ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅದಕ್ಕೆ ನಿಗಮದಿಂದ ಪಂಪ್‌ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ, ಅಂದ್ರೆ ಯೋಜನೆಗೆ ಸರ್ಕಾರವು ₹2.00ಲಕ್ಷ ನಿಗದಿಪಡಿಸಿದೆ. ಈ ಮೊತ್ತದಲ್ಲಿ ಕೊಳವೆ ಬಾವಿಯ ಕೊರೆಯುವಿಕೆ, ಪಂಪ್‌ಸೆಟ್ಸ್ ಸರಬರಾಜು ಮತ್ತು ವಿದ್ಯುದ್ದೀಕರಣದ ಠೇವಣಿ ಮೊತ್ತವನ್ನು ಭರಿಸಲಾಗುತ್ತದೆ.
ಸೌಲಭ್ಯ ಪಡೆಯ ಬಯಸುವ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು ಅಂದರೆ ಪ್ರತಿ ಫಲಾನುಭವಿಗೆ 1 ಎಕರೆ 20ಗುಂಟೆ ಎಕರೆಯಿಂದ 5 ಎಕರೆಯವರೆಗೆ ಕೃಷಿ ಜಮೀನಿರಬೇಕು ಮತ್ತು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು. ಇದೀಗ ಯೋಜನೆಯ ಲಾಭ ಪಡೆಯಲು ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಯಾವಾಗ ಅರ್ಜಿ ಸಲ್ಲಿಸಲು ಕೊನೆಯ ದಿನ? ಎಲ್ಲಿ ಅರ್ಜಿ ಸಲ್ಲಿಸಬೇಕು ಹೀಗೆ ಒಂದಷ್ಟು ಮಾಹಿತಿಯನ್ನ ನೋಡೋಣ ಬನ್ನಿ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಅರ್ಜಿ ಹಾಕುವ ಕೊನೆಯ ದಿನ? ಏನೆಲ್ಲಾ ದಾಖಲೆಗಳು ಬೇಕು?
ಹೌದು ಕರ್ನಾಟಕ ಸರ್ಕಾರವು ಎಲ್ಲಾ ರೈತರಿಗೆ ಸಹಾಯ ಮಾಡುವ ಮತ್ತು ನೀರಾವರಿ ಸೌಲಭ್ಯಗಳನ್ನು ಒದಗಿಸುವ ಅದ್ಭುತ ಯೋಜನೆ ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಪ್ರಾರಂಭಿಸಿದೆ. ಸರಕಾರ ಬೋರ್ ವೆಲ್, ಪಂಪ್ ಗಳನ್ನು ಕೊರೆಸಲಿದ್ದು, ಎಲ್ಲ ಫಲಾನುಭವಿಗಳಿಗೆ 1.50 ರಿಂದ 3.5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದು. ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇನ್ನು ಈ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಪಂಪ್ ಪೂರೈಕೆಯ ವಿದ್ಯುದ್ದೀಕರಣಕ್ಕೆ ₹ 500000 ಠೇವಣಿ ಮಾಡಲಾಗುತ್ತದೆ. ಈ ಯೋಜನೆಯಡಿ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ 4 ಲಕ್ಷ ಸಹಾಯಧನವನ್ನು ನೀಡುತ್ತದೆ. ಮತ್ತು ಗಂಗಾ ಕಲ್ಯಾಣ ಯೋಜನೆಗೆ ₹ 300000 ಮೊತ್ತವನ್ನು ರಾಜ್ಯ ಸರ್ಕಾರದಿಂದ ಇತರ ಜಿಲ್ಲೆಗಳಿಗೆ ಅನುದಾನವಾಗಿ ನೀಡಲಾಗುತ್ತದೆ.
ಎಲ್ಲಾ ಸಮುದಾಯಗಳ ಸಹಾಯಧನ ಬೇರೆ ಬೇರೆಯಾಗಿರುತ್ತದೆ. ಹಾಗಾಗಿ ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಅಲ್ದೇ ಆಸಕ್ತ ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಸಂಪರ್ಕಿಸಬಹುದು.
- ಇನ್ನು ಯೋಜನೆಯ ಲಾಭ ಪಡೆಯಲು ಅರ್ಜಿದಾರರು ತಮ್ಮ ಜಾತಿ ಪ್ರಮಾಣ ಪ್ರತಿ
- ಆದಾಯ ಪ್ರಮಾಣ ಪ್ರತಿ
- ಆಧಾರ್ ಕಾರ್ಡ್ ಪ್ರತಿ
- ಇತ್ತೀಚಿನ ಆರ್.ಟಿ.ಸಿ
- ಪಡಿತರ ಚೀಟಿ, ಹಾಗೂ ಚುನಾವಣಾ ಗುರುತಿನ ಚೀಟಿ, ಸಣ್ಣ / ಅತಿ ಸಣ್ಣ ಹಿಡುವಳಿದಾರ ದೃಢೀಕರಣ ಪತ್ರ.
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಭೂ ಕಂದಾಯ ಪಾವತಿಸಿದ ರಸೀದಿ, ಸ್ವಯಂ ಘೋಷಣಾ ಪತ್ರ ಅಂದ್ರೆ ಜಾಮೀನುದಾರರ ಸ್ವಯಂ ಘೋಷಣಾ ಪತ್ರ ಬೇಕಾಗುತ್ತದೆ.
ಇನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಸಮುದಾಯದವರು ಅರ್ಜಿಯನ್ನ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿಗಳಿಗೆ ನೇಮಕಾತಿ ಆರಂಭ; ಕೆಪಿಎಸ್ಇಯಲ್ಲಿ ಅಧಿಸೂಚನೆ 700ಕ್ಕು ಅಧಿಕ ಹುದ್ದೆಗಳಿಗೆ ನೇಮಕಾತಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram