ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ಗೆ ಮತ್ತೊಮ್ಮೆ ದಾಖಲೆ ಸಲ್ಲಿಸಲು ಹತ್ತು ದಿನಗಳ ಅವಕಾಶ ನೀಡಿದೆ.

BBMP Free Laptop Scheme

2022-23 ನೇ ಸಾಲಿನಲ್ಲಿ ಬಿಬಿಎಂಪಿ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಉಚಿತವಾಗಿ laptop ನೀಡುವ ಬಗ್ಗೆ ಅರ್ಜಿ ಆಹ್ವಾನ ಮಾಡಿತ್ತು. ಆಗ ಅರ್ಜಿ ಸಲ್ಲಿಸಿದವರಿಗೆ ಸೂಕ್ತ ದಾಖಲೆಗಳೊಂದಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ತಿಳಿಸಿದೆ.

WhatsApp Group Join Now
Telegram Group Join Now

ಕಲ್ಯಾಣ ವಿಭಾಗದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ಹೇಳಿರುವುದು ಏನೆಂದರೆ, ಈಗಾಗಲೇ ಒಮ್ಮೆ ಆನ್ಲೈನ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕೆಲವು ದಾಖಲೆಗಳನ್ನು ನೀಡಿರುವುದಿಲ್ಲ. ಅಂತಹ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳನ್ನು ಮತ್ತೊಮ್ಮೆ ಆನ್ಲೈನ್ ಮೂಲಕ ಸಲ್ಲಿಸಬೇಕು. ಅವಧಿಗೂ ಮೊದಲು ದಾಖಲೆಗಳನ್ನು ಅಪ್ಲೋಡ್ ಮಾಡದ ವಿದ್ಯಾರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ತಿಳಿಸಿದ್ದಾರೆ. ಹಳೆಯ ಅರ್ಜಿಗಳ ತಿದ್ದುಪಡಿಯ ಜೊತೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸಹ ಆನ್ಲೈನ್ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಯನ್ನು ಸಲ್ಲಿಸಲು ಫೆಬ್ರುವರಿ 19 2019 ರಿಂದ ಫೆಬ್ರುವರಿ 29 2019 ರ ವರೆಗೆ ಸಮಯಾವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈಗಾಗಲೇ ಅರ್ಜಿ ಸಲ್ಲಿಸಿರುವವರು ದಾಖಲೆಗಳನ್ನು ಅಪ್ಲೋಡ್ ಮಾಡುವ ಹಂತಗಳು

  • ಸ್ಟೆಪ್ 1- ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಇಲ್ಲಿ ಕ್ಲಿಕ್ ಮಾಡಿ
  • ಸ್ಟೆಪ್ 2- “ಉಚಿತ ಲ್ಯಾಪ್‌ಟಾಪ್ ಯೋಜನೆ” ಟ್ಯಾಬ್ ಕ್ಲಿಕ್ ಮಾಡಿ.
  • ಸ್ಟೆಪ್ 3- “ಅರ್ಜಿ ಸ್ಥಿತಿ ಮತ್ತು ತಿದ್ದುಪಡಿ” ಆಪ್ಷನ್ ಕ್ಲಿಕ್ ಮಾಡಿ.
  • ಸ್ಟೆಪ್ 4- ನೀವು ಈ ಹಿಂದೆ ಅರ್ಜಿ ಸಲ್ಲಿಸುವಾಗ ನೀಡಿದ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸಿ.
  • ಸ್ಟೆಪ್ 5- “ಸಲ್ಲಿಸು” ಕ್ಲಿಕ್ ಮಾಡಿ.
  • ಸ್ಟೆಪ್6- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಯಾವ ಯಾವ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು: ವಿದ್ಯಾರ್ಥಿಯು ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್, ವಿದ್ಯಾರ್ಥಿ ವೇತನ ಪತ್ರ, ವಾಸಸ್ಥಳ ದೃಢೀಕರಣ ಪತ್ರ, , ಜಾತಿ ಮತ್ತು ಆದಾಯ ಪ್ರಮಾಣಪತ್ರ ಗಳನ್ನೂ ನೀಡಬೇಕು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) 2023ನೇ ಬಜೆಟ್‌ ಈ ಘೋಷಣೆ ಮಾಡಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 47 ಶಾಲೆಗಳು ಇವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕು ಎಂದು ಬಿಬಿಎಂಪಿ 152.61 ಕೋಟಿ ರೂಪಾಯಿ ಅನುದಾನವನ್ನು ಘೋಷಣೆ ಮಾಡಿತ್ತು. ಅದರಲ್ಲಿ ಸುಮಾರು 25 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟ್ಯಾಪ್ ನೀಡಲು ಮೀಸಲು ಇಟ್ಟಿದ್ದೇವೆ ಎಂಬುದಾಗಿ ಹೇಳಿತ್ತು. ಬಿಬಿಎಂಪಿ ಅಧೀನದಲ್ಲಿರುವ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಪೈಕಿ ಒಟ್ಟು 10,000 ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡಲಾಗುವುದು. ಇದರಿಂದ ಬಡ ಮಕ್ಕಳು ಲ್ಯಾಪ್‌ಟಾಪ್ ಪಡೆದುಕೊಂಡು ಇಂದಿನ ಡಿಜಿಟಲ್ ಶಿಕ್ಷಣವನ್ನು ಪಡೆಯಬಹುದಾಗಿದೆ.

ಬಿಬಿಎಂಪಿ 2023-24ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿತ್ತು ಅದರಂತೆಯೇ ಈಗ ಮತ್ತೊಮ್ಮೆ ದಾಖಲೆಗಳನ್ನು ಅಪ್ಲೋಡ್ ಮಾಡಲು ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ನಂತರ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಸಧ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ನಿರೀಕ್ಷೆ ಇದೆ. ಬಡತನದ ರೇಖೆಗಿಂತ ಕೆಳಗಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ ನೀಡಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.

ಇದನ್ನೂ ಓದಿ: ರೈತರಿಗೆ 50% ಸಬ್ಸಿಡಿ ದರದಲ್ಲಿ ಟ್ರ್ಯಾಕ್ಟರ್ ನೀಡುವ ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಸತ್ಯಾಂಶ ತಿಳಿಸಿದ ಸರ್ಕಾರ.. 

ಇದನ್ನೂ ಓದಿ: ಹಿರಿಯರಿಗೆ ಗುಡ್ ನ್ಯೂಸ್, SBI bank ನಲ್ಲಿ 10 ಲಕ್ಷ ಹೂಡಿಕೆ ಮಾಡಿದರೆ 21ಲಕ್ಷ ಆದಾಯವನ್ನು ಪಡೆಯಬಹುದು