ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಬೀಳುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 7 ದಿನಗಳು ರಾಜ್ಯದ ಹಲವೆಡೆ ಮಳೆ ಬೀಳಲಿದೆ :- ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹಿತ ಭಾರಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇ 20 ರಿಂದ ಈ ಜಿಲ್ಲೆಗಳಲ್ಲಿ 5 ದಿನಗಳಲ್ಲಿ ಭಾರಿ ಮಳೆ :- ರಾಜ್ಯದಲ್ಲಿ ಶಿವಮೊಗ್ಗ , ಉಡುಪಿ ಹಾಗೂ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಹಾಗೂ ಹಾಸನ ಮತ್ತು ಕೊಡಗು ಮತ್ತು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ ಹಾಗೂ ಹಾವೇರಿ ಮತ್ತು ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಿವೃತ್ತಿಯ ನಂತರ ತಿಂಗಳಿಗೆ ಒಂದು ಲಕ್ಷ ರೂಪಾಯಿ ಪಿಂಚಣಿ ಸಿಗಬೇಕು ಎಂದಾದರೆ ಹೀಗೆ ಮಾಡಿ.
ಮೇ 21 ರಂದು ಈ ಜಿಲ್ಲೆಗಳಿಗೆ ಮಳೆ ಬೀಳಲಿದೆ :-
ರಾಜ್ಯದಲ್ಲಿ 21 ಮೇ 2024 ರಂದು ಶಿವಮೊಗ್ಗ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಮತ್ತು ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಜೊತೆಗೆ ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಡ್ಯ ಮತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಳಕಾಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮೇ 22 ರಂದು ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ :- 22 ಮೇ 2024 ರಂದು ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆ ಬೀಳಲಿದೆ ಎಂದು ಇಲಾಖೆ ಸೂಚನೆ ನೀಡಿದೆ. ಶಿವಮೊಗ್ಗ ಜಿಲ್ಲೆ ಹಾಗೂ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ ಹಾಗೂ ಕೊಡಗು ಮತ್ತು ದಾವಣಗೆರೆ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಜೊತೆಗೆ ಗುಡ್ಡಗಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು. ಈ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಲು ತಿಳಿಸಿದೆ.
ನೀರಿನ ಅಭಾವದಿಂದ ಬೇಸತ್ತ ಜನತೆಗೆ ಮಳೆ ಬರುತ್ತಿರುವುದು ಸಂತಸ ತಂದಿದೆ. ಈಗಾಗಲೇ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಕಡಿಮೆ ಆಗಿದ್ದು ಜನರಿಗೆ ಜೀವ ಬಂದಂತೆ ಆಗಿದೆ. ಆದರೆ ಅತಿಯಾದ ಮಳೆ ಮುಂದುವರೆದರೆ ಬರಗಲ ದಿಂದ ರೈತರು ಬೆಳೆ ನಷ್ಟ ಅನುಭವಿಸಿದ್ದರು ಈಗ ಮಳೆ ಹೆಚ್ಚಾದರೆ ಅತಿವೃಷ್ಟಿ ಇಂದ ರೈತರು ಬೆಳೆದ ಬೆಳೆಗಳ ನಾಶವಾಗುವ ಸಾಧ್ಯತೆ ಇದೆ. ಈಗಾಗಲೇ ಹಲವಾರು ಕಡೆಗಳಲ್ಲಿ ಮಳೆ ಹೆಚ್ಚಾಗಿ ಅವಾಂತರ ಸೃಷ್ಟಿಯಾದ ಪ್ರಕರಣವು ದಾಖಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ