ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ(Yuva Nidhi Yojana) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ರು. ಇನ್ನು ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿಯಂದು ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾವಣೆ ಮಾಡಲಾಗುತ್ತದೆ. ಹೌದು ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ಸಿಗಲಿದೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಇದೂ ಒಂದಾಗಿದ್ದು, ರಾಜ್ಯದ ಪದವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಪಡೆದವರಿಗೆ ಮಾಸಿಕ 1500 ರೂಪಾಯಿಯನ್ನು ಸರ್ಕಾರ ನೀಡಲಿದೆ. ಹಾಗಾದರೆ ಯುವನಿಧಿ ಯೋಜನೆಗೆ ಯಾರೆಲ್ಲ ಅರ್ಜಿ ಸಲ್ಲಿಕೆ ಮಾಡಬಹುದು? ಪದವಿ ಅಥವಾ ಡಿಪ್ಲೋಮಾ ಮುಗಿಸಿ ಎಷ್ಟು ವರ್ಷ ಆಗಬೇಕು? ಕೆಲವೊಬ್ಬರಿಗೆ ಯೋಜನೆಯ ಲಾಭ ಸಿಗುವುದಿಲ್ಲ, ಅದ್ರಲ್ಲೂ ಕೆಲವೊಂದು ತಪ್ಪು ಮಾಡಿದ್ರ್ ಶಿಕ್ಷೆ ಕೂಡ ಆಗಬಹುದು ಅಂತ ಹೇಳಲಾಗ್ತಿದೆ. ಹಾಗಾದ್ರೆ ಪದವಿ ಮುಗಿಸಿದರೂ ಉದ್ಯೋಗ ಸಿಗದವರು ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಇಲ್ವಾ? ಹೀಗೆ ಒಂದಷ್ಟು ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಮೂಲಕ ಉತ್ತರವನ್ನ ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಡಿಪ್ಲೋಮ ಹಾಗೂ ಪಧವಿದರರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಸೂಚನೆ
ಹೌದು ಪ್ರಸ್ತುತ ಪದವಿ ಅಥವಾ ಡಿಪ್ಲೋಮಾ ಮುಗಿಸಿ 6 ತಿಂಗಳಾದ್ರೂ ಉದ್ಯೋಗ ಸಿಗದವರು ಈ ಯೋಜನೆಯಡಿ ಮಾಸಿಕ ಹಣ ಪಡೆಯಲು ಅರ್ಹರಾಗಿರುತ್ತಾರೆ. ಅಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2022-23 ಶೈಕ್ಷಣಿಕ ವರ್ಷದಲ್ಲಿ ಡಿಪ್ಲೊಮಾ ಅಥವಾ ಪದವಿ ಪಾಸಾಗಿರಬೇಕು. ಅಂದಹಾಗೆ ಕನಿಷ್ಠ 6 ವರ್ಷ ಕರ್ನಾಟಕದಲ್ಲಿ ಇರುವವರಿಗೆ ಈ ಯುವನಿಧಿ ನಿರುದ್ಯೋಗ ಭತ್ಯೆ ಸಿಗಲಿದೆ. ಪ್ರತಿ ತಿಂಗಳ 25ರೊಳಗೆ ಫಲಾನುಭಿಯು ನನಗೆ ಉದ್ಯೋಗ ಸಿಕ್ಕಿಲ್ಲ ಎನ್ನವುದನ್ನು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಇನ್ನು ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ವಯಂ ಉದ್ಯೋಗಿಗಳು ಅರ್ಜಿ ಸಲ್ಲಿಸುವಂತಿಲ್ಲ, ಯಾವುದೇ ಸಾರ್ವಜನಿಕ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವವರು ಈ ಯೋಜನೆಗೆ ಅರ್ಹರಲ್ಲ, ಇನ್ನು ಉನ್ನತ ಶಿಕ್ಷಣವನ್ನು ಪಡಯುತ್ತಿರುವ ಅಥವಾ ಪಡೆಯುವ ವಿದ್ಯಾರ್ಥಿಗಳು ಅಪ್ರಂಟಿಸ್ ಸಂಬಳ ಪಡೆಯುವವರು ಜೊತೆಗೆ 2022-23ಕ್ಕಿಂತ ಹಿಂದೆ ಪದವಿ ಅಥವಾ ಡಿಪ್ಲೋಮಾ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಹೀಗಾಗಿ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಹಾಕಬಹುದು. ಇದರ ಜೊತೆಗೆ ಗ್ರಾಮ ಒನ್, ಕರ್ನಾಟಕ ಒನ್‌ಗಳಲ್ಲೂ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.
ಇನ್ನು ಯೋಜನೆಗೆ ಅರ್ಜಿ ಸಲ್ಲಿಸುವವರು, ಅರ್ಜಿ ಜೊತೆಗೆ ಪದವಿ ಅಥವಾ ಡಿಪ್ಲೋಮಾ ಅಂಕಪಟ್ಟಿ ಸಲ್ಲಿಕೆ ಮಾಡೋದು ಅಗತ್ಯವಾಗಿದೆ. SSLC/ PUC ಅಂಕಪಟ್ಟಿ, ಪದವಿ ಪ್ರಮಾಣ ಪತ್ರ ಇರಲೇಬೇಕು. ಇದರ ಜೊತೆ ಆಧಾರ್, ಬ್ಯಾಂಕ್ ಖಾತೆ ನಂಬರ್ ಕಡ್ಡಾಯವಾಗಿ ನೀಡಬೇಕು. ಇನ್ನು ಕರ್ನಾಟಕದಲ್ಲಿ ವಾಸಿಸುತ್ತಿರುವ ಬಗ್ಗೆ ಸೂಕ್ತ ದಾಖಲೆ ಸಲ್ಲಿಸಬೇಕು ಇದು ಕೂಡ ಅತ್ಯಂತ ಮುಖ್ಯ ದಾಖಲೆ ಆಗುತ್ತೆ. ಇನ್ನು ಈ ಯೋಜನೆಯು ಕರ್ನಾಟಕ ರಾಜ್ಯದ ಕನ್ನಡಿಗ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತೆ. ಹೀಗಾಗಿ ಅರ್ಜಿ ಸಲ್ಲಿಸುವ ಮುನ್ನ ಇದರ ಬಗ್ಗೆ ಗಮನವಿರಲಿ. ಯುವನಿಧಿ ಯೋಜನೆಗೆ(Yuva Nidhi Yojana) ಅರ್ಜಿ ಸಲ್ಲಿಸುವವರು ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಇದ್ದರೂ ಕೂಡ ಯುವನಿಧಿ ಯೋಜನೆ ಲಾಭವನ್ನು ಮುಂದುವರಿಸಿಕೊಂಡು ಹೋದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ.
ಇದೇ ಕಾರಣಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ನಿರುದ್ಯೋಗಿಗಳೆಂದು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು, ಹೆಚ್ಚಿನ ಪ್ರಮಾಣವನ್ನು ಸಲ್ಲಿಸಬೇಕು. ಇನ್ನೂ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಜೊತೆಗೆ ತಾವು ಉತ್ತರಿಸಿದ ದಿನಾಂಕದಿಂದ 6 ತಿಂಗಳಿನಿಂದ ತಮ್ಮ ಅಧಿಕೃತ ಬ್ಯಾಂಕ್ ಖಾತೆಯ ವಹಿವಾಟು ಸ್ಟೇಟ್‌ಮೆಂಟ್ ಪ್ರತಿಯನ್ನು ಸಲ್ಲಿಸಲಾಗಿದೆ. ಇದು ಕಡ್ಡಾಯವಾಗಿದೆ, ಒಂದು ವೇಳೆ ಬ್ಯಾಂಕ್ ಪ್ರತಿ ಸಲ್ಲಿಸದಿದ್ದರೆ ಅರ್ಜಿ ತಿರಸ್ಕಾರವಾಗುತ್ತದೆ ಅಂತ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಅರ್ಹರು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸೋದು ಉತ್ತಮ. ಇಲ್ಲವಾದ್ರೆ ಒಂದಿಲ್ಲೊಂದು ದಿನ ದಂಡ ವಿಧಿಸುವ ಸನ್ನಿವೇಶ ಎದುರಾಗಬಹುದು ಎಚ್ಚರ.
ಇದನ್ನೂ ಓದಿ: ಜನಸಾಮಾನ್ಯರಿಗೆ ಸಿಹಿ ಸುದ್ದಿಯನ್ನು ನೀಡಿದ ಕೇಂದ್ರ ಸರ್ಕಾರ ಇನ್ನು ಮುಂದೆ ಭಾರತ್ ರೈಸ್ 25 ರೂ. ಕೆ.ಜಿ.ಗೆ ಕೊಳ್ಳಬಹುದು