ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿದ ಕಾಂಗ್ರೆಸ್ ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

Mahalakshmi Scheme

ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಜಾರಿ ಮಾಡಿದೆ ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣವನ್ನು ನೀಡುತ್ತಿದೆ. ಅದರ ಜೊತೆಗೆ ಉಚಿತ ಬಸ್ ಪ್ರಯಾಣ ವನ್ನು ನೀಡುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಎಲ್ಲಾ ಕಡೆಯಲ್ಲಿ ಸಫಲ ಆಗಿರುವ ಹಿನ್ನೆಲೆಯಲ್ಲಿ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಒಂದು ಲಕ್ಷ ಸಹಾಯ ಧನ ನೀಡುವುದಾಗಿ ರಾಜ್ಯ ಸರ್ಕಾರವು ಘೋಷಣೆ ಮಾಡಿದೆ. ಏನಿದು ಯೋಜನೆ ಎಂಬ ಪೂರ್ಣ ವಿವರ ಇಲ್ಲಿದೆ.

WhatsApp Group Join Now
Telegram Group Join Now

ಸರ್ಕಾರದ ಘೋಷಣೆ ಏನು?

ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಯನ್ನು ಯಾವತ್ತೂ ಸುಳ್ಳು ಮಾಡಿಲ್ಲ. ಅಂತೆಯೇ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಿಂದ ಆಡಳಿತಕ್ಕೆ ಬಂದಲ್ಲಿ ದೇಶದಲ್ಲಿ ಇರುವ ಬಡ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ನಾವು ದೇಶದ ಬಡ ಮಹಿಳೆಯರಿಗೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ಐದು ಗ್ಯಾರೆಂಟಿ ಯಾವುದು ಎಂದರೆ 

  • ಮಹಾಲಕ್ಷ್ಮಿ ಗ್ಯಾರೆಂಟಿ ಯೋಜನೆ- ಬಡ ಕುಟುಂಬದ ಒಬ್ಬ ಮಹಿಳೆಗೆ / ಯಜಮಾನಿ ಮಹಿಳೆಗೆ ಪ್ರತಿ ವರ್ಷ 1 ಲಕ್ಷ ರೂಪಾಯಿ ಸಹಾಯ ಧನ ನೀಡಲಾಗುವುದು.
  • ನೇಮಕಾತಿ ಗ್ಯಾರೆಂಟಿ :- ಕೇಂದ್ರ ಸರ್ಕಾರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹೊಸದಾಗಿ ಉದ್ಯೋಗ ನೇಮಕಾತಿಗಳಲ್ಲಿ ಅರ್ಧದಷ್ಟು ಮಹಿಳೆಯರಿಗೆ ಮೀಸಲು ನೀಡಲಾಗುವುದು.
  • ನಾರಿ ಶಕ್ತಿಗೆ ಗೌರವ ಯೋಜನೆ: ದೇಶದ ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಮಹಿಳೆಯರ ವೇತನದಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಿಸಲಾಗುವುದು.
  • ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್ ಯೋಜನೆ : ದೇಶದಲ್ಲಿ ಇರುವ ಉದ್ಯೋಗಿ ಮಹಿಳೆಯರಿಗಾಗಿ ಹಾಸ್ಟೆಲ್‌ಗಳ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು.
  • ಅಧಿಕಾರ ಮೈತ್ರಿ ಗ್ಯಾರೆಂಟಿ – ಎಲ್ಲಾ ಪಂಚಾಯತಿಗಳಲ್ಲಿ ಅಧಿಕಾರ ಮೈತ್ರಿಯ ನೇಮಕದ ಮೂಲಕ ಮಹಿಳೆಯರಿಗೆ ಕಾನೂನು ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಹಾಯ ಆಗಲಿ ಎಂಬ ಕಾರಣಕ್ಕೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತದೆ.

ವೀಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಿಂದಲೆ ವಿಡಿಯೊ ಕಾನ್ಫರೆನ್ಸ್‌ ನಲ್ಲಿ ಭಾಗವಹಿಸಿ ಪಂಚ ಗ್ಯಾರಂಟಿಗಳನ್ನು ಮಹಿಳೆಯರಿಗೆ ಘೋಷಣೆ ಮಾಡಿದರು. ಭಾರತ್ ಜೋಡೊ ನ್ಯಾಯ ಯಾತ್ರೆಯು ಮಹಾರಾಷ್ಟ್ರದ ಧುಲೆಯಲ್ಲಿರುವ ನಡೆಯಿತು ಇದರಲ್ಲಿ ಭಾಗವಹಿಸಿದ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಮಹಿಳಾ ಸಮಾವೇಶದಲ್ಲಿ ಈ ಐದು ಗ್ಯಾರಂಟಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದರು. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿಯವರು ಸ್ವತಂತ್ರ ಭಾರತದಲ್ಲಿ ಅತಿ ಹೆಚ್ಚು ಆಡಳಿತ ಮಾಡಿದ ಪಕ್ಷ ನಮ್ಮದು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಸುಳ್ಳು ಇಲ್ಲ ಎಂಬುದು ಈಗಾಗಲೇ ನಿಮಗೆ ತಿಳಿದಿದೆ. ಮತ್ತೆ ನಮ್ಮ ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಓಟ್ ಹಾಕಿ ಎಂದು ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ತಿಳಿಸಿದರು.

ಇದನ್ನೂ ಓದಿ: 5 ಲಕ್ಷಕ್ಕೂ ಕಡಿಮೆ ಬೆಲೆಯಲ್ಲಿ ಖರೀದಿಸುವಂತಹ ಕಾರುಗಳಿವು, ಇದರ ಬಗ್ಗೆ ಒಂದಷ್ಟು ಮಾಹಿತಿಗಳು