Karnataka Rain: ರಾಜ್ಯದಲ್ಲಿ 5ದಿನ ವರುಣ ಆರ್ಭಟ ಶುರುವಾಗಲಿದೆ, ಯಾವ ಯಾವ ಜಿಲ್ಲೆಗಳಲ್ಲಿ ಸುರಿಯುತ್ತೆ ಅತೀ ಹೆಚ್ಚು ಮಳೆ

Karnataka Rain: ಕರ್ನಾಟಕದಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದ್ರೂ ಕೂಡ ಬಿರುಗಾಳಿ ಸಮೇತ ಸುರಿಯುತ್ತಿರುವ ಭಾರಿ ಮಳೆಗೆ ರೈತ ಕಂಗಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬಂತೆ ಬೆಳೆ ನಾಶವಾಗಿದೆ ಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳಿತ್ತಿದ್ದಾನೆ. ಈ ನಡುವೆ 4ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೌದು ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು,ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now

ಇದನ್ನೂ ಓದಿ: ಹೆಂಡತಿಯ ಅಕ್ರಮ ಸಂಬಂಧ ಗೊತ್ತಿದ್ರೂ ಸುಮ್ಮನಿದ್ದ ಗಂಡ- ಆದ್ರೂ ಗಂಡನ ಜೀವ ತೆಗೆದ ಹೆಂಡತಿ

ಹವಾಮಾನ ಇಲಾಖೆಯಿಂದ ಮುನ್ಸೂಚನೆ, ಎಲ್ಲಿ ಹೈ ಅಲರ್ಟ್

ಹೌದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ. ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿದ್ದು ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ. ಇದರ ಜೊತೆಗೆ ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್​ಎಎಲ್​, ಗೋಪಾಲ್​ನಗರ, ಮಧುಗಿರಿ,
ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಸಾಮಾನ್ಯ ಮಳೆಯಾಗಲಿದೆ. ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಬಿರುಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿಯನ್ನ ಕೊಟ್ಟಿದೆ.

ಇದನ್ನೂ ಓದಿ: ಕರೆಂಟ್ ಬಿಲ್ ಕಟ್ಟದಿದ್ದರೆ ಮುಲಾಜಿಲ್ಲದೆ ‘ಕನೆಕ್ಷನ್ ಕಟ್’ ಇಂಧನ ಇಲಾಖೆಯಿಂದ ಆದೇಶ, ಕರೆಂಟ್ ಬಿಲ್ ಕಟ್ಟದವರಿಗೆ ಶಾಕ್

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram