ನಾಳೆಯಿಂದಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

village administrative officers recruitment

1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಮಾಡುವ ಬಗ್ಗೆ ಈ ಹಿಂದೆ ಕಂದಾಯ ಸಚಿವರು ತಿಳಿಸಿದ್ದರು. ಅವರ ಮಾತಿನಂತೆ ಈಗ ಮಾರ್ಚ್ 4 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಇಲಾಖೆಯಿಂದ ನೀಡಲಾದ ಸೂಚನೆ ಗಳನ್ನು ಗಮನಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯು ತಿಳಿಸಿದೆ. ಈಗಾಗಲೇ ಅಧಿಸೂಚನೆಯಲ್ಲಿ ಕೆಲವು ಅಂಶಗಳನ್ನು ತಿಳಿಸಿದ್ದರು. ಈಗ ಅಧಿಸೂಚನೆಯ ಅನುಸಾರವಾಗಿ ನಾಳೆ ಬೆಳಗ್ಗೆ 11 ಗಂಟೆಯಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯು ಸುತ್ತೋಲೆ ಹೊರಡಿಸಿದೆ.

WhatsApp Group Join Now
Telegram Group Join Now

ಒಟ್ಟು 1,000 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರೂಪಾಯಿಯಿಂದ 42,000 ರೂಪಾಯಿ ಸಂಬಳ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಕೆಲವು ನಿಯಮಗಳನ್ನು ಇಲಾಖೆಯು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ನಿಯಮಗಳು:-

ಅಭ್ಯರ್ಥಿಯ ಆಯ್ಕೆಯನ್ನು ನೇಮಕಾತಿ ಪ್ರಾಧಿಕಾರ ಹೇಳಿರುವ ನಿಯಮಗಳ ಅನುಸಾರ ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಲಾಖೆಯು ನಡೆಸುತ್ತದೆ. ಹುದ್ದೆಗೆ ಆಯ್ಕೆ ಆಗಲೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣ ಆಗಬೇಕು ಜೊತೆಗೆ ಇಲಾಖೆಯು ತಿಳಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮುಖ್ಯವಾಗಿ ಒಬ್ಬ ಅಭ್ಯರ್ಥಿಯು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಿಮಗೆ ಯಾವ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದೆ ಎಂಬುದನ್ನು ಅರಿತು ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಅರ್ಜಿ ಸಲ್ಲಿಸುವವರು ವಿದ್ಯಾರ್ಹತೆ :- ಪಿಯುಸಿ ಮತ್ತು ತತ್ಸಮಾನ ಅಭ್ಯರ್ಥಿಯ( ಸಿಬಿಎಸ್ ಸಿ , ಐಸಿ ಎಸ್ ಸಿ) ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅಥವಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ಉನ್ನತ ಶಿಕ್ಷಣ ಕೋರ್ಸ್ ಪೂರ್ಣಗೊಂಡಿರಬೇಕು. ಇಲ್ಲವೇ ಎಸೆಸೆಲ್ಸಿ ನಂತರ ಮೂರು ವರುಷದ ಡಿಪ್ಲೊಮಾ ಕೋರ್ಸ್ ಮುಗಿಸಿರಬೇಕು.

ಅರ್ಜಿ ಸಲ್ಲಿಸುವ ದಿನಾಂಕ:- ಅಭ್ಯರ್ಥಿಗಳು ಮಾರ್ಚ್ 04-2024 ರಿಂದ ಏಪ್ರಿಲ್ -03-2024 ರ ವರೆಗೆ ಅರ್ಜಿ ಸಲ್ಲಿಸಬಹುದು. ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಏಪ್ರಿಲ್-06-2024.

ಗರಿಷ್ಠ ವಯೋಮಿತಿ ವಿವರ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2A, 2B, 3B, ಅಭ್ಯರ್ಥಿಗಳಿಗೆ 38 ವರ್ಷ ಹಾಗೂ SC/ST ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ಮಿತಿ ಇದೆ.

ಅರ್ಜಿ ಶುಲ್ಕ:- ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A, 2B, 3B ಅಭ್ಯರ್ಥಿಗಳಿಗೆ 750 ರೂಪಾಯಿ, ಹಾಗೂ SC/ST ಹಾಗೂ ಪ್ರವರ್ಗ-1, ಮಾಜಿ ಸೈನಿಕ ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ. 

ಇದನ್ನೂ ಓದಿ: SBI ನ ವಾರ್ಷಿಕ ಠೇವಣಿಯಲ್ಲಿ ಹೂಡಿಕೆ ಮಾಡಿ ಪ್ರತಿ ತಿಂಗಳು ಆದಾಯ ಪಡೆಯಿರಿ

ಅರ್ಜಿ ಸಲ್ಲಿಸುವ ವಿಧಾನ :-

ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ಅಧಿಕೃತ ವೆಬ್ಸೈಟ್ kea.kar.nic ಗೆ ಮೊದಲು ಭೇಟಿನೀಡಿ, ಮುಖಪುಟದಲ್ಲಿ ಗ್ರಾಮ ಅಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಎಂಬ Notification ಕ್ಲಿಕ್ ಮಾಡಬೇಕು. ಅದರಲ್ಲಿ ನಿಮಗೆ ಜಿಲ್ಲಾವಾರು ಏಷ್ಟು ಹುದ್ದೆಗಳ ಲಭ್ಯತೆ ಇದೆ. ಅರ್ಜಿ ನಮೂನೆಯಲ್ಲಿ ನಿಮ್ಮ ಪೂರ್ಣ ಹೆಸರು, ಅಧಿಕೃತ ವಿಳಾಸ, ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಹಾಗೂ ನೀವು ಯಾವ ಜಿಲ್ಲೆ ಗೆ ಅರ್ಜಿ ಹಾಕುತ್ತಾ ಇದ್ದೀರಿ ಎಂಬ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ನಂತರ ನಿಮ್ಮ ವಿದ್ಯಾರ್ಹತೆಯ ಸರ್ಟಿಫಿಕೇಟ್ ಸ್ಕ್ಯಾನ್ ಮಾಡಿ ಭರ್ತಿ ಮಾಡಬೇಕು. ನಂತರ ಆನ್ಲೈನ್ ಮೂಲಕ ಶುಲ್ಕವನ್ನು ಭರ್ತಿ ಮಾಡಬೇಕು. ನೀವು ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ನಿಮ್ಮ ಮೊಬೈಲ್ ಸಂಖ್ಯೆಗೆ ಬರಲಿದೆ ಹಾಗೂ ನೀವು ಅರ್ಜಿ ಪರೀಕ್ಷಾ ಪ್ರವೇಶ ಪತ್ರವೂ ನಿಮಗೆ ಇದೆ ವೆಬ್ಸೈಟ್ ನಲ್ಲಿ ಸಿಗುತ್ತದೆ.

ಇದನ್ನೂ ಓದಿ: ಯಶಸ್ವಿನಿ ಯೋಜನೆಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ