ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು, ಮಹಿಳೆಯ ಸಬಲೀಕರಣ, ಆರ್ಥಿಕಭಿವೃದ್ಧಿ, ಮತ್ತು ಮಹಿಳೆಯರನ್ನ ಬಲಶಾಲಿಗಳನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿದ್ದೂ, ಮಹಿಳೆಯರು ಹಿತ ಕಾಪಾಡಲು ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗವನ್ನ ಹೊಂದಲು ಸಾಕಷ್ಟು ಧನಸಹಾಯವನ್ನ ನೀಡ್ತಿದೆ. ಹೌದು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆ ಹೊರಡಿಸಿದೆ.

WhatsApp Group Join Now
Telegram Group Join Now

ಹೌದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ಆಸಕ್ತ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಕ್ಕೆ ಕರೆ ನೀಡಲಾಗಿದ್ದು, ಮಹಿಳೆಯರು ನಿಗದಿತ ಸಮಯದೊಳಗೆ ಸೂಕ್ತ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಹಾಗಾದ್ರೆ ಯಾವ ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಯೋಜನೆಯಿಂದ ಸಿಗುವ ಲಾಭ ಏನು? ಅರ್ಜಿ ಸಲ್ಲಿಸೋದು ಹೇಗೆ ಮತ್ತು ಬೇಕಾಗಿರುವ ಅರ್ಹತೆ ಮತ್ತು ದಾಖಲೆಗಳೇನು ನೋಡೋಣ ಬನ್ನಿ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ಸ್ವಯಂ ಉದ್ಯೋಗ ಕೈಗೊಳ್ಳಲು 30ಸಾವಿರದವರೆಗೆ ಸಿಗಲಿದೆ ಪ್ರೋತ್ಸಾಹ ಧನ

ಮೊದಲಿಗೆ ಉದ್ಯೋಗಿನಿ ಯೋಜನೆ. ಈ ಯೋಜನೆ ಅಡಿಯಲ್ಲಿ ಅರ್ಹ ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಮತ್ತು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.1,00,000/-ಗಳವರೆಗೆ ಬ್ಯಾಂಕ್ ಗಳ ಮೂಲಕ ಸಾಲ ನೀಡುವ ಕಾರ್ಯಕ್ರಮ ರೂಪಿಸಿದೆ. ಹಣಕಾಸು ಸಂಸ್ಥೆಗಳು ಅಥವಾ ಬ್ಯಾಂಕ್ ಗಳು ಮಂಜೂರು ಮಾಡುವ ಸಾಲದ ಮೊತ್ತಕ್ಕೆ ನಿಗಮದಿಂದ ಸಹಾಯಧನ ಮಂಜೂರು ಮಾಡಲು ಅವಕಾಶವಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ: 2 ಲಕ್ಷ ರೂಪಾಯಿಗಳು ಘಟಕ ವೆಚ್ಚ: ಕನಿಷ್ಟ ರೂ 1 ಲಕ್ಷದಿಂದ ಗರಿಷ್ಟ ರೂ. 3 ಲಕ್ಷ ರೂಪಾಯಿಗಳು ಇನ್ನು ಸಹಾಯಧನ ಶೇ. 50 ರಷ್ಟು ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ: 1.50 ಲಕ್ಷ ರೂಪಾಯಿಗಳು ಘಟಕ ವೆಚ್ಚ: ಗರಿಷ್ಟ ರೂ. 3.00 ಲಕ್ಷ ರೂಪಾಯಿಗಳು, ಸಹಾಯಧನ: ಶೇ.30 ರಸ್ಟಿರಲಿದೆ. 2ನೇಯದ್ದು ಚೇತನ ಯೋಜನೆ, ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ನಿಗಮದಿಂದ 30,000 ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಇನ್ನು ಧನಶ್ರೀ ಯೋಜನೆ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30,000 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯ ವಯೋಮಿತಿ 18 ರಿಂದ 60 ವರ್ಷಗಳಿರಬೇಕು.

ಇನ್ನು 4ನೇಯದ್ದು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಈ ಯೋಜನೆಯಡಿಯಲ್ಲಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ನಿಗಮದ ವತಿಯಿಂದ 30,000 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಇನ್ನು ಕೊನೆಯ ಯೋಜನೆ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, 1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ನಿಗಮದಿಂದ 30,000 ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ? ಮಹಿಳೆಯರು ಮಾಡಬೇಕಿರೋದು ಏನ್ ಗೊತ್ತಾ?

ಈ ಹಿಂದೆ ವಿವರಿಸಿದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು 22-11-2023 ರಿಂದ ಕೊನೆಯ ದಿನಾಂಕ 22-12-2023ರವೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮಹಿಳೆಯರು ಕೆಲವೊಂದು ವಿಶೇಷ ಸೂಚನೆಗಳನ್ನು ತಿಳಿದುಕೊಂಡಿರಬೇಕು. ಮೊದಲಿಗೆ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್‌ ಮಾಡಿಸಿರಬೇಕು, ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.

ಇನ್ನು ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಅಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರಾಹಕರೇ ನಿಮಗೊಂದು ಸಿಹಿ ಸುದ್ದಿ, ಈ ಬ್ಯಾಂಕ್ ಗಳಲ್ಲಿ ಡಿಪೋಸಿಟ್ ಮಾಡುವುದರ ಮೂಲಕ 9% ಗಳಿಗಿಂತಲೂ ಹೆಚ್ಚಿನ ಬಡ್ಡಿಯನ್ನು ಪಡೆಯಬಹುದು. 

ಇದನ್ನೂ ಓದಿ: ಪದವಿ ಪಾಸಾದವರಿಗೆ ಗುಡ್ ನ್ಯೂಸ್! IDBI ನಿಂದ 2100 ಹೊಸ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿಯನ್ನು ಸಲ್ಲಿಸಿ.