ಮೊನ್ನೆಯಷ್ಟೇ ಅಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್( Ayushman Bharath Health Card) ನ ಹೆಸರು ಬದಲಾವಣೆ ಮಾಡಿ, ರಾಜ್ಯ ಸರ್ಕಾರ ಒಂದಷ್ಟು ಬದಲಾವಣೆ ಮಾಡಿತ್ತು. ಮುಖ್ಯವಾಗಿ ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಕಾರ್ಡ್ ಯೋಜನೆಗಳನ್ನು ಜಾರಿಗೊಳಿಸಿತ್ತು. ಅದರಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನ ಮಾಡುತ್ತ ಬಂದಿದ್ದು. ಈಗಲೂ ಒಂದು ಮಹತ್ವದ ಬದಲಾವಣೆ ಮಾಡಿ ಈಗಾಗಲೇ ಇರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಈಗ ಹೊಸ ರೂಪ ಸಿಕ್ಕಿದೆ ಅಂತ ಹೇಳಬಹುದು. ಇದರ ಜೊತೆಗೆ ಬರೋಬ್ಬರಿ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆಯನ್ನು ಕಾರ್ಡ್ ನಿಂದ ಪಡೆಯಬಹುದಾಗಿದೆ. ಹೀಗಾಗಿ ಕಾರ್ಡ್ ನಲ್ಲಿ ನೋಂದಣಿ ಮಾಡಿಸದೇ ಇದ್ದವರು ಕೂಡಲೇ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಹೇಳಿದೆ. ಅಲ್ದೇ ಇದಕ್ಕೆ ಕೆಲವೊಂದು ದಾಖಲೆಗಳನ್ನು ಕಡ್ಡಾಯಗೊಳಿಸಲಾಗಿದೆ.
ಇನ್ನು ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ಮರು ನಾಮಕರಣಗೊಂಡಿರುವ ಈ ಕಾರ್ಡ್‌ನ ವೈಶಿಷ್ಟ್ಯತೆ ಎಂದರೆ, ಇದರ ಮೂಲಕ ದೇಶದ ಯಾವುದೇ ಕಡೆ ನೋಂದಾಯಿತಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಈ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಡಿಸೆಂಬರ್ 6ರಂದು ಹೆಸರು ಬದಲಾವಣೆ ಮಾಡಿ ಬಿಡುಗಡೆಗೊಳಿಸಿದ್ರು. ಸದ್ಯ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಅನ್ನು ರಾಜ್ಯದ 5.9 ಕೋಟಿ ಜನರಿಗೆ ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿರೋದ್ರಿಂದ ಅಗತ್ಯ ಇರುವ ಇದರ ಸದುಪಯೋಗ ಪಡೆಯಬಹುದು. ಕಾರ್ಡ್ ನಲ್ಲಾಗಿರುವ ಬದಲಾವಣೆ ಏನು ಮತ್ತು, ನೋಂದಣಿ ಮಾಡಿಕೊಳ್ಳೋದು ಹೇಗೆ ಎಲ್ಲವನ್ನ ಸಂಪೂರ್ಣವಾಗಿ ನೋಡ್ತಾ ಹೋಗೋಣ.
ಹೌದು ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರಿಕ ಸೇವಾ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಳನ್ನು ಸುಲಭವಾಗಿ ನೋಂದಾಯಿಸಿಕೊಳ್ಳಬಹುದು. ಹೀಗಾಗಿ ಅಗತ್ಯ ದಾಖಲೆಗಳೊಂದಿಗೆ ಕೂಡಲೇ ಹೋಗಿ ಆರೋಗ್ಯ ಕಾರ್ಡ್ ಅನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಅಲ್ದೇ ಇತರೆ ರಾಜ್ಯಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಕಾರ್ಡ್ ಮಾಡಿಸಲು ಏನೆಲ್ಲಾ ದಾಖಲೆಗಳು ಕಡ್ಡಾಯ
ಇನ್ನು ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್‌ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ. ಹೀಗಾಗಿ 6 ತಿಂಗಳಲ್ಲಿ 5.09 ಕೋಟಿ ಮಂದಿಗೆ ಕಾರ್ಡ್ ವಿತರಣೆ ಮಾಡುವ ಗುರಿಯನ್ನ ರಾಜ್ಯ ಸರ್ಕಾರ ಹೊಂದಿದ್ದು, ರಾಜ್ಯದಲ್ಲಿರುವ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್ ಸೃಜನೆ ಮತ್ತು ವಿತರಣೆ ಮಾಡಲಿದ್ದಾರೆ. ಇನ್ನು ಹೆಲ್ತ್ ಕಾರ್ಡ್ ಪಡೆಯಬೇಕು ಅಂದ್ರೆ, ಆಧಾರ್ ಕಾರ್ಡ್, ಪಡಿತರ ಚೀಟಿ ಅಂದ್ರೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಯಾವುದಾದ್ರೂ ಸರಿ, ನಿಮ್ಮ ಮೊಬೈಲ್ ಸಂಖ್ಯೆ, ನಿವಾಸ ಪ್ರಮಾಣಪತ್ರ ಹಾಗೂ ಕುಟುಂಬದ ಎಲ್ಲ ಸದಸ್ಯರ ದಾಖಲೆಗಳು ಬೇಕಾಗುತ್ತೆ. ಇವೆಲ್ಲ ಇದ್ದಾರೆ ಸುಲಭವಾಗಿ ನೋಂದಾಯಿಸಿ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಮುಖ್ಯವಾಗಿ ರಾಜ್ಯದಲ್ಲಿ ಈಗಾಗ್ಲೇ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಸೇವೆ ನೀಡಲು ನೋಂದಾಯಿಸಿಕೊಂಡಿದ್ದಾರೆ. ಇನ್ನು ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲ ಸಾರ್ವಜನಿಕ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದ್ದು, 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್ ಹಾಗೂ 19 ಲಕ್ಷ ಎಪಿಎಲ್ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.
ಇದರಲ್ಲಿ ರಾಜ್ಯದ ಪಾಲು ಶೇ.66 ರಷ್ಟ್ರಿದ್ದರೆ, ಕೇಂದ್ರದ ಪಾಲು ಶೇ. 34ರಷ್ಟ್ರಿರಲಿದೆ. ಇದರಿಂದ ಫಲನುಭವಿಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿ ಮೌಲ್ಯದ ಚಿಕಿತ್ಸೆ ಪಡೆಯಬಹುದು. ಅಂದ್ರೆ ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಇನ್ನು APL ಕುಟುಂಬದವರಿಗೂ ಸಹ 5 ಲಕ್ಷದ ರೂಪಾಯಿ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡುದಾರರು ಶೇ. 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಿದರೆ, ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.