2024-25 ನೇ ಸಾಲಿನ ವಸತಿ ಶಾಲೆಗಳಿಗೆ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Residential Schools

ರಾಜ್ಯದ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ಸಲುವಾಗಿ ವಸತಿ ಶಾಲೆಗಳು ಆರಂಭ ಆದವು. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ 123 ವಿವಿಧ ವಸತಿ ಶಾಲೆಗಳು ಇವೆ. ಪ್ರತಿ ಮಗುವೂ ಶಿಕ್ಷಣದಿಂದ ವಂಚಿತ ಆಗಬಾರದು ಎಂದು ಸರ್ಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಉಚಿತ ವಸತಿ ಶಾಲೆಗಳು ಸಹ ಒಂದು. ಈಗಾಗಲೇ ಈ ಯೋಜನೆ ಹಲವಾರು ವರ್ಷಗಳಿಂದ ಜಾರಿಯಲ್ಲಿ ಇದೆ. ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಒಳ್ಳೆಯ ಊಟ ಹಾಗೂ ವಸತಿ ನೀಡುತ್ತಾರೆ. 

WhatsApp Group Join Now
Telegram Group Join Now

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 29 ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, 90 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 04 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಇವೆ. ಈಗ 2024-25 ನೇ ಸಾಲಿನಲ್ಲಿ ಆರನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.. ಆಸಕ್ತರು16-02-2024 ರಿಂದ 15-03-2024 ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಇರುವ ನಿಯಮಗಳು :-

  • ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್‌, ಸಿಖ್ ಮತ್ತು ಪಾರ್ಸಿ ಜನಾಂಗದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಗೆ ಗೆ ತೇರ್ಗಡೆ ಹೊಂದಿರಬೇಕು. ಅಂದರೆ ಈಗ 5ನೇ ತರಗತಿಯಲ್ಲಿ ಓದುತ್ತಿರಬೇಕು.
  • ಅರ್ಜಿ ಸಲ್ಲಿಸುವ ಕುಟುಂಬದ ಆದಾಯದ ನಿಯಮಗಳು ಹೀಗಿವೆ:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾದರೆ ವಾರ್ಷಿಕ ಆದಾಯ ಗರಿಷ್ಠ 2,50,000 ರೂಪಾಯಿ, ಹಿಂದುಳಿದ ವರ್ಗ ಪ್ರವರ್ಗ-1 ಸೇರಿದ ಕುಟುಂಬದ ವಾರ್ಷಿಕ ಆದಾಯ 2,50,000 ರೂಪಾಯಿ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ 2A, 2B, 3A, 3B ಸಮುದಾಯದ ಕುಟುಂಬದ ಆದಾಯ 1,00,000 ರೂಪಾಯಿ ಇರಬೇಕು.
  • ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ನೀಡಬೇಕು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಹೋಗಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು ಇಲ್ಲವೇ ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಬಾಪೂಜಿ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :-  ಅರ್ಜಿ ಸಲ್ಲಿಸುವಾಗ ಯಾವುದೇ ಅನುಮಾನ ಇದ್ದಲ್ಲಿ ಅಥವಾ ಅರ್ಜಿ ಸಲ್ಲಿಸಲು ಯಾವುದೇ ಸಹಾಯ ಬೇಕಾದಲ್ಲಿ ಅಧಿಕೃತ ವೆಬ್ಸೈಟ್ https://dom.karnataka.gov.in ಗೆ ಭೇಟಿನೀಡಿ. ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 8277799999, 080-22535902 ಕರೆಮಾಡಿ. ಇಲ್ಲವೇ ನಿಮ್ಮ ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಅಥವಾ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಅಥವಾ ಡಾ// ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನ ಸಂಪರ್ಕಿಸಿ.. 

ಪ್ರವೇಶಾತಿ ಅಧಿಸೂಚನೆ ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: 25,000ಗಳ ರಿಯಾಯಿತಿಯನ್ನು ಹೊಂದಿರುವ Ola electric ಸ್ಕೂಟರ್ ನ ವಿವಿಧ ರೂಪಾಂತರದ ಬೆಲೆ ಎಷ್ಟು?

ಇದನ್ನೂ ಓದಿ: ಸ್ವಂತ ಮನೆ ಇಲ್ಲದವರಿಗೆ ಸಿಹಿಸುದ್ದಿ ರಾಜ್ಯ ಸರ್ಕಾರದಿಂದ; ಬಡವರಿಗೆ ಸಿಗಲಿದೆ 36 ಸಾವಿರ ಮನೆ ಹಂಚಿಕೆ ಭಾಗ್ಯ..