ಬೆಳೆ ಪರಿಹಾರ ಘೋಷಣೆ: ರಾಜ್ಯ ಸರ್ಕಾರ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮೊದಲ ಕಂತಿನಲ್ಲಿ ರೂ.2,000 ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯನ್ನು ನೀಡಿದ್ದಾರೆ. ಈ ಸುದ್ದಿಯು ರೈತರಿಗೆ ಬೆಳೆಗಳನ್ನು ಬೆಳೆಯಲು ಸಹಾಯಮಾಡುವ ಮೂಲಕ ಬೆಳೆಯಬೇಕಾದ ರೈತರ ಬೆಳೆಗಳನ್ನು ಸಹ ಬೆಂಬಲಿಸುತ್ತದೆ.
ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ:
ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರವು ರೈತರಿಗೆ ಬೆಳೆ ಪರಿಹಾರ ಬಿಡುಗಡೆಗೆ ಬಾರದಂತೆ ಕೇಂದ್ರ ಸರ್ಕಾರದ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ರಾಜ್ಯದಿಂದ ತುರ್ತು ಕ್ರಮವನ್ನು ಕೇಂದ್ರಕ್ಕೆ ವಿರೋಧಿಸಲು ಕೆಲವು ಸಚಿವರು ದೆಹಲಿಗೆ ಹೋದರೂ ಅವರಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ ಎನ್ನಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ರೈತರಿಗೆ ಕೊಟ್ಟಿದ್ದ 150 ಮಾನವ ದಿನಗಳನ್ನು ಕೇಂದ್ರ ಇನ್ನೂ ಅನುಮೋದಿಸಿಲ್ಲ ಎನ್ನಲಾಗಿದೆ. ಇದಕ್ಕಾಗಿ ರಾಜ್ಯದ ವತಿಯಿಂದ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ನಮ್ಮ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2,000 ರೂಪಾಯಿ ವರೆಗೆ ಬೆಳೆ ಪರಿಹಾರ ಹಣ ನೀಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಅದಕ್ಕಾಗಿ ನಾವು ಈಗಾಗಲೇ ಮೊದಲ ಕಂತನ್ನು ಬಿಡುಗಡೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯ ಮೂಲಕ ಜನರಿಗೆ ತಿಳಿಸಿದ್ದಾರೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಮೂರು ಪ್ರಕಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಮಾಡಲಾಗಿದೆ
- ರಾಜ್ಯದ 223 ತಾಲ್ಲೂಕುಗಳ ಬರದ ಸ್ಥಿತಿಗೆ ಸಂಬಂಧಿಸಿದ ಹೇಳಿಕೆ.
- 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ, ಮತ್ತು 18171.44 ಕೋಟಿ ಪರಿಹಾರದ ಆರ್ಥಿಕ ನೆರವನ್ನು ಕೋರಲಾಗಿದೆ.
- 12 ರಾಜ್ಯಗಳಲ್ಲಿ ಬರಗಾಲದ ಸಂದರ್ಭದಲ್ಲಿ ರೂ. 4,663 ಕೋಟಿ ಬೆಳೆ ನಷ್ಟ ಪರಿಹಾರದ ಕೇಂದ್ರಕ್ಕೆ ಮನವಿಯನ್ನು ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕೇಂದ್ರದಿಂದ ಸಹಾಯಕ್ಕಾಗಿ ಇನ್ನು ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ನಾವು ಹಲವು ಬಾರಿ ಸಭೆಯನ್ನು ನಡೆಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಆದರೂ ಕೂಡ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ಕೇಂದ್ರ ಸರ್ಕಾರದಿಂದ ಬಂದಿಲ್ಲ ಹಾಗೂ ನಮ್ಮ ಸಚಿವರು ಹಣಕಾಸು ಸಚಿವರನ್ನು ಭೇಟಿಯಾಗಿದ್ದಾರೆ. ಆದರೆ ಇನ್ನೂ ಕೂಡ ಸಭೆಯನ್ನು ನಡೆಸಿಲ್ಲ ಸಮಯ ಅವಕಾಶವನ್ನು ಕೇಳಿದರೂ ಕೂಡ ಅವರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರೈತರಿಗೆ 6.5 ಲಕ್ಷ ರೈತರಿಗೆ 460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರಿಗೆ 327 ಕೋಟಿ ಬಿಡುಗಡೆ ಮಾಡಲಾಗಿದೆ, ಹಾಗೂ 780 ಕೋಟಿ DC ಗಳ PD ಖಾತೆಯಲ್ಲಿದೆ. ಹೆಚ್ಚಿನ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಲು ಹಲವು ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಮೇವು ಹೊರ ರಾಜ್ಯಕ್ಕೆ ಹೋಗದಂತೆ ತಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ. ಮೇವಿನ ಬೀಜ ವಿತರಣೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಡಿಮೆ ಬಡ್ಡಿದರದಲ್ಲಿ ಪೋಸ್ಟ್ ಆಫೀಸ್ ನಲ್ಲಿ ಸಾಲವನ್ನು ಪಡೆಯುವುದು ಹೇಗೆ?
ಇದನ್ನೂ ಓದಿ: ಅರಣ್ಯ ರಕ್ಷಕರ ಹುದ್ದೆ ನೇಮಕಾತಿಗೆ ಅಧಿಸೂಚನೆ; 540 ಹುದ್ದೆಗಳಿಗೆ ನೇಮಕಾತಿ ಹೊರಡಿಸಲು ಸರ್ಕಾರದಿಂದ ಆದೇಶ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram