ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ ಬರುತ್ತದೆ ಆದ್ರೆ ಕೆಲ ಗೃಹಿಣಿಯರಿಗೆ ಹಣ 2-3 ತಿಂಗಳಿನಿಂದ ಬಂದಿಲ್ಲ. ಇದಕ್ಕಾಗಿ ಸರ್ಕಾರ ಇದೀಗ ಹೊಸ ನಿರ್ಧಾರವನ್ನ ತೆಗೆದುಕೊಂಡಿದ್ದು ಹೊಸ ರೂಲ್ಸ್ ರೂಪಿಸಿದೆ. ಅ ನಿರ್ಧಾರ ಏನು ಯಾಕೆ ಅನ್ನೋದು ಬಹಳಷ್ಟು ಮುಖ್ಯವಾಗಿದ್ದು, ಇನ್ಮುಂದೆ ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೆ ಕೂಡ ಹಣ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಇನ್ಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಬಗೆ ಹರಿಸಿಲಿದ್ದಾರೆ. ಅಲ್ದೇ ಯೋಜನೆಗೆ ಸಂಬಂಧಪಟ್ಟಂತೆ , ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಯಾಗಿಲ್ಲ, ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಮುಂದಾಗಿದ್ದಾರೆ. ಹೀಗೆ ಗೃಹಲಕ್ಷ್ಮಿ ಯೋಜನೆಯ ಹಣ ಅವರ ಗಂಡನ ಖಾತೆಗೆ ಬರಲಿದೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಯಾವಾಗಿನಿಂದ ಜಾರಿಯಾಗಲಿದೆ ನಿಯಮ? ಮಾಡಬೇಕಿರೋದು ಏನು?
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಹಾಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ, ಈ ಮೂಲಕ ಯೋಜನೆಯನ್ನು ನೂರು ಪ್ರತಿಶತದಷ್ಟು ಗೃಹಲಕ್ಷ್ಮಿಯರಿಗೆ ತಲುಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರದ ಈ ಮಹತ್ವದ ನಿರ್ಧಾರದಿಂದ ಸಾಕಷ್ಟು ಮಹಿಳೆಯರ ಖಾತೆಗೆ ಮಾತ್ರವಲ್ಲದೆ ಮನೆಯಲ್ಲಿ ಯಜಮಾನನ ಖಾತೆಗೂ ಹಣ ವರ್ಗಾವಣೆ ಆಗಬಹುದು. ರಾಜ್ಯ ಕಾಂಗ್ರೆಸ್ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿರುವ ಬಗ್ಗೆ ಹೆಚ್. ಕೆ. ಪಾಟೀಲ್ ಮಾಹಿತಿ ನೀಡಿದ್ದರು.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸುಮಾರು 1.27 ಕೋಟಿ ಪಡಿತರ ಕಾರ್ಡ್ ಹೊಂದಿರುವವರಾಗಿದ್ದು ಅದರಲ್ಲಿ ಸುಮಾರು 7.67 ಲಕ್ಷ ಜನರು ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಲ್ಲಿ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಬದಲು ಪ್ರತಿ ಕೆಜಿಗೆ 34 ರೂಪಾಯಿಗಳಂತೆ 170ಗಳನ್ನು ಫಲಾನುಭವಿ ಮನೆಯ ಯಜಮಾನನ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ ಸಾಕಷ್ಟು ತಾಂತ್ರಿಕ ದೋಷಗಳು ಹಾಗೂ ಬ್ಯಾಂಕ್ ಖಾತೆಗೆ ಈ-ಕೆವೈಸಿ ಆಗದೆ ಇರುವ ಕಾರಣ ಹಲವು ಕುಟುಂಬದವರು ರಾಜ್ಯ ಸರ್ಕಾರದಿಂದ ಸಿಗುವ ಹಣ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ, ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರ ಖಾತೆಗೆ ಹಣ ಬರಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಅನ್ನಭಾಗ್ಯ ಯೋಜನೆಯಲ್ಲಿ ಮಾತ್ರವಲ್ಲದೆ ಗೃಹಲಕ್ಷ್ಮಿ ಯೋಜನೆಯಲ್ಲಿಯೂ ಕೂಡ ತಾಂತ್ರಿಕ ದೋಷಗಳಿಂದಾಗಿ ಇನ್ನೂ ನಾಲ್ಕರಿಂದ ಐದು ಲಕ್ಷ ಮಹಿಳೆಯರ ಖಾತೆಗೆ ಒಂದೇ ಒಂದು ಕಂತಿನ ಹಣವು ಕೂಡ ಸಂದಾಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಮನೆಯ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಮನೆಯ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಕುಟುಂಬದ ಮೊದಲ ಯಜಮಾನ ಅಲ್ಲದೇ ಇದ್ದರೆ ಎರಡನೆಯ ಸದಸ್ಯರ ಖಾತೆಗೆ ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುವಂತೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನಿಮ್ಮ ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಎರಡನೆಯ ಹಿರಿಯ ವ್ಯಕ್ತಿ ಯಾರು ಎಂಬುದನ್ನು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು, ಒಂದು ವೇಳೆ ಎರಡನೇ ಸದಸ್ಯ ಹಿರಿಯ ವ್ಯಕ್ತಿ ಆಗಿರದೆ ಇದ್ದರೆ ಮೂರನೇ ವ್ಯಕ್ತಿ ಹಿರಿಯ ಸದಸ್ಯರಾಗಿದ್ದರೆ ಅದೇ ಮೂರನೇ ಖಾತೆಗೆ ಹಣ ವರ್ಗಾವಣೆ ಆಗುತ್ತದೆ. ಅಂದರೆ ಮನೆಯ ಯಜಮಾನನ ನಂತರದ ಹಿರಿಯ ವ್ಯಕ್ತಿಗೆ ಹಣ ವರ್ಗಾವಣೆ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಹಾಗಾಗಿ ಸದ್ಯದಲ್ಲಿಯೇ ಮನೆಯ ಯಜಮಾನನ ಖಾತೆಗೆ ಹಣ ಬಾರದೆ ಇದ್ದರೆ ತಕ್ಷಣ ಮನೆಯ ಎರಡನೇ ಹಿರಿಯ ಸದಸ್ಯನ ಖಾತೆಯನ್ನು ಚೆಕ್ ಮಾಡಿ ಅದಕ್ಕೆ ಹಣ ಸಂದಾಯವಾಗಿರುವ ಸಾಧ್ಯತೆ ಇರುತ್ತದೆ. ಇನ್ನು ಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿ ಪ್ರತಿಯೊಬ್ಬರ ಖಾತೆಗೂ ಹಣ ಬರುವಂತೆ ಮಾಡುತ್ತಾರೆ ಎಂದು ಕೂಡ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ: SSLC ಪಾಸ್ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ; ಕೇಂದ್ರದಲ್ಲಿ ಖಾಲಿಯಿದೆ 26146 ಕಾನ್ಸ್ಟೇಬಲ್ ಹುದ್ದೆಗಳು