ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಈಡೇರಿಸಿ 7,000 ರೂಪಾಯಿಗೆ ಗೌರವಧನ ಹೆಚ್ಚಳ.

Increase in honorarium of Asha workers

ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ವಿರುದ್ಧ ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭಿಸಿದ್ದಾರೆ.

WhatsApp Group Join Now
Telegram Group Join Now

ಆಶಾ ಕಾರ್ಯಕರ್ತರ ಬೇಡಿಕೆಗಳೇನು?: ಆಶಾ ಕಾರ್ಯಕರ್ತೆಯಾರನ್ನೂ ಸರ್ಕಾರದ ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ ನೀತಿಯ ಪ್ರಕಾರ ಸಂಬಳ ನೀಡಬೇಕು. ಉದ್ಯೋಗಿಗಳಿಗೆ ನೀಡುವಂತೆ ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ನಗರಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸಬೇಕು. ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆಯ ತಡೆಗೆ RCH ಪೋರ್ಟಲ್ ಅನ್ನು ವೇತನ ಪಾವತಿಗೆ ಡಿ ಲಿಂಕ್ ಮಾಡಬೇಕು. ಮೊಬೈಲ್ ಬಳಕೆ ಬಾರದವರಿಗೆ ಬೇರೆ ವ್ಯವಸ್ಥೆ ಮಾಡಬೇಕು. ಮೊಬೈಲ್ ಡೇಟಾ ಬಳಸಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಬೇಕು. ಹಲವು ವರ್ಷಗಳಿಂದ ಬಿಡುಗಡೆ ಆಗದೆ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಆಶಾ ಕಾರ್ಯಕರ್ತ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ (13 ಫೆಬ್ರುವರಿ) ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅವರು ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತರ ಸೇವೆಗೆ ಈಗ ಪ್ರೋತ್ಸಾಹ ಧನ ತಿಂಗಳಿಗೆ 5,000 ರೂಪಾಯಿ ನೀಡುತ್ತಿದ್ದೇವೆ ಇದನ್ನು 2,000 ಹೆಚ್ಚಿಸಿ ಒಟ್ಟು 7,000 ರೂಪಾಯಿ ನೀಡುವ ಭರವಸೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಆರೋಗ್ಯ ಸೇವೆಯನ್ನು ಪರಗಣಿಸಿ ಪ್ರೋತ್ಸಾಹ ಧನವನ ಪಾರದರ್ಶಕವಾಗಿ ನೀಡುತ್ತೇವೆ. ನಿಮ್ಮ ಸೇವೆಗೆ ಪ್ರೋತ್ಸಾಹಧನ ಸಿಗುವುದಿಲ್ಲ ಅದನ್ನ 6 ತಿಂಗಳ ಒಳಗೆ ನೀಡುತ್ತೇವೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಾಹ ಧನ ನೇರವಾಗಿ ಖಾತೆಗೆ ವರ್ಗಾವಣೆ ಆಗುವಂತೆ ವ್ಯವಸ್ಥೆ ಮಾಡಲಾಗುವುದು. ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಾರ್ಯಕರ್ತರಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮೂಲಕ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ಸಿಗುವಂತೆ ಮಾಡುತ್ತೇವೆ. ಆಶಾ ಕಾರ್ಯಕರ್ತರು ಸಲ್ಲಿಸುವ ದಾಖಲೆಗಳಿಗೆ ಸಂಬಂಧಿಸಿದಂತೆ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡುವ ಭರವಸೆ ನೀಡಿದರು. ಇನ್ನು ಆಶಾ ಕಾರ್ಯಕರ್ತರ ತಿಂಗಳ ಸಂಬಳದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಈಗಾಗಲೇ ರಾಜ್ಯದ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2,000 ರೂಪಾಯಿ ನಿಡುತ್ತಾ ಇದ್ದೇವೆ. ಅದನ್ನು ಆಶಾ ಕಾರ್ಯಕರ್ತೆಯರಿಗೆ ನೀಡುವ ಬಗ್ಗೆ ಚಿಂತನೆ ನಡೆಸುತ್ತೇವೆ. ಹಾಗೂ 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದೆ. ಸರ್ಕಾರ ಮಹಿಳೆಯರ ಪರವಾಗಿ ಇದೆ. ಆದ್ದರಿಂದ ನೀವು ಪ್ರತಿಭಟನೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಮುಖ್ಯ ಮಂತ್ರಿಗಳ ಮಧ್ಯಸ್ಥಿಕೆಗೆ ಒತ್ತಾಯ:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿದ ಭರವಸೆಗೂ ಮಣಿಯದೆ ತಮ್ಮ ಪ್ರತಿಭಟನೆಯನ್ನು ಇಂದು ( ಫೆಬ್ರುವರಿ 14) ಸಹ ಮುಂದುವರೆಸಿರುವ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು ಎಂಬ ಒತ್ತಾಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹಠ ಹಿಡಿದಿದ್ದಾರೆ. ಇಂದು ಸಹ ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಾ ಇದೆ.

ಇದನ್ನೂ ಓದಿ: ರೀಲ್ಸ್ ಮಾಡುವವರಿಗೆ ಸರ್ಕಾರದಿಂದ ಸಿಹಿಸುದ್ದಿ; 50 ಸಾವಿರ ನಗದು ಬಹುಮಾನ ಗೆಲ್ಲಿ

ಇದನ್ನೂ ಓದಿ: ವಾಹನ ಸವಾರರಿಗೆ ಸಿಹಿ ಸುದ್ದಿ HSRP ನಂಬರ್ ಪ್ಲೇಟ್ ಅಳವಡಿಸುವ ಅವಧಿ ಮೂರು ತಿಂಗಳ ವಿಸ್ತರಣೆ.