ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ರಾಜ್ಯದಲ್ಲಿ ಜಾರಿಯಿರುವ 4ಯೋಜನೆಗಳ ಬಗ್ಗೆ ಸಭೆ ನಡೆಸ ಲಾಯಿತು.

WhatsApp Group Join Now
Telegram Group Join Now

ಯೋಜನೆಗಳ ಅನುಷ್ಠಾನ ಅವುಗಳ ಜಾರಿ ಮತ್ತು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಹಿಸುತ್ತಿರುವ ಕ್ರಮ ಹಾಗೂ ಯೋಜನೆಯಲ್ಲಿ ಆಗ್ತಿರುವ ತೊಂದರೆಗಳನ್ನ ನಿವಾರಿಸಿ ಯೋಜನೆಯ ಲಾಭ ಇಲ್ಲ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೆ ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳನ್ನ ತಲುಪಬೇಕು ಅದರಲ್ಲೂ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಲ್ಲಗಿರುವ ಎಲ್ಲಾ ತೊಂದರೆ ನಿವಾರಣೆಯಾಗಿ ಪ್ರತಿಯೊಬ್ಬರ ಖಾತೆಗೂ ಡಿಸೆಂಬರ್ 31ರ ಒಳಗಾಗಿ ಹಣ ಜಮೆ ಆಗಬೇಕು ಅಂತ ಸೂಚನೆ ಕೊಟ್ಟಿದ್ದಾರೆ.

ಮೊದಲಿಗೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಹೌದು ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ

ಇನ್ನು ನಂತರದಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡ್​ದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ. ಇನ್ನುಳಿದಂತೆ 7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತು ಹಾಗೂ ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸಿಎ ಸೂಚಿಸಿದ್ದಾರೆ.

ಇನ್ನು ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2900 ಕೋಟಿ ರೂ. ಯೋಜನೆಯ ವೆಚ್ಚ ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಇನ್ನು ರಾಜ್ಯದ ಬಹುಚರ್ಚಿತ ಯೋಜನೆ ಗೃಹಲಕ್ಷ್ಮಿ ಯೋಜನೆ, ಹೌದು ಈ ಯೋಜನೆಯಲ್ಲಿ ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದ್ದು, ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ.

ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕ್​ ಗೆ ಕರೆದೊಯ್ದು ಸಮಸ್ಯೆ ಬಗೆಹರಿಸುತ್ತಿದ್ದಾರೆ. ಹಾಗೆ ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಂಡು ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರೀ ಪಡಿಸೋದ್ರಾ ಜೊತೆಗೆ, ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್‌ ಆಯೋಜಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಒಟ್ಟಿನಲ್ಲಿ ಮುಂಬರುವ ಲೋಕಾಸಭಾ ಚುನಾವಣಾ ನಿಟ್ಟಿನಲ್ಲಿ ಸಿದ್ದರಾಮಯ್ಯ ಎಲ್ಲ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೂ ಮುಂದಿನ ದಿನಗಳಲ್ಲಿ ಯಾವ ಯೋಜನೆಗಳು ಎಷ್ಟು ಯಶಸ್ವಿ ಆಗುತ್ತೋ ಕಾದು ನೋಡಬೇಕು.

ಇದನ್ನೂ ಓದಿ: ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದ ಅರ್ಜಿ ಆರಂಭ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram