ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು. ಈ ವೇಳೆ ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಅದ್ರಲ್ಲಿ ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸುತ್ತಿರುವ 1.6 ಲಕ್ಷ ಮನೆಗಳ ನಿರ್ಮಾಣ 2024ರ ಮಾರ್ಚ್ ಒಳಗಾಗಿ ಪೂರ್ಣಗೊಳ್ಳಬೇಕು. ಜತೆಗೆ ರಾಜೀವ್‌ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ 52,189 ಮನೆಗಳ ನಿರ್ಮಾಣವನ್ನು ಸರ್ಕಾರದ ಹಣದಿಂದಲೇ ಪೂರ್ಣಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಚಿವ ಸಂಪುಟ ಸಭೆ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೌದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಅಧಿಕಾರಿಗಳೊಂದಿಗೆ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣ ಗುರಿ ಹೊಂದಲಾಗಿತ್ತು. ಇದೀಗ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣವಾಗಿದೆ. ಉಳಿದಂತೆ ನಿರ್ಮಾಣ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು 2024ರ ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಿಎಂ ಸಿದ್ದರಾಮಯ್ಯ ಅವರಿಂದ ಮಹತ್ವದ ಸೂಚನೆ
ವಿವಿಧ ವಸತಿ ಯೋಜನೆಗಳಡಿ ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಈವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ಈ ಬಗ್ಗೆ ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಇಂಜಿನಿಯರುಗಳಿಗೆ ಸಭೆ ನಡೆಸುವಂತೆ ತಿಳಿಸಿದ್ದಾರೆ. ಅಲ್ದೇ ಲಿಂಟೆಲ್ & ಛಾವಣಿ ಹಂತದಲ್ಲಿರುವ 1.5 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಸೂಚನೆ ನೀಡಲಾಗಿದೆ. ಜೊತೆಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಸುಮಾರು 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂಪಾಯಿಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂಪಾಯಿ ಬಿಡುಗಡೆಗೆ ಸಚಿವ ಸಂಪುಟ ತೀರ್ಮಾನಿಸಿದೆ. ಹೀಗಾಗಿ 25,000 ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಅಂತ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ರಾಜೀವ್ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಆದೇಶಿಸಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮುಕ್ತಾಯ ಹಂತದಲ್ಲಿರುವ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಮುಂದೆ ಪ್ರಸ್ತಾವನೆಯನ್ನು ಮಂಡಿಸುವಂತೆ ಸೂಚನೆ ನೀಡಲಾಗಿದೆ. ಅಲ್ದೇ ಫಲಾನುಭವಿಗಳು ಬಡವರಾಗಿದ್ದು ಅವರಿಂದ 4 ಲಕ್ಷ ರೂಪಾಯಿ ಪಾವತಿ ಕಷ್ಟ ಆಗಿಲಿದೆ, ಬ್ಯಾಂಕ್ ಗಳಿಂದಲೂ ಸಾಲ ಸಿಗುತ್ತಿಲ್ಲ ಎಂದು ಸಭೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೊಳೆಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಕೈಗೊಂಡಂತೆ ಫಲಾನುಭವಿಗಳು 1 ಲಕ್ಷ ರೂಪಾಯಿ ಮಾತ್ರ ಪಾವತಿಸಿದ್ರೆ ಸಾಕು, ಉಳಿದ ಹಣ ಸರ್ಕಾರದಿಂದಲೇ ಭರಿಸಿದರೆ ಮಾತ್ರ ಯೋಜನೆ ಪೂರ್ಣಗೊಳ್ಳಲಿದೆ ಎನ್ನುತ್ತಿದ್ದೀರಿ. ಇದಕ್ಕೆ ಅಗತ್ಯವಾಗುವ ಹೆಚ್ಚುವರಿ ಅನುದಾನ ಕೋರಿ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಮಂಡಿಸಿ. ಮುಂದೆ ಚರ್ಚಿಸಿ ನಿರ್ಧಾರ ಮಾಡೋಣ ಅಂತಲೂ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಊಟ ವಸತಿಯೊಂದಿಗೆ ಉಚಿತ ವಾಹನ ಚಾಲನಾ ತರಬೇತಿ 2024, ಅರ್ಜಿಯನ್ನು ಸಲ್ಲಿಸಲು ಯಾರು ಅರ್ಹರು?