ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಅಹ್ವಾನ; ಮೊರಾರ್ಜಿ ದೇಸಾಯಿ ಸೇರಿದಂತೆ 10ಕ್ಕೂ ಹೆಚ್ಚು ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿ | Morarji Desai Application

Morarji Desai Application

Morarji Desai Application: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್‌ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವುದು. ರಾಜ್ಯದಲ್ಲಿರುವ ಮೂರಾರ್ಜಿ ವಸತಿ ಶಾಲೆ ಮತ್ತು ವಿವಿಧ 10ಕ್ಕೂ ಹೆಚ್ಚು ಶಾಲೆಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

WhatsApp Group Join Now
Telegram Group Join Now

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್‌ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವುದು. ಹಾಗಾದ್ರೆ ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಇರುವ ಮಾನದಂಡಗಳೇನು? ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ? ಹೇಗೆ ಅರ್ಜಿ ಸಲ್ಲಿಸೋದು ನೋಡ್ತಾ ಹೋಗೋಣ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಪ್ರಮುಖ ಮಾಹಿತಿಗಳು

ರಾಜ್ಯದಲ್ಲಿರುವ ಮೂರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಸಂಗೊಳ್ಳಿ ರಾಯಣ್ಣ ವಸತಿ ಶಾಲೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ವಸತಿ ಶಾಲೆ, ಕವಿರನ್ನ ವಸತಿ ಶಾಲೆ, ಗಾಂಧಿ ತತ್ವ ವಸತಿ ಶಾಲೆ, ಶ್ರೀ ನಾರಾಯಣ ಗುರು ವಸತಿ ಶಾಲೆ, ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ನೋಟಿಫಿಕೇಶ್ ಹೊರಡಿಸಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 07-12-2023 ರಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 31-12-2023ರ ರೊಳಗೆ ಅರ್ಜಿ ಸಲ್ಲಿಸಲು ಪ್ರಾಧಿಕಾರ ತಿಳಿಸಿದೆ. ಇನ್ನು ಅರ್ಜಿ ಸಲ್ಲಿಸಲು ಎಲ್ಲ ವರ್ಗದವರಿಗೂ ಆದಾಯದ ಮಿತಿಯಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗ ದವರಿಗೆ ವಾರ್ಷಿಕ ರೂ. 2.50 ಲಕ್ಷ, ಹಿಂದುಳಿದ ವರ್ಗದ ಪ್ರವರ್ಗ- 1 ಇವರಿಗೆ ವಾರ್ಷಿಕ ರೂ. 2.50 ಲಕ್ಷ. ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ವಾರ್ಷಿಕ ರೂ.1 ಲಕ್ಷದಲಿಗಿನ ಆದಾಯ ಇದ್ದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಮುಖ್ಯವಾಗಿ ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು. ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು.

ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದ್ದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಕ್ಕಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerised Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುತ್ತದೆ. ಹೀಗಾಗಿ ಡಿಸೆಂಬರ್ 31ರ ಒಳಗಾಗಿ ಅರ್ಜಿ ಸಲ್ಲಿಸೋದು ಅವಶ್ಯಕ. ಇನ್ನು 18-2-2024 ರಂದು ಪರೀಕ್ಷೆ ನಡೆಯಲಿದ್ದು ಬೆಳೆಗ್ಗೆ 11-1ಗಂಟೆಯ ತನಕ 100ಅಂಕಗಳಿಗೆ ಪರೀಕ್ಷೆ ನಡೆಯುತ್ತೆ ಅನಂತರ ಮೆರಿಟ್ ಲಿಸ್ಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನ ಆಯ್ಕೆ ಮಾಡಲಾಗುತ್ತೆ.

KEA Website: https://cetonline.karnataka.gov.in/kea/

ಇದನ್ನೂ ಓದಿ: ನೀವು ಶಿಕ್ಷಣಕ್ಕಾಗಿ ಸಾಲವನ್ನು ಪಡೆಯುವ ಮೊದಲು ಕೆಲವು ಅಂಶಗಳನ್ನು ನೆನಪಿಡಿ,

ಇದನ್ನೂ ಓದಿ: ನೀವು ಮನೆಯ ಸಾಲವನ್ನು ಪಡೆಯಬೇಕೆಂದಿದ್ದೀರಾ? ಹಾಗಾದರೆ ಈ ಕೆಳಗಿನ ಪ್ರಮುಖವಾದ ಅಂಶವನ್ನು ಗಮನದಲ್ಲಿಟ್ಟುಕೊಳ್ಳಿ.