ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅಂತಲೇ ಹೇಳಬಹುದು. ಹೌದು ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಹಣ ನೀಡಲಿದ್ದಾರೆ. ಹೌದು 35000 ಸಾವಿರ ಪ್ರೋತ್ಸಾಹ ಧನ ಅಂದರೆ ಪ್ರೈಜ್ ಮನಿ ದೊರೆಯಲಿದೆ. ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಸರ್ಕಾರದಿಂದ ಕರ್ನಾಟಕ ರಾಜ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ರೂ.35,000 ವರೆಗೆ ಪ್ರೊತ್ಸಾಹಧನವನ್ನು ನೀಡಲು, ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಅದಕ್ಕಾಗಿ ಆದಷ್ಟು ಬೇಗ ಈ ಒಂದು ಅರ್ಜಿಯನ್ನು ಸಲ್ಲಿಸಿ ನೀವು ಕೂಡ ಇದರ ಲಾಭ ಪಡೆಯಬಹುದು. ಮುಖ್ಯವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ನೀಡುವ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಶಿಕ್ಷಣವನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಪಡೆದು ಸಲ್ಲಿಸಬಹುದು. ಹಾಗಾದ್ರೆ ಪ್ರೋತ್ಸಾಹ ಧನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಅರ್ಜಿ ಸಲ್ಲಿಸಲು ಇರುವ ದಿನಾಂಕ ದ ಬಗ್ಗೆ ಮಾಹಿತಿಯನ್ನ ನೋಡ್ತಾ ಹೋಗೋಣ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಬೇಕಾದ ಅರ್ಹತೆಗಳೇನು? ಅರ್ಜಿನಸಲ್ಲಿಸೋದು ಹೇಗೆ? ಎಲ್ಲಿ
ಹಿಂದಿನ ವರ್ಷಗಳಲ್ಲಿ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ಶ್ರೇಣಿಯಲ್ಲಿ ಪಾಸಾದವರು 60 ರಿಂದ74.99% ಶೇಕಡ ಅಂಕ ಪಡೆದಿದ್ದರೆ ರೂ.7000 ನೀಡುತ್ತಿದ್ದರು. ಮತ್ತು ಶೇಕಡ.75% ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದರೆ ಅವರಿಗೆ ರೂ.15,000 ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಆದರೆ ಇದೀಗ ಈ ಮೊತ್ತದಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದ್ದು, ಈ ಪ್ರೋತ್ಸಾಹಧನವನ್ನು ರೂ.35,000 ವರೆಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೊಂದು ಗುಡ್ ನ್ಯೂಸ್ ಏನೆಂದರೆ ಇಲಾಖೆಯು ಈ ಒಂದು ಪ್ರೋತ್ಸಾಹ ಧನಕ್ಕೆ ಯಾವುದೇ ಆದಾಯ ಮಿತಿ ನಿಗದಿ ಮಾಡಿಲ್ಲ. ಯಾವುದೇ ಆದಾಯದ ಮಿತಿ ಇಲ್ಲದೆ ಪ್ರತಿಭೆಗೆ ತಕ್ಕಂತೆ ಪ್ರೋತ್ಸಾಹ ನೀಡಲೂ ಮುಂದಾಗಿದ್ದಾರೆ.
ಇನ್ನು ಪ್ರೋತ್ಸಾಹ ಧನ ಪಡೆಯಲು ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗಂದ್ರೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಅದಕ್ಕಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಭೇಟಿ ಕೊಟ್ಟ ನಂತರ ಕೇಳಲಾದ ಎಲ್ಲಾ ದಾಖಲೆಗಳನ್ನು ಹಾಗೂ ವಿವರಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-12-2023 ನೀಡಲಾಗಿದೆ. ಹೀಗಾಗೂ ಆದಷ್ಟು ಬೇಗ ವಿದ್ಯಾರ್ಥಿಗಳು ಈ ಅರ್ಜಿ ಯನ್ನು ಸಲ್ಲಿಸಿ ಪ್ರೋತ್ಸಾಹ ಧನ ಪಡೆಯಬಹುದು.
ಮುಖ್ಯವಾಗಿ ದ್ವಿತೀಯ ಪಿಯುಸಿ, 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮ ಕೋರ್ಸ್ ಮಾಡಿದವರಿಗೆ 20,000 ಪದವಿ ಕೋರ್ಸ್‌ನವರಿಗೆ 25,000,
ಎಂಎ, ಎಂಎಸ್ಸಿ, ಇತರೆ ಸ್ನಾತಕೋತ್ತರ ಪದವಿ ಕೋರ್ಸ್‌ನವರಿಗೆ 30,000 ಮತ್ತು ಕೃಷಿ, ಇಂಜಿನಿಯರಿಂಗ್, ವೆಟರಿನರಿ, ಮೆಡಿಷನ್ ಕೋರ್ಸ್‌ನವರಿಗೆ 35,000 ರೂಪಾಯಿವರೆಗೂ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಇನ್ನು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಶಿಕ್ಷಣವನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಪಡೆದು ಸಲ್ಲಿಸಬಹುದು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೊರತುಪಡಿಸಿ ಹೊರ ರಾಜ್ಯದ ಮುಕ್ತ ವಿವಿಗಳಲ್ಲಿ ಉತ್ತೀರ್ಣರಾಗಿದ್ದರೆ ಅರ್ಹತೆ ಇರುವುದಿಲ್ಲ. ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರೋದಿಲ್ಲ. ಪಿಯುಸಿ ನಂತರ ಐಟಿಐ ವ್ಯಾಸಂಗ ಮಾಡಿದ್ದರೆ ಅವರು ಸಹ ಅರ್ಜಿ ಸಲ್ಲಿಸಲು ಅರ್ಹರಲ್ಲ. ಇನ್ನು ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು ಅಂತ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್; ಆಯುಸ್ಮಾನ್ ಕಾರ್ಡ್ ಗೆ ಸಿಗ್ತಿದೆ ಹೊಸ ರೂಪ..
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ 250 ಖಾಲಿ ಹುದ್ದೆಗಳಿಗೆ ಉದ್ಯೋಗದ ಅವಕಾಶ ಇದೆ. ಇಂದೇ ಅರ್ಜಿಯನ್ನು ಸಲ್ಲಿಸಿ.