ಈಗಾಗಲೇ ಮಹಿಳೆಯರ ಸ್ವಾವಲಂಬನೆ ಬದುಕಿಗೆ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಮಹಿಳೆಯರ ಪಾಲಿನ ಆಶಾಕಿರಣ ಆಗಿದೆ. ಇಲ್ಲಿಯ ವರೆಗೆ ಹೊರ ಗುತ್ತಿಗೆ ನೌಕರರಿಗೆ ಯಾವುದೇ ರೀತಿಯ ಮೀಸಲಾತಿ ಇರ್ಲಿಲ್ಲ. ಆದರೆ ಈಗ ರಾಜ್ಯ ಸರ್ಕಾರ ಸರಕಾರಿ ಇಲಾಖೆಗಳಲ್ಲಿ ಯಾವ ರೀತಿಯ ಮೀಸಲಾತಿ ನಿಯಮ ಇದೆಯೋ ಅದರ ಹಾಗೆ ಇನ್ನು ಮುಂದೆ ರಾಜ್ಯದ ಹೊರ ಗುತ್ತಿಗೆ ನೌಕರರ ನೇಮಕಾತಿಗೂ ಆದೆ ನಿಯಮ ಇರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ :- ಹೊರ ಗುತ್ತಿಗೆ ನೌಕರರ ನೇಮಕಾತಿಗೂ ಇಲಾಖೆಯ ನಿಯಮದ ಪ್ರಕಾರ ಮೀಸಲಾತಿ ನೀಡಬೇಕು ಎಂದು ಈ 2023 ಡಿಸೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿತ್ತು. ಈಗ ಅಧಿಕೃತವಾಗಿ ಜಾರಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯಾವ ಯಾವ ಹುದ್ದೆಗಳಿಗೆ ಈ ಮೀಸಲಾತಿ ಅನ್ವಯ ಆಗಲಿದೆ :- ರಾಜ್ಯದ ನಿಯಮದ ಪ್ರಕಾರ ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು ಹಾಗೂ ಡಾಟಾ ಎಂಟ್ರಿ ಆಪರೇಟರ್ ಮತ್ತು ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಎಲ್ಲಾ ಸಿಬ್ಬಂದಿಗಳ ನೇಮಕಾತಿಗೆ ಮೀಸಲಾತಿ ನಿಯಮ ಅನ್ವಯ ಆಗಲಿದೆ.
ಮೀಸಲಾತಿ ನಿಯಮ ಏನು?: ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದ್ದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33% ಮೀಸಲಾತಿಯನ್ನು ಇನ್ನು ಮುಂದೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮೀಸಲಾತಿ ನಿಯಮದಲ್ಲಿ ಸೇರಿಸಲಾಗಿದೆ.
ಇದನ್ನೂ ಓದಿ: ನಿವೃತ್ತಿಯ ನಂತರ ತಿಂಗಳಿಗೆ ಒಂದು ಲಕ್ಷ ರೂಪಾಯಿ ಪಿಂಚಣಿ ಸಿಗಬೇಕು ಎಂದಾದರೆ ಹೀಗೆ ಮಾಡಿ.
ಸರಕಾರ ನೀಡಿರುವ ಸೂಚನೆಗಳು ಏನು?
- ಹೊರಗುತ್ತಿಗೆ ನೇಮಕಾತಿಗಳಿಗೆ 45 ದಿನಗಳಿಂದ ಕಡಿಮೆ ಅವಧಿಯ ಮೀಸಲಾತಿ ನಿಯಮ ಅನ್ವಯಿಸುವುದಿಲ್ಲ.
- ನಿಯಮದ ಪ್ರಕಾರ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮದ ಅನ್ವಯ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿ ನಿಯಮದ ಪ್ರಕಾರವೇ ಸಿಬ್ಬಂದಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ಮೇಲೆ ತಿಳಿಸಿರುವಂತೆ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿಯಲ್ಲಿ ಕನಿಷ್ಠ ಶೇಕಡ 33% ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ವಿಶೇಷವಾಗಿ ನೀಡಲಾಗಿದೆ.
- ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಮಾಡುವಾಗ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಗುತ್ತಿಗೆದಾರರು ಪಡೆಯಬೇಕು.
- ಯಾವುದೇ ಕಾರಣದಿಂದ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಬಾರದೆ ಇದ್ದರೆ ಅಥವಾ ಸಮಯಕ್ಕೆ ಮೊದಲು ಕೆಲಸವನ್ನು ಬಿಟ್ಟರೆ ಆ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಬೇಕು.
- ಸರ್ಕಾರದ ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಾಗ ಮೀಸಲಾತಿ ನಿಯಮದ ಪಾಲನೆ ಮಾಡಲೇಬೇಕು.
- ಸಾಮಾಜಿಕ ನ್ಯಾಯ ಹಾಗೂ ಎಲ್ಲಾರಿಗೂ ಸಮಾನ ಉದ್ಯೋಗ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿಯಮ ಅಳವಡಿಕೆ ಮಾಡಲಾಗುತ್ತಿದೆ. ಯಾವುದೇ ಅನುಕಂಪ ದ ಆಧಾರದ ಮೇಲೆ ಹೊರಗುತ್ತಿಗೆ ನೌಕರರನ್ನು ಖಾಯಂ ನೌಕರರಾಗಿ ಪರಿಗಣಿಸಬಾರದು.
ಇದನ್ನೂ ಓದಿ: ಮಧ್ಯಮ ವರ್ಗದ ಫೇವರಿಟ್; ಬೊಲೆರೊ ನಿಯೋ ಬೆಲೆ ಏರಿಕೆ, ಹೊಸ ಫೀಚರ್ಸ್ ಏನು?