75ಲಕ್ಷ ಮನೆಗಳಿಗೆ ಉಚಿತ LPG ಗ್ಯಾಸ್! ಕೇಂದ್ರ ಸರ್ಕಾರದಿಂದ ಹೊರಬಂತು ಮತ್ತೊಂದು ಗುಡ್ ನ್ಯೂಸ್.

ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. 75 ಲಕ್ಷ ಕುಟುಂಬಗಳಿಗೆ ಫ್ರೀ LPG ಕನೆಕ್ಷನ್ ಘೋಷಣೆಯಾಗಿದೆ. ಹೌದು ಸಚಿವ ಸಂಪುಟ ಸಭೆಯಲ್ಲಿ, ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ. ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಲಾಗಿದೆ. ಇನ್ನು 2016ರಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿಯನ್ನೂ ನೀಡಲಾಗುತ್ತಿದೆ.

WhatsApp Group Join Now
Telegram Group Join Now

ಈಗ ಉಜ್ವಲ ಯೋಜನೆ ಅನ್ವಯ ದೇಶದ 75 ಲಕ್ಷ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಹೆಚ್ಚಿನ ಹಣ ವಿನಿಯೋಗಿಸಲು ತೀರ್ಮಾನಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಇಷ್ಟು ಮನೆಗಳಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸುವುದು ಕೇಂದ್ರದ ಗುರಿಯಾಗಿದೆ. ಹೌದು ಕೇಂದ್ರ ಸರಕಾರ ಈಗಾಗಲೇ ಅಡುಗೆ ಅನಿಲ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆಯನ್ನು ಕಡಿಮೆ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ ರಿಲೀಸ್; ಮೊದಲನೇ ಕಂತಿನ ಹಣವೇ ಬಂದಿಲ್ಲ ಅನ್ನೋರು ಏನ್ ಮಾಡಬೇಕು?

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಲೋಕ ಸಭಾ ಚುನಾವಣೆಗೆ ಶುರುವಾಗಿದ್ಯಾ ರಣತಂತ್ರ

ಹೌದು ಕೇವಲ ಉಚಿತ ಗ್ಯಾಸ್ ಸಂಪರ್ಕ ಮಾತ್ರವಲ್ಲ ಲೋಕಸಭಾ ಚನಾವನೆಯನ್ನ ಗಮನದಲಿಟ್ಟುಕೊಂಡು ಈಗಾಗ್ಲೇ ಸರ್ಕಾರ ಸಾಕಷ್ಟು ಸರ್ಕಸ್ ಮಾಡಲು ಶುರು ಮಾಡಿದೆ. ಅದರಲ್ಲಿ ದೇಶದ ರೈತರನ್ನ ಗಮನದಲ್ಲಿಟ್ಟುಕೊಂಡು ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಂತರ ರೈತರಿಗೆ ವಾರ್ಷಿಕವಾಗಿ ನೀಡುವ 6 ಸಾವಿರ ರೂಪಾಯಿ ಸಹಾಯಧನದ ಮೊತ್ತವನ್ನು ಹೆಚ್ಚಿಸುವುದು ಕೂಡ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಅಲ್ದೇ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ ಜತೆಗೆ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನೂ ಕಡಿಮೆ ಮಾಡಲಿದೆ ಎನ್ನಲಾಗುತ್ತಿದೆ.

ಹೌದು ಮುಂದಿನ ವರ್ಷ ನಡೆಯುವ ಲೋಕಸಭೆ ಹಾಗೂ ವರ್ಷಾಂತ್ಯದಲ್ಲಿ ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬೆಲೆ ಇಳಿಕೆಯ ತಂತ್ರ ರೂಪಿಸಿದೆ ಅಂತ ತಿಳಿದುಬಂದಿದೆ. ಅಲ್ದೇ ಇತ್ತೀಚಿನ ಚುನಾವಣೆಗಳಲ್ಲಿ ಬೆಲೆಯೇರಿಕೆಯು ಪ್ರಮುಖ ವಿಷಯವಾಗಿದೆ. ಹೀಗಾಗಿ ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ಸಿಲಿಂಡರ್‌ ಬೆಲೆ ಇಳಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಗ್ಯಾರಂಟಿಗಳನ್ನು ನೀಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರವು ಸಿಲಿಂಡರ್‌ ಬೆಲೆ ಇಳಿಕೆ ಮೂಲಕ ಜನರ ಅಸಮಾಧಾನ ತಣಿಸಲು ನಿರ್ಧಾರ ತೆಗೆದುಕೊಂಡಿದೆ. ಈಗ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಹಣ ಮೀಸಲಿಟ್ಟಿದೆ ಅಂತ ಹೇಳಲಾಗ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ನಿಮಗೆ ಯಾಕೆ ಹಣ ಬಂದಿಲ್ಲ? ಯಾವಾಗ ಬರುತ್ತೆ ಗೊತ್ತಾ?

ಇದನ್ನೂ ಓದಿ: ಬ್ರೇಕ್ ಅಪ್ ಮಾಡಿಕೊಂಡ ವರ್ಷ ವರುಣ್; ಸೋಶಿಯಲ್ ಮೀಡಿಯಾ ಸ್ಟಾರ್ ನಡುವೆ ಆಗಿದ್ದೇನು ಗೊತ್ತಾ?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram