ಒಂದು ಲಕ್ಷ ಇದ್ರೆ ಸಾಕು ಮನೆ ನಿಮ್ಮದಾಗುತ್ತೆ; ವಸತಿ ಯೋಜನೆಯಡಿಯಲ್ಲಿ ಸಿಗಲಿದೆ ಬಡವರಿಗೆ ಮನೆ

Pradhana Mantri Awas Yojana

ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ವಸತಿ ರಹಿತರಿಗೆ ಇದು ಸಂತಸದ ಸುದ್ದಿ ಅಂತಲೇ ಹೇಳಬಹುದು. ಹೌದು ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ(Pradhana Mantri Awas Yojana) ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿಯನ್ನು ಪಾವತಿಸಿ ಮನೆಯನ್ನು ಪಡೆಯಬಹುದು ಅಂತ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿ ಪಾವತಿಸಿ ಮನೆಯನ್ನು ಪಡೆಯಬಹುದು.

WhatsApp Group Join Now
Telegram Group Join Now

ಇನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂಪಾಯಿ ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ. ಮುಖ್ಯವಾಗಿ ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರೋದ್ರಿಂದ ಫಲಾನುಭವಿಗಳಿಂದ ಕೇವಲ ಒಂದು ಲಕ್ಷ ರೂಪಾಯಿಯನ್ನು ಸ್ವೀಕರಿಸಿ ಮನೆಯನ್ನು ನೀಡಲು ಮುಂದಾಗಿದ್ದಾರೆ. ಇದು ಕಾಂಗ್ರೆಸ್‌ ಚುನಾವಣೆಗೆ ಮುನ್ನ ಘೋಷಿಸದೇ ಇರುವ ಆರನೇ ಗ್ಯಾರಂಟಿ ಎಂದು ಪರಿಗಣಿಸಬಹುದು ಅಂತಲೂ ಸಚಿವರು ತಿಳಿಸಿದ್ದು ಯಾರು ಯೋಜನೆಯ ಲಾಭ ಪಡೆಯಬಹುದು ಮತ್ತು ಹೇಗೆ ಅಂತ ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ(Pradhana Mantri Awas Yojana) ಸಿಗಲಿದೆ ಮನೆ

ಹೌದು ಬಹಳ ವರ್ಷಗಳ ಬಳಿಕ ಯೋಜನೆಗೆ ಮತ್ತೆ ಮರು ಜೀವಾ ಸಿಕ್ಕಿದೆ ಅಂತಲೇ ಹೇಳಬಹುದು. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ(Pradhana Mantri Awas Yojana)2015ರಲ್ಲಿ 1,80,253 ಮನೆಗಳು ಮಂಜೂರಾಗಿದ್ದವು. ಆದರೆ, 2015ರಿಂದ 2023ರ ವರೆಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಒಂದೇ ಒಂದು ಮನೆಯನ್ನು ಕೊಡಲು ಸಾಧ್ಯವಾಗಿಲ್ಲ. ಇನ್ನು 2015ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದ್ದಾಗ ಪ್ರತಿ ವರ್ಷವೂ ಒಂದಷ್ಟು ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. ಆದ್ರೆ 2018ರಿಂದ ಒಂದೇ ಒಂದು ಮನೆಯನ್ನು ಮಂಜೂರಾತಿ ನೀಡಲಾಗಿಲ್ಲ. ಆವಾಸ್‌ ಯೋಜನೆಯ ಪ್ರಕಾರ ಫಲಾನುಭವಿಗಳು 4.5 ಲಕ್ಷ ರೂ. ಪಾವತಿಸಬೇಕು. ಕೇಂದ್ರ ಸರಕಾರ 1.5 ಲಕ್ಷ ರೂ. ನೀಡುತ್ತದೆ, ರಾಜ್ಯ ಸರಕಾರ ಒಂದು ಲಕ್ಷ ರೂ. ನೀಡಬೇಕು. ಆದರೆ, ರಾಜ್ಯ ಸರ್ಕಾರ ಇದುವರೆಗೂ ತನ್ನ ಪಾಲಿನ ಹಣ ಬಿಡುಗಡೆ ಮಾಡಿಲ್ಲ. ಜತೆಗೆ ಹಲವಾರು ಫಲಾನುಭವಿಗಳು 4.5 ಲಕ್ಷ ರೂ. ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಇದೆಲ್ಲವನ್ನ ಯೋಚಿಸಿ ಸಂಪುಟ ಸಭೆಯಲ್ಲಿ ಇದೀಗ ಒಳ್ಳೆಯ ತೀರ್ಮಾನ ಕೈಗೊಂಡಿದ್ದು ಇನ್ನೇರೆಡು ತಿಂಗಳಲ್ಲಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಿದ್ದಾರೆ.

ಇನ್ನು ರಾಜ್ಯದಲ್ಲಿ 1.8 ಲಕ್ಷ ಮನೆಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಇವುಗಳನ್ನು ಪೂರ್ಣಗೊಳಿಸಲು 6,170 ಕೋಟಿ ರೂಪಾಯಿ ಬೇಕಾಗಿದೆ. ಇದರ ಪೈಕಿ 5,403 ಕೋಟಿ ಫಲಾನುಭವಿಗಳ ಮೂಲಕ ಬರಬೇಕಿದೆ. ರಾಜ್ಯ ಸರ್ಕಾರ ಈಗ 500 ಕೋಟಿ ರೂ. ಬಿಡುಗಡೆ ಮಾಡಿದರೆ, ಅಂತಿಮ ಹಂತದಲ್ಲಿರುವ 48,760 ಮನೆಗಳನ್ನು ಪೂರ್ಣಗೊಳಿಸಬಹುದು. ಅಲ್ದೇ ಮುಂದಿನ ಹಂತದಲ್ಲಿ ಮತ್ತೊಂದು ಕಂತಿನ ಹಣ ಕೊಡಲು ಸಿಎಂ ಒಪ್ಪಿದ್ದಾರೆ ಅಂತ ಜಮೀರ್‌ ಖಾನ್‌ ಹೇಳಿದ್ದಾರೆ. ಆದ್ರೆ ಫಲಾನುಭವಿಗಳು ಈಗ 1 ಲಕ್ಷ ಪಾವತಿಸಿದ ಬಳಿಕ ಮುಂದೆ ಉಳಿದ ಮೊತ್ತವನ್ನು ಪಾವತಿಸಬೇಕೇ ಬೇಡವೇ? ಪಾವತಿಸಬೇಕು ಎಂದಾದರೆ ಅದಕ್ಕೆ ಎಷ್ಟು ಸಮಯಾವಕಾಶ ಇರುತ್ತದೆ ಎಂಬ ಅಂಶಗಳನ್ನು ಇನ್ನು ಸ್ಪಷ್ಟಪಡಿಸಿಲ್ಲ.

ಹೊಸ ಯೋಜನೆಯ ಪ್ರಕಾರ ರಾಜ್ಯ ಸರ್ಕಾರ 500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಣ ಬಿಡುಗಡೆಗೆ ಒಪ್ಪಿದ್ದಾರೆ ಎಂದು ಜಮೀರ್‌ ಖಾನ್‌ ಹೇಳಿದರು. ಈಗ ಮನೆ ಪಡೆಯುವ ಫಲಾನುಭವಿಗಳು ಕೇವಲ ಒಂದು ಲಕ್ಷ ರೂ. ಕಟ್ಟಿದರೆ ಸಾಕು. ಕೇಂದ್ರ ಸರ್ಕಾರ ಒಂದುವರೆ ಲಕ್ಷವನ್ನು ಕೊಡುತ್ತದೆಯಾದರೂ ಈ ಮೊತ್ತವನ್ನು ಅದು ಜಿಎಸ್ಟಿ ಮೂಲಕ ಮರಳಿ ಪಡೆಯುತ್ತದೆ ಎಂದು ಜಮೀರ್‌ ಖಾನ್‌ ಹೇಳಿದರು. ಮುಂದಿನ ದಿನಗಲ್ಲಿ ಯೋಜನೆಯ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಇದನ್ನೂ ಓದಿ: ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ