ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ವಿದ್ಯಾರ್ಥಿಗಳನ್ನ ಶಾಲಾ ಕಾಲೇಜುಗಳಿಗೆ ಸೇರಿಕೊಂಡು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಲು ಸರ್ಕಾರ ಸೇರಿದಂತೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಆಗಾಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಡುತ್ತಿರುತ್ತವೆ. ಅದರಂತೆಯೇ ಇದೀಗ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಮುಗಿಸಿ ಮತ್ತೆ ಯತ್ತ ಪ್ರಕಾರ ಹಾಜರಾಗಬೇಕಿದೆ. ಆದ್ರೆ ಕೆಲವೊಂದಷ್ಟು ಜನ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗೋದಿಲ್ಲ ಹೌದು ಅಪ್ಪ ಅಮ್ಮ ಹೇಗೋ ಸಾಲ ಸೋಲ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂತ ಫೀಜ್ ಕಟ್ಟಲು ಹಣ ಹೊಂದಿಸುತ್ತಾರೆ. ಆದ್ರೆ ಶಾಲಾ ಕಾಲೇಜುಗಳು ಆರಂಭವಾದ ದಿನದಿಂದಲೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸಿಗೋದಿಲ್ಲ ಹೀಗಾಗಿ ಕೆಲವೊಂದಷ್ಟು ಜನ ಬಸ್ ಟಿಕೆಟ್ ತೆಗೆದುಕೊಳ್ಳಲಾಗದ ಪರಿಸ್ಥಿತಿಯಲ್ಲಿರುವಂತ ವಿದ್ಯಾರ್ಥಿಗಳು ಬಸ್ ಪಾಸ್ ಸಿಗುವ ವರೆಗೂ ಶಾಲಾ ಕಾಲೇಜುಗಳಿಗೆ ಹೋಗೋದು ಬೇಡ ಅಂತ ನಿರ್ಧರಿಸಿ ಕೆಲವೊಂದಷ್ಟು ಪಾಠ ಪ್ರವಚನಗಳಲ್ಲಿ ಹಿಂದೆ ಬೀಳುತ್ತಾರೆ. ಕೆಲವೊಂದು ಶಾಲಾ ಕಾಲೇಜುಗಳಲ್ಲಿ ಬಸ್ ಪಾಸ್ ಇಲ್ಲ ಅನ್ನೋ ವಿಚಾರವನ್ನ ಗಂಭೀರವಾಗಿ ತೆಗೆದುಕೊಂಡು, ಪಾಠ ಪ್ರವಚನಗಳನ್ನ ಶುರು ಮಾಡದೆ ಬೇರೆ ರೀತಿಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳೋದು ಇದೆ. ಆದರೆ ಎಲ್ಲಾ ಸಾಲ ಕಾಲೇಜುಗಳಲ್ಲೂ ಇದೇ ರೀತಿಯ ವಾತಾವರಣ ಇರೋದಿಲ್ಲ. ತಮ್ಮ ಪಠ್ಯಕ್ರಮವನ್ನ ಮುಗಿಸುವ ಧಾವಂತದಲ್ಲಿರುವವರು ಪಾಠ ಪ್ರವಚನ ಶುರು ಮಾಡ್ತಾರೆ. ಹೀಗಾಗಿ ತೀರಾ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಇದರಿಂದ ತೊಂದರೆಯಾಗಬಾರದು ಅಂತ ಸಾರಿಗೆ ಇಲಾಖೆ ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.

WhatsApp Group Join Now
Telegram Group Join Now

ಇದನ್ನೂ ಓದಿ: ಕರೆಂಟ್ ಬಿಲ್ ಕಟ್ಟದಿದ್ದರೆ ಮುಲಾಜಿಲ್ಲದೆ ‘ಕನೆಕ್ಷನ್ ಕಟ್’ ಇಂಧನ ಇಲಾಖೆಯಿಂದ ಆದೇಶ, ಕರೆಂಟ್ ಬಿಲ್ ಕಟ್ಟದವರಿಗೆ ಶಾಕ್

ಜೂನ್ 15ರವರೆಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಹೌದು ಪ್ರಸಕ್ತ ಅಂದ್ರೆ ಈ ವರ್ಷದ ಶಾಲಾ-ಕಾಲೇಜುಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಶುಲ್ಕ ಪಾವತಿ ರಸೀದಿ ಅಥವಾ 2022-23ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅಂದ್ರೆ ಕಳೆದ ವರ್ಷದ ಬಸ್ ಪಾಸ್ ತೋರಿಸಿ ಜೂನ್ 15ರವರೆಗೂ ಉಚಿತವಾಗಿ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅವಕಾಶ ಕಲ್ಪಿಸಿದೆ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಈ ಸಂಬಂಧ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ ನೀಡಿ ಕ್ರಮ ಕೈಗೊಳ್ಳಲು ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದೆ. ಇನ್ನು ನಿಗಮವು 2023-24ನೇ ಸಾಲಿನ ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್ ಪಾಸ್‍ಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸ್ ಪಡೆಯಲು ಕಾಲಾವಕಾಶ ನೀಡಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ತೊಂದರೆಯಾಗದಂತೆ ಜೂನ್ 15ರವರೆಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಅಂತ ಸಾರಿಗೆ ನಿಗಮ ತಿಳಿಸಿದೆ.

ಒಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇದು ಒಂದೊಳ್ಳೆ ಗಿಫ್ಟ್ ಅಂತಲೇ ಹೇಳಬಹುದು. ಅಯ್ಯೋ ಕ್ಲಾಸ್ ಶುರುವಾಗಿದೆ ಬಸ್ ಪಾಸ್ ಬೇರೆ ಇಲ್ಲ ಟಿಕೆಟ್ ತಗೋಳೋಕೆ ಮನೆಯಲ್ಲಿ ದುಡ್ಡು ಕೊಡಲ್ಲ ಏನಪ್ಪಾ ಮಾಡೋದು ಅಂತ ಚಿಂತೆಯಲ್ಲಿರೋ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಆಗಿದ್ದು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಸರ್ಕಾರ ಈ ಒಂದು ಉದ್ದೇಶವನ್ನ ಈಡೇರಿಸಲು ಮುಂದಾಗಿದ್ದು, ಇದೀಗ ಆದೇಶವನ್ನ ಕೂಡ ಹೊರಡಿಸಿ ಈ ಮೂಲಕ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ: ಮೊದಲ ದಿನ ಶಾಲೆಗೆ ಹೊರಟ ರಾಯನ್ ರಾಜ್ ಸರ್ಜಾ- ಮಗನ ಬಗ್ಗೆ, ಭವಿಷ್ಯದ ಬಗ್ಗೆ ಮೇಘನಾ ರಾಜ್ ಹೇಳಿದ್ದೇನು ಗೊತ್ತಾ?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram