ಸಾಕಷ್ಟು ದಿನಗಳಿಂದ ವಿದ್ಯಾರ್ಥಿಗಳಿಗೆ ತಲೆನೋವಾಗಿದ್ದ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ಹೌದು ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂಪಾಯಿಗಳಿಂದ 8000 ರೂಪಾಯಿಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಇನ್ನು ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಅಂತ ತಿಳಿಸಿದ್ದು, ಈ ಕುರಿತಂತೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೊಸ ವರ್ಷಕ್ಕೆ ಗೌರವ ಧನ ಏರಿಕೆಯ ಗುಡ್ ನ್ಯೂಸ್
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು. ಅಲ್ದೇ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂಪಾಯಿಗಳಿಂದ 8000 ರೂಪಾಯಿಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ. ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂಪಾಯಿ, 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂಪಾಯಿ, 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂಪಾಯಿ ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂಪಾಯಿಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಅಂತ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಮುಂದುವರೆದು ವಿಷಯ ತಿಳಿಸಿರುವ ಸಿದ್ದರಾಮಯ್ಯ ಅವ್ರು, ಇದರ ಜೊತೆಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂಪಾಯಿ ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು.
ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ ಬರ ಪರಿಹಾರ; 105 ಕೋಟಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ