಾಕಷ್ಟು ಸರ್ಕಸ್ ನಡೆಸ್ತಿದ್ದು, ಆದ್ರೆ ಯೋಜನೆಯ ಲಾಭ ಎಲ್ಲರಿಗೂ ತಲುಪುತ್ತಿಲ್ಲ ಹೀಗಾಗಿ ಮುಂಬರುವ ದಿನಗಳಲ್ಲಿ ಯೋಜನೆಯ ಲಾಭ ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳನ್ನ, ಹೊಸ ಹೊಸ ರೂಲ್ಸ್ ಗಳನ್ನ ಜಾರಿ ಮಾಡ್ತಾಲೆ ಇದೆ ಆದ್ರೆ ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೋ ಗೊತ್ತಿಲ್ಲ.

ಇದನ್ನೂ ಓದಿ: ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ಇದನ್ನೂ ಓದಿ: 5 ಅತ್ಯುತ್ತಮ ಸ್ಮಾರ್ಟ್ ಟಿವಿ ಕೇವಲ 20 ಸಾವಿರ ರೂಪಾಯಿಗಳಿಗೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇಂದೇ ಖರೀದಿಸಿ. 

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram