Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್ ನ್ನಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಅಂತ ಹೇಳಲಾಗ್ತಿದೆ. ಇನ್ನು ಈ ಯೋಜನೆಗೆ ಸರ್ಕಾರ ಅನೇಕ ಷರತ್ತುಗಳನ್ನು ವಿಧಿಸಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ ಯಾವಾಗ? ಅರ್ಜಿ ಸಲ್ಲಿಸೋದು ಹೇಗೆ, ಎಲ್ಲಿ ಹೀಗೆ ಯೋಜನೆಯ ಸಂಪೂರ್ಣ ಮಾಹಿತಿಯನ್ನ ನೋಡೋಣ.
ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಯೋಜನೆ ಇದಾಗಿದ್ದು, ಇದೀಗ ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಇದೆ ತಿಂಗಳು ಅಂದ್ರೆ ಜುಲೈ 17 ಅಥವಾ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಹೌದು ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಆಗಸ್ಟ್ 16 ಅಥವಾ 17ರಂದು ಪ್ರತಿ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಹಾಕುತ್ತೇವೆ ಜೊತೆಗೆ ಇದೆ ತಿಂಗಳ 17ಇಲ್ಲವೇ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಂತ ಯೋಜನೆಯ ಕುರಿತು ವಿವರಿಸಿದ್ದಾರೆ.
ಹೌದು ಈ ನೂತನ ಗೃಹಲಕ್ಷ್ಮೀ ಯೋಜನೆಗೆ ಅನೇಕ ಷರತ್ತುಗಳನ್ನು ಸರ್ಕಾರ ವಿಧಿಸಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಫಲಾನುಭವಿಗಳ ನೋಂದಣಿ ಜುಲೈ 17 ಅಥವಾ ಜುಲೈ 19 ರಿಂದ ಆರಂಭವಾಗಲಿದೆ ಅಂತ ಹೇಳಲಾಗಿದ್ದು, ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಅಂತ ಯಾರನ್ನ ಗುರುತಿಸುತ್ತಾರೋ ಅಂತಹ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗಿದ್ರೆ ಯೋಜನೆಯ ಲಾಭ ಸಿಗೋದಿಲ್ಲ. ಇನ್ನು ರೇಷನ್ ಕಾರ್ಡ್ನಲ್ಲಿರುವಂತೆ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಅಂತ ಲಕ್ಷ್ಮೀ ಹೆಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಲ್ಲಿ ದೋಖ! ಫೋಟೋಶೂಟ್, ಟ್ಯಾಲೆಂಟ್ ಶೋ ಹೆಸರಲ್ಲಿ ಲಕ್ಷ ಲಕ್ಷ ಪಿಕಿರೋ ಐನಾತಿ
ಇನ್ನು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಈ ಯೋಜನೆಗೆ ಯಾರು ಅರ್ಹರು?
ಗೃಹಲಕ್ಷ್ಮೀ(Gruha Lakshmi) ಯೋಜನೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯವಾಗಿ ಇರಲೇಬೇಕು. ಇನ್ನು ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಮುಖ್ಯವಾಗಿ ಬೇಕಾಗುತ್ತದೆ. ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಈ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಅಂದ್ರೆ ಇಲ್ಲಿ ನೀವು ಅರ್ಜಿಯನ್ನ ಸಲ್ಲಿಸಿ ಮಂಜೂರಾತಿ ಪತ್ರವನ್ನ ಪಡೆದುಕೊಳ್ಳಬೇಕು. ನಂತರ ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನ ಕೊಡ್ತಾರೆ. ಹೌದು ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸುತ್ತಾರೆ. ಅಲ್ದೇ ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ಕೂಡ ರವಾನೆ ಮಾಡಲಾಗುತ್ತದೆ.ಇನ್ನು ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆಯಾಗಲಿದ್ದು, ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ಇನ್ನು ನೋಂದಣಿಗೆ ಅಂದ್ರೆ ಅರ್ಜಿ ಸಲಿಕೆಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಮಾಡ್ತೇವೆ ಅಂತ ತಿಳಿಸಿದ್ದಾರೆ.
ಇನ್ನು ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಹೇಳಲಾಗ್ತಿದ್ದು, ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಹಣವನ್ನು ಮಂಜೂರು ಮಾಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ಬಳಿಕ ಪರಿಶೀಲಿಸಲಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಜೊತೆಗೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ಅರ್ಹ ಫಲಾನುಭವಿಗಳಷ್ಟೇ ಯೋಜನೆಗೆ ಅರ್ಜಿ ಸಲ್ಲಿಸೋದು ಸೂಕ್ತ. ಇನ್ನು ಈಗಾಗ್ಲೇ ರಾಷ್ಟ್ರೀಯ ನಾಯಕರ ಜೊತೆ ಈ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿದ್ದು, ಈ ಸಮಯಕ್ಕೆ ಅಂದ್ರೆ ಜುಲೈ 17 ಸಂಜೆ 5 ಗಂಟೆಗೆ ರಾಷ್ಟ್ರೀಯ ನಾಯಕರು ಲಭ್ಯರಿದ್ರೆ ಯೋಜನೆ ಪ್ರಾರಂಭವಾಗುತ್ತದೆ. ಇಲ್ಲದಿದ್ದಲ್ಲಿ ಜುಲೈ 19 ರಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದಾರಂತೆ.
ಇದನ್ನೂ ಓದಿ: ಸರಿಗಮಪ ಖ್ಯಾತಿಯ ಅಶ್ವಿನ್ ಶರ್ಮ ಎಂಗೇಜ್ಮೆಂಟ್ ಸಂಭ್ರಮ. ನಿಶ್ಚಿತಾರ್ಥ ಸುಂದರ ಕ್ಷಣಗಳನ್ನ ಹಂಚಿಕೊಂಡ ಗಾಯಕ ಹೇಳಿದ್ದೇನು?
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram