ಕೃಷಿ ಭಾಗ್ಯ ಯೋಜನೆಯಡಿ 2023-24 ನೇ ಸಾಲಿನಲ್ಲಿ ವಿವಿಧ ಘಟಕಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ನಮೂನೆಗಳು ನಿಮ್ಮ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗಲಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಇನ್ನು ರೈತರು ಈ ಯೋಜನೆಯ ಲಾಭ ಪಡೆಯಬೇಕು ಅಂದ್ರೆ ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಇನ್ನು ಈ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ. ಹೌದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರಲಿದ್ದು, ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದೆ.
ಇನ್ನು ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್, ಪೆಟ್ರೋಲ್ ಪಂಪ್ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು. ಒಂದುವೇಳೆ ಸಂಬಂಧಪಟ್ಟ ತಾಲೂಕಿಗೆ ಅಥವಾ ಹೋಬಳಿಗೆ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದರೆ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದ್ಯಂತೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೃಷಿ ಭಾಗ್ಯ ಯೋಜನೆಯ ಲಾಭ ಪಡೆಯಲು ಡಿಸೆಂಬರ್ 31 ಕೊನೆ ದಿನ
ಹೌದು ಮಳೆ ಕೊರತೆ ಇಡೀ ರಾಜ್ಯದ ಕೃಷಿಕರನ್ನು ಸಂಕಷ್ಟಕ್ಕೀಡು ಮಾಡಿದೆ. ಮಳೆಯಾಶ್ರಿತ ಕೃಷಿಯನ್ನೇ ಅವಲಂಬಿಸಿರುವ ಕೋಲಾರ ಜಿಲ್ಲೆಯೂ ಇದಕ್ಕೆ ಹೊರತಲ್ಲ. ಇಲ್ಲಿನ ರೈತರ ಸಂಕಷ್ಟದೂರಾಗಿಸಲು ಕೃಷಿ ಭಾಗ್ಯ ಯೋಜನೆ ವರದಾನವಾಗಬಲ್ಲುದು. ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿಸಲು ಈ ಯೋಜನೆ ಸಹಾಯಕವಾಗಬಲ್ಲುದು. ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. 2023-24ನೇ ಸಾಲಿನಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸಲು ನಿರ್ಧರಿಸಲಾಗಿದೆ. ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಮಾಡುವುದು. ಶೇಖರಣೆಯಾದ ನೀರನ್ನು ಉಪಯುಕ್ತವಾಗಿ ಬಳಕೆ ಮಾಡಿ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯ ಹೆಚ್ಚಿಸುವುದು. ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿರುತ್ತದೆ.
ಈ ಮೊದಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಂತರ ಬಿಜೆಪಿ ಸರಕಾರ ಸ್ಥಗಿತಗೊಳಿಸಿತ್ತು. ಇದೀಗ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷಿ ಯೋಜನೆಯ ಮರುಜಾರಿಗೆ ಮುಂದಾಗಿದ್ದಾರೆ. ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಗೆ ಉತ್ತಮ ಸ್ಪಂದನೆ ದೊರೆತಿತ್ತು ಹೀಗಾಗಿ ಮತ್ತೆ ಯೋಜನೆಗೆ ಮರು ಜೀವ ನೀಡಿದ್ದಾರೆ. ಇನ್ನು ಕೃಷಿ ಭಾಗ್ಯ ಯೋಜನೆಯ ಲಾಭ ಪಡೆಯಲು ಆಸಕ್ತ ರೈತರಿಂದ ಸದ್ಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದರೆ ಕೃಷಿ ಭಾಗ್ಯ ಯೋಜನೆಯಡಿ ಸವಲತ್ತು ಪಡೆದಿರುವ ರೈತರು ಹಾಗೂ ನರೇಗಾಯೋಜನೆಯಡಿ ಸವಲತ್ತು ಪಡೆದಿರುವ ರೈತರನ್ನು ಹೊರತುಪಡಿಸಿ ಉಳಿದ ಎಲ್ಲಾ ರೈತ ಬಾಂಧವರು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಯೋಜನೆಯ ಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಅರ್ಜಿಯ ಜತೆ ಎಫ್‌ಐಡಿ, ರೈತರ ಭಾವಚಿತ್ರ ಇರಬೇಕು. ಫ್ರೂಟ್ಸ್ ಐಡಿ ಇರದಿದ್ದರೆ, ಆಧಾರ್ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ರೈತರ ಭಾವಚಿತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜ್ಯೇಷ್ಠತಾ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಅಥವಾ ಅತೀ ಹೆಚ್ಚು ಅರ್ಜಿ ಸಲ್ಲಿಕೆ ಆದ್ರೆ ಲಾಟರಿ ಎತ್ತುವ ಮೂಲಕ ಕೂಡ ಫಲನುಭವಿಗಳನ್ನ ಆಯ್ಕೆ ಮಾಡಲಾಗುತ್ತೆ ಹೀಗಾಗಿ ಡಿಸೆಂಬರ್ 31ರ ಒಳಗಾಗಿ ಯೋಜನೆಗೆ ಅರ್ಜಿ ಸಲ್ಲಿಸಯ್ವ ಮೂಲಕ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಇದನ್ನೂ ಓದಿ: LPG ಗ್ಯಾಸ್ E-KYC ಮಾಡಿಸಲು ಅಂತಿಮ ದಿನಾಂಕ ನಿಗದಿಪಡಿಸಿಲ್ಲ! ಡಿಸೆಂಬರ್ 31 ಕೊನೆಯ ದಿನಾಂಕವಲ್ಲ..