ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ 14 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇವೆ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ..

ballari Gram Panchayat Recruitment 2024

ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯಿತಿಯಿಂದ ಲೈಬ್ರರಿ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದೆ. ಲೈಬ್ರರಿ ಸೂಪರ್ವೈಸರ್ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ. ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈಗಲೇ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಯ ಪೂರ್ಣ ವಿವರಗಳನ್ನು ತಿಳಿಯೋಣ.

WhatsApp Group Join Now
Telegram Group Join Now

ಹುದ್ದೆಯ ಬಗ್ಗೆ ಪೂರ್ಣ ವಿವರ:- ಇದು ಬಳ್ಳಾರಿ ಗ್ರಾಮ ಪಂಚಾಯಿತಿಯ ಪ್ರಕಟಣೆ ಆಗಿದ್ದು, ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಿರಬೇಕು. ಹಾಗೂ ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಫೆಬ್ರವರಿ 28, 2024ಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ 35 ವರ್ಷಕ್ಕೂ ಹೆಚ್ಚಿನ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಮೀಸಲಾತಿ ಇರುವ ಅಭ್ಯರ್ಥಿಗೆ ವಯಸ್ಸಿನ ಸಡಿಲಿಕೆ ಇದೆ. SC/ST ಅಥವಾ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ-2A/2B/3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ PWD ಅಥವಾ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ಇದೆ. ತಿಂಗಳ ಸಂಬಳ 15,196 ರೂಪಾಯಿ. ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28 2024. ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜಾಬ್ ಸೆಲೆಕ್ಷನ್ ವಿವರ:ಅಭ್ಯರ್ಥಿಯ ಆಯ್ಕೆಯೂ ಅಭ್ಯರ್ಥಿಯ ಮೆರಿಟ್ ಅಂದರೆ ಜಾತಿ ಹಾಗೂ ಅಂಕಗಳ ಆಧಾರದ ಮೇಲೆ ಹಾಗೂ ಎಲ್ಲಾ ಅಂಕಪಟ್ಟಿ ಹಾಗೂ ಎಕ್ಸ್ಪೀರಿಯೆನ್ಸ್ ಆಧಾರದ ಮೇಲೆ ನಿರ್ಧಾರ ಆಗುತ್ತದೆ. 

ಅಪ್ಲಿಕೇಶನ್ ಹಾಕುವ ವಿಧಾನ:-

ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಿಮ್ಮ ಎಸೆಸೆಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಮತ್ತು ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಮುಗಿಸಿರುವ ಸರ್ಟಿಫಿಕೇಟ್ ಹಾಗೂ ನಿಮ್ಮ ಜಾತಿ ಪ್ರಮಾಣಪತ್ರ ( ಜಾತಿ ಪ್ರಮಾಣ ಪತ್ರ ಇದ್ದಲ್ಲಿ ) ಹಾಗೂ ನಿಮಗೆ ಯಾವುದೇ ಅನುಭವ ಇದ್ದರೆ ಅದರ ಬಗ್ಗೆ ಮಾಹಿತಿ, ನಿಮ್ಮ ಆಧಾರ್ ಕಾರ್ಡ್ ಮತ್ತು ವಿಳಾಸದ ಪುರಾವೆಯನ್ನು ನೀಡಬೇಕು. ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬಹುದು ಇಲ್ಲವೇ ನಿಮ್ಮ ಹತ್ತಿರದ ಗ್ರಾಮ ಓನ್ ಕೇಂದ್ರ ಬಾಪೂಜಿ ಕೇಂದ್ರ ಬೆಂಗಳೂರು ಓನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅಥವಾ ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಿ” ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಎಂಬ ನೋಟಿಫಿಕೇಶನ್ ” ಗೆ ಹೋಗಿ ಅರ್ಜಿ ಸಲ್ಲಿಸಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪೂರ್ಣ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಸೂಚನೆಗಳು:-

  • ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.. ಅದೇ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಅರ್ಹ ಅಭ್ಯರ್ಥಿ ಇಲ್ಲದಿದ್ದರೆ ನಂತರ ತಾಲೂಕ ಪಂಚಾಯತಿ ವ್ಯಾಪ್ತಿಯಲ್ಲಿನ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
  • ಎಲ್ಲಾ ದಾಖಲೆಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ನೀಡಬೇಕು.
  • ಖಾಲಿ ಹುದ್ದೆ ಮತ್ತು ಇತರೆ ವಿವರಗಳಿಗಾಗಿ ಅಧಿಸೂಚನೆ ಪೂರ್ಣ ಓದಬೇಕು.

ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಒಂದು ಕೋಟಿ ಮನೆಗಳಿಗೆ 300 ಯುನಿಟ್ ಉಚಿತ ವಿದ್ಯುತ್, ಪ್ರಧಾನಿ ಘೋಷಣೆ

ಇದನ್ನೂ ಓದಿ: ರೀಲ್ಸ್ ಮಾಡುವವರಿಗೆ ಸರ್ಕಾರದಿಂದ ಸಿಹಿಸುದ್ದಿ; 50 ಸಾವಿರ ನಗದು ಬಹುಮಾನ ಗೆಲ್ಲಿ