ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.

WhatsApp Group Join Now
Telegram Group Join Now

ಬರ ಪರಿಹಾರದ ಹಣವನ್ನು ರೈತರು ಪಡೆದುಕೊಳ್ಳಬೇಕು ಎಂದರೆ ಇದಕ್ಕೆ ಎಫ್‌ಐಡಿ ಸಂಖ್ಯೆಯನ್ನು ಹೊಂದಬೇಕಾಗಿರುತ್ತದೆ. ಇಲ್ಲದಿದ್ದರೆ ಸರ್ಕಾರ ನಿಮ್ಮ ಖಾತೆಗೆ ಹಣ ನೀಡಲಾಗುವುದಿಲ್ಲ. ಇಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಇದುವರೆಗೂ ಎಫ್‌ಐಡಿ ಮಾಡಿಸದೇ ಇದ್ದರೆ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಇಲ್ಲವೇ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಎಫ್‌ಐಡಿ ಮಾಡಿಸಬೇಕು ಅಂತ ತಿಳಿಸಲಾಗಿದೆ.

ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ ರಾಜ್ಯ ತುತ್ತಾಗಿದೆ. ಹೀಗಾಗಿ 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ ಆಗಿದೆ. ಈಗಾಗಲೇ ರಾಜ್ಯ ಸರ್ಕಾರ ಸಹ 324 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈಗ ರೈತರು ಬರ ಪರಿಹಾರವನ್ನು ಪಡೆಯಬೇಕೆಂದರೆ ಅದಕ್ಕೆ 15 ದಿನಗಳ ಒಳಗೆ ರಾಜ್ಯದ ಫ್ರೂಟ್ಸ್‌ ಪೋರ್ಟಲ್‌ನಲ್ಲಿ ಕೆಲವು ಮಾಹಿತಿಯನ್ನು ಭರ್ತಿ ಮಾಡಬೇಕಿದೆ. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಕೆಲವೇ ದಿನಗಳಲ್ಲಿ ಬರ ಪರಿಹಾರಕ್ಕೆ ಸಿಗಲಿದೆ ಚಾಲನೆ

ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಬೇಕು. ಇದರಿಂದ ಅಕ್ರಮಗಳು ತಪ್ಪುವುದಲ್ಲದೆ, ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಒಂದು ತಿಂಗಳೊಳಗೆ ಇದನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಹೀಗಾಗಿ ಕೆಲವೇ ದಿನಗಳಲ್ಲಿ ರಾಜ್ಯದಿಂದ ಪರಿಹಾರ ನೀಡುವ ಕಾರ್ಯಕ್ಕೆ ಚಾಲನೆ ಸಿಗುತ್ತದೆ. ಆದರೆ, ರೈತರಿಗೆ ಬರ ಪರಿಹಾರ ಸಿಗಬೇಕು ಎಂದಿದ್ದರೆ ಮೊದಲು ಫ್ರೂಟ್ಸ್‌ ತಂತ್ರಾಂಶದಲ್ಲಿ ಅಗತ್ಯ ದಾಖಲೆಯನ್ನು ಸಲ್ಲಿಸಬೇಕು ಅಂತ ಹೇಳಿದ್ದಾರೆ.

ಇನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳು ಮತ್ತು ಕೃಷಿಗೆ ಪೂರಕವಾದ ಇಲಾಖೆಗಳ ಮುಖ್ಯಸ್ಥರ ಮಾರ್ಗದರ್ಶನದಲ್ಲಿ ಅಧೀನ ಕಚೇರಿಗಳಲ್ಲಿ ರೈತರ ಫ್ರೂಟ್ಸ್ ಐಡಿ ಸೃಷ್ಟಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಲಾಗಿದೆ. ಹೌದು ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಬರ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ ರೈತರು ಪರಿಹಾರದ ಧನ ಪಡೆಯಲು ಅನುಕೂಲವಾಗುವಂತೆ ಎಫ್‍ಐಡಿ ಗುರುತಿನ ಸಂಖ್ಯೆಗೆ ತಾವು ಹೊಂದಿರುವ ಎಲ್ಲ ಜಮೀನುಗಳ ವಿವರನ್ನು ಸೇರಿಸಬೇಕು. ಎಫ್‍ಐಡಿಯಲ್ಲಿ ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೇ ನಂಬರ್ ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಈಗಾಗಲೇ ಇರುವ ರೈತರ ಫ್ರೂಟ್ಸ್ ಐಡಿಯಲ್ಲಿ ರೈತರ ಜಮೀನು, ಆಧಾರ ನಂಬರ್, ಬ್ಯಾಂಕ್ ಅಕೌಂಟ್ ಸೇರಿದಂತೆ ಎಲ್ಲಾ ವಿವರ ಇರುತ್ತದೆ.

ಸರ್ಕಾರದಿಂದ ಬರ ಪರಿಹಾರದ ಹಣ ಬಿಡುಗಡೆಯಾದರೆ ಡಿಬಿಟಿ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರು ಎಫ್‍ಐಡಿ ಮಾಡಿಸಿಕೊಳ್ಳಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ, ತಮ್ಮ ಮೊಬೈಲ್ ಸಂಖ್ಯೆ ಹಾಗೂ ಅಗತ್ಯವಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಬರ ಪರಿಹಾರದ ಹಣ ಮಾತ್ರವಲ್ಲದೇ, ಬೆಳೆವಿಮೆ, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನ ಮಾರಾಟ ಮಾಡಲು ಮತ್ತು ಸರ್ಕಾರದ ಯಾವುದೇ ಯೋಜನೆಯ ಸವಲತ್ತು ಹಾಗೂ ಬ್ಯಾಂಕ್ ಸಾಲ ಪಡೆಯಲು ಎಫ್‍ಐಡಿ ಅಗತ್ಯವಿದೆ. ರೈತರು ಅಗತ್ಯ ದಾಖಲಾತಿಗಳೊಂದಿಗೆ ಎಫ್‍ಐಡಿ ಮಾಡಿಸಿಕೊಳ್ಳಬೇಕು. ಇನ್ನು ಜಮೀನು ಹೊಂದಿರುವ ರೈತರು ತಮ್ಮ ವಿವರಗಳೊಂದಿಗೆ ಫ್ರೂಟ್ಸ್ ಐಡಿಯನ್ನು ಹತ್ತಿರದ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಚೇರಿಗಳಲ್ಲಿ ಮಾಡಿಸಬಹುದು ಮತ್ತು ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಆಯಾ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಅಂತ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಸಿಹಿಸುದ್ದಿ: ಇನ್ನುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram