ಬೆಳೆ ಪರಿಹಾರ 2000 ಹಣ ಪಡೆಯಲು ಏನ್ ಮಾಡಬೇಕು? ಯಾವೆಲ್ಲಾ ದಾಖಲೆಗಳು ಬೇಕು?

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

WhatsApp Group Join Now
Telegram Group Join Now

ಇನ್ನು ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಆದ್ರೆ ಇವತ್ತಿನವರೆಗೂ ಸಮಯ ಕೊಟ್ಟಿಲ್ಲ, ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ.
ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ. ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ಬೆಳೆ ಪರಿಹಾರ ಪಡೆಯಬೇಕು ಅಂದ್ರೆ ಏನ್ ಮಾಡಬೇಕು ಅರ್ಜಿ ಸಲ್ಲಿಸೋದು ಎಲ್ಲಿ ಯಾವಾಗ ಎಲ್ಲವನ್ನ ಸಂಪೂರ್ಣವಾಗಿ ನೋಡೋಣ., ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬೆಳೆ ಪರಿಹಾರ ಹಣ ಪಡೆಯಲು ಈ ಕೆಲಸ ಕಡ್ಡಾಯ

ಮೊದಲಿಗೆ ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ(FID) ಮಾಡಿಸಲೇಬೇಕು. ರೈತರು ಸರಕಾರದ ಯಾವುದೇ ಯೋಜನೆಯಡಿ ಸವಲತ್ತು ಮತ್ತು ಬ್ಯಾಂಕ್‌ ಸಾಲ ಪಡೆಯಲು ಸದರಿ ಎಫ್‌ಐಡಿಯು ಕಡ್ಡಾಯವಾಗಿದೆ. ಹೀಗಾಗಿ ಎಲ್ಲಾ ರೈತರೂ ತಪ್ಪದೇ ಮಾಡಿಸಿಕೊಳ್ಳುವಂತೆ ಹಾಗೂ ತಮ್ಮ ಎಲ್ಲಾ ಜಮೀನುಗಳ ವಿವರವನ್ನು ಎಫ್‌ಐಡಿಯಲ್ಲಿ ಸಲ್ಲಿಸಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು ಹೌದು ಸರಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ ಪೋಟ್ಸ್ ಐಡಿಗೆ ಸೇರಿಸಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರ ಧನವನ್ನು ನೇರವಾಗಿ ಡಿಬಿಟಿ ಮೂಲಕ ವಿತರಿಸಲಾಗುತ್ತದೆ.

ಆದ್ದರಿಂದ, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್‌ಐಡಿಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್‌ಐಡಿಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ಕಂದಾಯ, ಪಶು ಸಂಗೋಪನಾ, ರೇಷ್ಮೆ ಇಲಾಖೆ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬೇಕು. ಇನ್ನು ಎಫ್‌ಐಡಿಯನ್ನು ಮಾಡಿಸಲು ರೈತರ ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಪುಸ್ತಕದ ಪ್ರತಿ, ತಮ್ಮ ಹೆಸರಿನಲ್ಲಿರುವ ಜಮೀನುಗಳ ಪಹಣಿ ಪ್ರತಿಗಳು, ತಮ್ಮ ಮೊಬೈಲ್‌ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ, ಪಾಸ್‌ ಪೋರ್ಟ್‌ ಅಳತೆಯ ಒಂದು ಭಾವಚಿತ್ರ ಸೇರಿದಂತೆ ದಾಖಲಾತಿಗಳು ಕಡ್ಡಾಯವಾಗಿದ್ದು, ರೈತರು ಸದರಿ ದಾಖಲಾತಿಗಳನ್ನು ತಪ್ಪದೇ ನೀಡಬೇಕು. ಇನ್ನು ರೈತರು ಸರಕಾರದ ಯಾವುದೇ ಯೋಜನೆಯಡಿ ಸವಲತ್ತು ಮತ್ತು ಬ್ಯಾಂಕ್‌ ಸಾಲ ಪಡೆಯಲು ಸದರಿ ಎಫ್‌ಐಡಿಯು ಕಡ್ಡಾಯವಾಗಿದೆ. ಎಲ್ಲಾ ರೈತರೂ ತಪ್ಪದೇ ಮಾಡಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಖ್ಯವಾಗಿ ಬೆಳೆ ಹಾನಿಯಾದ ರೈತರು ತಮ್ಮ ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಗಳು ಪರಿಹಾರ ತಂತ್ರಾಂಶದಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುತ್ತಾರೆ. ಈ ಅರ್ಜಿಗನುಸಾರವಾಗಿ ರೈತರಿಗೆ ಪರಿಹಾರ ಹಣ ಜಮೆ ಮಾಡಲಾಗುತ್ತದೆ. ಇದಕ್ಕಾಗಿ ರೈತರ ಆಧಾರ್ ಕಾರ್ಡ್ ಬೇಕಾಗುತ್ತದೆ, ಮತ್ತು ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಬೇಕಾಗುತ್ತದೆ. ಅರ್ಜಿಯಲ್ಲಿ ಎಷ್ಟು ಎಕರೆ ಜಮೀನು ಹಾಳಾಗಿದೆ ಎಂಬುದನ್ನು ನಮೂದಿಸಬೇಕು. ಆಗ ಬೆಳೆಪರಿಹಾರದ ಹಣ ನಿಗಧಿ ಪಡಿಸಲು ಸಹಕಾರಿಯಾಗುತ್ತದೆ. ಇನ್ನು ಅರ್ಜಿ ಸಲ್ಲಿಸಿದ ನಂತರ ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ ಆದ್ರೆ ಅಧಿಕೃತ ವೆಬ್ಸೈಟ್ ಗೆ ಹೋಗಿ ಅಲ್ಲಿ ಲಿಂಕ್ ಮೇಲೆ ಕ್ಲಿಕ್ ಮಾಡುದ್ರೆ ಪರಿಹಾರ ಹಣ ಸಂದಾಯ ವರದಿ ಓಪನ್ ಆಗುತ್ತದೆ ಅಲ್ಲಿ ನಿಮಗೆ ಸ್ಟೇಟಸ್ ಚೆಕ್ ಮಾಡುವ ಎರಡು ಆಯ್ಕೆಗಳು ಕಾಣಿಸುತ್ತವೆ.

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram

ಬೆಳೆ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಹೌದು, ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಇವೆರಡು ಆಯ್ಕೆಗಳ ಮೂಲಕ ಸ್ಟೇಟಸ್ ಚೆಕ್ ಮಾಡಬಹುದು. ನೀವು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Select calamity type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ ವರ್ಷವನ್ನ ನಮೂದಿಸಿ ಕೆಳಗಡೆ ನಿಮ್ಮ ಆಧಾರ್ ನಂಬರ್ ಹಾಕಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಇದಾದ ನಂತರ ವಿವರಗಳ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕ್ರಮ ಸಂಖ್ಯೆ, ಜಿಲ್ಲೆಯ ಹೆಸರು, ಬ್ಯಾಂಕಿನ ಹೆಸರು, ಮೊತ್ತ, ಖಾತೆದಾರರ ಹೆಸರು, ಬ್ಯಾಂಕ್ ಅಕೌಂಟ್ ನಂಬರ್, ಹಣ ಸಂದಾಯ ಸ್ಥಿತಿ, ಸಂದಾಯ ದಿನಾಂಕ ಕಾಣಿಸುತ್ತದೆ. ಅದರ ಕೆಳಗಡೆ ಆಧಾರ್ ನಂಬರ್, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಬೆಳೆಯ ಹೆಸರು, ಬೆಳೆಯ ವಿಧ ಹಾಗೂ ಎಷ್ಟು ಎಕರೆಗೆ ಜಮೆ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ. ಹೀಗಾಗಿ ನೀವು ಒಮ್ಮೆ ಅಧಿಕೃತ ವೆಬ್ಸೈಟ್ ಗೆ ಹೋಗಿ ಚೆಕ್ ಮಾಡಿ ನೋಡಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬರ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು ಯಾವುವು?