ರಾಜ್ಯ ಸರ್ಕಾರದಿಂದ ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್; ಆಯುಷ್ಮಾನ್ ಕಾರ್ಡ್ ಗೆ ಸಿಗ್ತಿದೆ ಹೊಸ ರೂಪ,ಈ ಕಾರ್ಡ್ ಇದ್ರೆ ಏನೆಲ್ಲಾ ಪ್ರಯೋಜನ ಸಿಗುತ್ತದೆ?

ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡುದಾರರಿಗೆ ಸರ್ಕಾರ ಒಂದಿಲ್ಲೊಂದು ಸೌಲಭ್ಯ ಸೌಕರ್ಯ ಗಳನ್ನ ನೀಡುತ್ತಲೇ ಇರುತ್ತೆ, ಅದರಲ್ಲೂ ಮುಖ್ಯವಾಗಿ ಆರೋಗ್ಯದ ವಿಚಾರದಲ್ಲಿ ಈಗಾಗ್ಲೇ ಸಾಕಷ್ಟು ಸೌಲಭ್ಯಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಇದ್ದು, ಅದರ ಮುಂದುವರೆದ ಭಾಗ ಎಂಬಂತೆ ದೇಶದ ನಾನಾ ಕಡೆ ಆಯುಸ್ಮಾನ್ ಕಾರ್ಡ್ ಅಡಿ ಚಿಕಿತ್ಸೆ ದೊರಕಿಸುವ ಹೊಸ ಪ್ರಯತ್ನಕ್ಕೆ ಸರ್ಕಾರ ಕೈ ಹಾಕಿದೆ. ಹೌದು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನ, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ಹೆಸರಿಸಲಾಗಿದೆ.

WhatsApp Group Join Now
Telegram Group Join Now

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದಿದ್ದಾರೆ. ಹಾಗಾದ್ರೆ ಹೊಸ ಕಾರ್ಡ್ ನ ಪ್ರಯೋಜನ ಯಾವಾಗಿನಿಂದ ಸಿಗುತ್ತದೆ? ಯಾರಲ್ಲ ಕಾರ್ಡಿನಲಾಭ ಪಡೆಯಬಹುದು ಸಂಪೂರ್ಣ ಮಾಹಿತಿಯನ್ನ ನೋಡೋಣ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಹೊಸ ಪಡಿತರ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದವರಿಗೆ ಶಾಕ್; ಪಡಿತರ ಚೀಟಿ ಸಿಗುತ್ತೆ ಅಂದುಕೊಂಡಿದ್ದವರಿಗೆ ಇದ್ಯಾ ಗುಡ್ ನ್ಯೂಸ್

ಕಾರ್ಡ್ ನಡಿ ದೇಶದ ಎಲ್ಲ ಕಡೆ ಸಿಗಲಿದೆ ಚಿಕಿತ್ಸೆ

ಇನ್ನು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ.‌ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ.

ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲೂ ವಿಶೇಷ ಎಂಬಂತೆ ಎಪಿಎಲ್‌ ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಎಪಿಎಲ್‌ ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡ್‌ದಾರರು 70% ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ 30% ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಅಂತ ಹೇಳಲಾಗ್ತಿದೆ.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಅರೋಗ್ಯ ಸಚಿವರು, ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ.‌ ರಾಜ್ಯದ 5.09 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ವಿತರಿಸುವ ಗುರಿಯನ್ನ ನಾವು ಹೊಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ನೂತನ ಕಾರ್ಡ್‌ಗಳನ್ನ ಇಂದು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ ಬಿಪಿಎಲ್ ಕಾರ್ಡುದಾರರು ₹5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ₹1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ. ಯೋಜನೆಗೆ ಕೇಂದ್ರದಿಂದ ಶೇ. 34ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಶೇ.66ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿದ್ದೇವೆ ಅಂತ ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ಆಯುಷ್ಮಾನ್‌ ಭಾರತ್- ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿದ್ದು, ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಇನ್ನು ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ ಅಂತ ಹೇಳಿದೆ.