ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

Job Fair in Bangalore

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ. 

WhatsApp Group Join Now
Telegram Group Join Now

ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ ಆದರಿಂದ ವ್ಯವಸ್ಥಿತವಾಗಿ ಉದ್ಯೋಗ ಮೇಳ ನಡೆಸಬೇಕು ಎಂದು ಸಭೆ ನಡೆಸಿ 6 ಸಚಿವರ ತಂಡ ರಚನೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತಂಡದಲ್ಲಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ , ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವರದ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ, ಕಾರ್ಮಿಕ ಸಚಿವರದ ಸಂತೋಷ್ ಲಾಡ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಯೋಗ ಮೇಳವನ್ನು ನಡೆಸಲು ಮುಂದಾಳತ್ವವನ್ನು ವಹಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗ ಮೇಳ ನಡೆಯುವ ದಿನಾಂಕ ಮತ್ತು ಸ್ಥಳ :- ಇದೇ ಬರುವ ಫೆಬ್ರುವರಿ 26 ಮತ್ತು 27 ನೇ ತಾರಿಖಿನಂದು ಉದ್ಯೋಗ ಮೇಳ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. 500 ಕ್ಕಿಂತ ಹೆಚ್ಚಿನ ಸಂಸ್ಥೆಗಳು ಉದ್ಯೋಗ ಮೇಳದಲ್ಲಿ ಬರಲಿವೆ. ಆಸಕ್ತರು ಆನ್ಲೈನ್ ನಲ್ಲಿ ಅರ್ಜಿ ಫಿಲ್ ಮಾಡಬೇಕು. ಈಗಾಗಲೇ ಉದ್ಯೋಗ ಮಾಡುತ್ತಿರುವವರು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗಾಕಾಂಕ್ಷಿಗಳ ನೋಂದಣಿ ಕ್ರಮ :-

  • ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ ಭೇಟಿ ನೀಡಿ.
  • ರಿಜಿಸ್ಟರ್ ಆಪ್ಷನ್ ಕ್ಲಿಕ್ ಮಾಡಿ
  • ನಂತರ ಉದ್ಯೋಗ ಮೇಳ ಎಂಬ ಆಯ್ಕೆ ಗೆ ಹೋಗಿ
  • ಅಭ್ಯರ್ಥಿ ನೋಂದಣಿ ಎಂಬ ಆಪ್ಷನ್ ಕ್ಲಿಕ್ ಮಾಡಿ
  • ಅರ್ಜಿ ನಮೂನೆ ಓಪನ್ ಆಗುತ್ತದೆ. ನಿಮ್ಮ ಮಾಹಿತಿಗಳನ್ನು ತುಂಬಿ ಅರ್ಜಿ ಸಲ್ಲಿಸಿ.

ಉದ್ಯೋಗದಾತರು ನೋಂದಣಿ ಮಾಡುವ ವಿಧಾನ

  • ಅಧಿಕೃತ ವೆಬ್ಸೈಟ್ https://skillconnect.kaushalkar.com/ ಭೇಟಿ ನೀಡಿ.
  • ರಿಜಿಸ್ಟರ್ ಆಪ್ಷನ್ ಕ್ಲಿಕ್ ಮಾಡಿ
  • ನಂತರ ಉದ್ಯೋಗ ಮೇಳ ಎಂಬ ಆಯ್ಕೆ ಗೆ ಹೋಗಿ
  • ಉದ್ಯೋಗದಾತ ನೋಂದಣಿ ಎಂಬ ಆಪ್ಷನ್ ಕ್ಲಿಕ್ ಮಾಡಿ
  • ಅರ್ಜಿ ನಮೂನೆ ಓಪನ್ ಆಗುತ್ತದೆ. ನಿಮ್ಮ ಮಾಹಿತಿಗಳನ್ನು ತುಂಬಿ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ದೂರವಾಣಿ ಸಂಖ್ಯೆ 18005999918. ಉದ್ಯೋಗ ಮೇಳದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. ಹಾಗೂ ಉದ್ಯೋಗ ಮೇಳಕ್ಕೆ ತೆರಳುವಾಗ ನಿಮ್ಮ ಪಾಸ್ಪೋರ್ಟ್ ಸೈಜ್ ಫೋಟೋ , ನಿಮ್ಮ Resume, ನಿಮ್ಮ ವಿದ್ಯಾರ್ಥಿಯ ಸರ್ಟಿಫಿಕೇಟ್, ನಿಮ್ಮ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ.

ವಿದೇಶದಲ್ಲಿ ಉದ್ಯೋಗಾವಕಾಶಗಳು ಹೇಗಿವೆ ಎಂಬ ಮಾಹಿತಿಯನ್ನು ಪಡೆಯಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಿಯುಸಿ ಪಾಸ್ ಆದವರಿಗೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಸಿಗಲಿದೆ ಉದ್ಯೋಗ

ಇದನ್ನೂ ಓದಿ: ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ 50 ಸಾವಿರ ರೂಪಾಯಿಗಳ ವರೆಗೂ ಸಾಲ ಸೌಲಭ್ಯ: ಹೀಗೆ ಅರ್ಜಿ ಸಲ್ಲಿಸಿ