ಉತ್ತಮ ಉದ್ಯೋಗಕ್ಕೆ ಹುಡುಕುತ್ತಾ ಇದ್ದರೆ ಈಗ ಕರ್ನಾಟಕದ ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ. ಹುದ್ದೆಯ ಬಗ್ಗೆ ಪೂರ್ಣ ವಿವರ ತಿಳಿಯಲು ಈ ಲೇಖನ ಓದಿ.
ಹುದ್ದೆಯ ವಿವರ :-
ಕರ್ನಾಟಕ ಹೈಕೋರ್ಟ್ ಒಟ್ಟು 8 ಲಾ ಕ್ಲರ್ಕ್ & ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆಯು ತಿಳಿಸಿದೆ. ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವಂತೆ
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಕಾನೂನು ಪದವಿ ಮುಗಿಸಿರಬೇಕು. ಇನ್ನು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಏಪ್ರಿಲ್ 17 2024ಕ್ಕೆ ಗರಿಷ್ಠ 30 ವರ್ಷ. ಸರ್ಕಾರದ ಮೀಸಲಾತಿ ನಿಯಮದ ವಯಸ್ಸಿನ ಸಡಿಲಿಕೆ ಇದೆ. ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ಧವಿರಬೇಕು.
ವೇತನದ ವಿವರಗಳು :- ಹುದ್ದೆಗೆ ಆಯ್ಕೆಯಾದ ಅಭರ್ಥಿಯ ತಿಂಗಳ ವೇತನ 25,000 ರೂಪಾಯಿಗಳು.
ಅರ್ಜಿಯ ಶುಲ್ಕದ ವಿವರಗಳು :- ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭರ್ಥಿಗಳು ಯಾವುದೇ ಶುಲ್ಕವನ್ನು ನೀಡುವ ಅಗತ್ಯ ಇಲ್ಲ.
ಆಯ್ಕೆ ಪ್ರಕ್ರಿಯೆಯ ಮಾಹಿತಿ :- ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪದವಿ ಮತ್ತು ಉಳಿದ ತರಗತಿಗಳ ಅಂಕಗಳ ಆಧಾರದ ಮೇಲೆ ಹಾಗೂ ಅಭ್ಯರ್ಥಿಗಳ ಸಾಧನೆಯನ್ನು ಪರಿಗಣಿಸುವ ಜೊತೆಗೆ ಅಭ್ಯರ್ಥಿಗಳ ಸಂದರ್ಶನ ನಡೆಸಿ ಹುದ್ದೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :- ಅಧಿಸೂಚನೆಯ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 17, 2024 ರಂದು ಕೊನೆಯ ದಿನವಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಮಾರ್ಚ್ 28, 2024 ಆಗಿತ್ತು.
ಇದನ್ನೂ ಓದಿ: LIC ಯ ಹೊಸ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿ ಪ್ರತಿ ತಿಂಗಳು 12000 ರೂಪಾಯಿ ಪಿಂಚಣಿ ಪಡೆಯಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
- ಹಂತ 1;- ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಓದಬೇಕು ಹಾಗೂ ನೀವು ಎಲ್ಲಾ ನಿಮಗೆ ಅರ್ಜಿ ಸಲ್ಲಿಸಲು ಅರ್ಹತೆ ಇದೆಯೇ ಎಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿ.
- ಹಂತ 2:- ಅಧಿಕೃತ ವೆಬ್ಸೈಟ್ https://recruitmenthck.kar.nic.in/hck/lra/home.php ಗೆ ತೆರಳಿ.
- ಹಂತ 3:- ಕರ್ನಾಟಕ ಹೈಕೋರ್ಟ್ ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಎಂಬ ಬಟನ್ ಕ್ಲಿಕ್ ಮಾಡಬೇಕು.
- ಹಂತ 4:- ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನಮೂನೆಯಲ್ಲಿ ನಿಮ್ಮ ಹೆಸರು, ನಿಮ್ಮ ವಿಳಾಸ ಪುರಾವೆ ಹಾಗೂ ನಿಮ್ಮ id ದಾಖಲೆ ಎಲ್ಲವನ್ನೂ ಭರ್ತಿ ಮಾಡಬೇಕು. ನಂತರ ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳುನ್ನು ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿಬೇಕಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಅಧಿಸೂಚನೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಹಾಗೂ ನಿಮ್ಮ ಅರ್ಜಿ ನಮೂನೆಯಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿ ಮತ್ತು ತಪ್ಪಾದ ಮಾಹಿತಿಯನ್ನು ಹಾಕಬಾರದು. ಹುದ್ದೆಗೆ ಅರ್ಜಿ ಸಲ್ಲಿಸುವಾಗ ನಿಮ್ಮ ಹತ್ತಿರದ ಗ್ರಾಮ್ ಓನ್ ಕೇಂದ್ರಗಳಿಗೆ ಭೇಟಿ ನೀಡಿದರೆ ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂದರೆ ನೀವು ಶುಲ್ಕ ಪಾವತಿ ಮಾಡಬಾರದು. ಹುದ್ದೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಬೇಕಾದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
ಅಧಿಸೂಚನೆ PDF ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವೀಲ್ ಬರೆದ ಮೇಲೆ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯ ಹಕ್ಕು ಸಿಗುತ್ತದೆಯೇ?