ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅನುಮತಿ ಆರಂಭ; ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್ ಮುನಿಯಪ್ಪ

ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಕ್ರಮವಹಿಸಲು ಮುಂದಾಗಿದ್ದು, ಬಾಕಿ ಉಳಿದಿರುವ 2.95 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆಗೆ ಆದ್ಯತೆ ನೀಡಲಾಗುತ್ತದೆ ಹಾಗೆ ಕಾರ್ಡ್‌ ತಿದ್ದುಪಡಿಗೆ ಶೀಘ್ರ ಅವಕಾಶ ಮಾಡಿಕೊಡಲಾಗುವುದು ಅಂತ ಹೇಳಲಾಗಿದ್ದು, ಇಲಾಖೆಯಿಂದ ಈ ಕುರಿತು ಆದೇಶ ಜಾರಿಯಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಹೌದು ರಾಜ್ಯದಲ್ಲಿ ನೂತನ ರೇಷನ್‌ ಕಾರ್ಡ್‌ಗೆ(Ration Card) ಅರ್ಜಿ ಸಲ್ಲಿಸಿದವರ ಸ್ಥಳ ಪರಿಶೀಲನೆಯನ್ನು ಶೀಘ್ರದಲ್ಲಿಯೇ ಆರಂಭಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಆ ಬಳಿಕ ಹೊಸ ರೇಷನ್‌ ಕಾರ್ಡ್‌ ವಿತರಣೆ ಮಾಡಲಿದ್ದೇವೆ ಅಂತ ಆಹಾರ ಸಚಿವರು ತಿಳಿಸಿದ್ದಾರೆ. ಹೌದು ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ 2.95 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಕಾರ್ಡ್‌ ವಿತರಿಸಲು ನಿರ್ಧರಿಸಲಾಗಿದೆ.

WhatsApp Group Join Now
Telegram Group Join Now

ಈ ನಿಟ್ಟಿನಲ್ಲಿ ಅರ್ಜಿದಾರರ ಸ್ಥಳ ಪರಿಶೀಲನೆ ನಡೆಸಲಾಗುತ್ತದೆ. ಅಲ್ದೇ ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಈ ಬಗ್ಗೆ ಮಾತನಾಡಿದ್ದು, ಚುನಾವಣೆ ಕಾರಣದಿಂದ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿದ್ದು, ಜುಲೈ ಅಂತ್ಯಕ್ಕೆ ಒಟ್ಟು 2,95,986 ಅರ್ಜಿ ಬಾಕಿ ಉಳಿದಿವೆ. ಈ ಅರ್ಜಿದಾರರ ಸ್ಥಳ ಪರಿಶೀಲಿಸಲಾಗುವುದು. ಬಳಿಕ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಹೊಸ ಕಾರ್ಡ್‌ ವಿತರಣೆಗೆ ಕ್ರಮ ವಹಿಸಲಾಗುವುದು. ಅಲ್ದೇ ತುರ್ತು ವೈದ್ಯಕೀಯ ಕಾರಣಗಳಿಗೆ ಹೊಸ ಪಡಿತರ ಚೀಟಿ ವಿತರಣೆಗೆ ಅನುಮತಿ ನೀಡಲಾಗುವುದು ಅಂತ ಸಚಿವರು ತಿಳಿಸಿದ್ದಾರೆ.

ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp

ವರ್ಷಗಟ್ಟಲೆಯಿಂದ ಕಾಯುತ್ತಿದ್ದ ರಾಜ್ಯದ ಜನರಿಗೆ ಸಂತಸದ ಸುದ್ದಿ

ಹೌದು ಪಡಿತರ ಚೀಟಿಯಲ್ಲಿ ತಿದ್ದುಪಡಿ, ಸೇರ್ಪಡೆ, ರದ್ದು ಸೇರಿದಂತೆ ಇತರ ಪರಿಷ್ಕರಣೆಗೆ ಅವಕಾಶ ಕಲ್ಪಿಸಲು ಸರಕಾರ ತೀರ್ಮಾನಿಸಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಿದೆ. ಒಂದು ತಿಂಗಳ ಕಾಲಾವಕಾಶ ನೀಡಲಿದ್ದು, ಆ ಅವಧಿಯಲ್ಲಿ ತಹಸೀಲ್ದಾರ್‌ ಹಾಗೂ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಪಡಿತರ ಚೀಟಿ ಪರಿಷ್ಕರಣೆಗೆ ಕ್ರಮ ವಹಿಸುವಂತೆ ಸೂಚಿಸಲು ಸಿದ್ಧತೆ ನಡೆಸಿದೆ. ಅಲ್ದೇ ಪಡಿತರ ಚೀಟಿಯಲ್ಲಿ ಹೊಸದಾಗಿ ಹೊಸ ಸದಸ್ಯರ ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆದು ಹಾಕುವುದು, ಹೆಸರು ತಿದ್ದುಪಡಿ ಸೇರಿದಂತೆ ಇತರ ಪರಿಷ್ಕರಣೆಗೆ ಅವಕಾಶ ಕೋರಿಕೆ ಹಿನ್ನೆಲೆಯಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಸದ್ಯದಲ್ಲೇ ಈ ಸಂಬಂಧ ಆದೇಶ ಹೊರಬೀಳಲಿದೆ. ಇನ್ನು ಸಂಬಂಧಪಟ್ಟ ತಹಸೀಲ್ದಾರ್‌ ಹಾಗೂ ಆಹಾರ ನಿರೀಕ್ಷರು ತಿಂಗಳ ಅವಧಿಯಲ್ಲಿ ತಿದ್ದುಪಡಿ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ವಹಿಸಲಿದ್ದಾರೆ ಎಂದು ಕೆಎಚ್‌ ಮುನಿಯಪ್ಪ ತಿಳಿಸಿದ್ದಾರೆ. ಜೊತೆಗೆ ಪಡಿತರ ಚೀಟಿಗೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆ-ಸವಾಲುಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಧರಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ ಅಂತ ಸಚಿವರು ಸುದ್ದಿಗೊಷ್ಟಿಯಲ್ಲಿ ತಿಳಿಸಿದ್ದಾರೆ.

ಹೌದು ಈ ಹಿಂದೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಅಲ್ದೇ ಹೊಸ ಸರ್ಕಾರ ರಚನೆಯಾಗಿ 4 ತಿಂಗಳು ಕಳೆದಿದ್ದು ಈ ಪೋರ್ಟ್​​ಲ್​ ಅನ್ನು ಆರಂಭ ಮಾಡೋದಾಗಿ ಇದೀಗ ಸಚಿವರು ತಿಳಿಸಿದ್ದಾರೆ. ಹೌದು ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ. ಇನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಲಾಭವನ್ನು ಪಡೆದುಕೊಳ್ಳಲು ಪಡಿತರ ಚೀಟಿ ಅಗತ್ಯ, ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದರು, ಹೊಸದಾಗಿ ಪಡಿತರ ಚೀಟಿ ಸಲ್ಲಿಸಲು ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಜನರು ನಿತ್ಯವೂ ಭೇಟಿ ನೀಡಿ ವಿಚಾರಿಸುತ್ತಿದ್ದರು.

ಹೌದು ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ಮಾನದಂಡವಾಗಿದ್ದರಿಂದ ಅರ್ಜಿ ಸಲ್ಲಿಸಲು ಬರುವವರ ಸಂಖ್ಯೆ ಹೆಚ್ಚಾಗಿತ್ತು, ಈ ಹಿನ್ನಲೆ ಸರ್ಕಾರ ಕೂಡ ಕೊಂಚ ಸಮಯ ತೆಗೆದುಕೊಂಡು ಮತ್ತೆ ಹೊಸ ಪಡಿತರ ಕಾರ್ಡ್ ನೀಡಲು ಮುಂದಾಗಿದೆ. ಹೀಗಾಗಿ ಇನ್ನೇನು ಕೆಲ ದಿನಗಳಲ್ಲೇ ಈ ಸೇವೆ ಆರಂಭಗೊಳ್ಳಲಿದ್ದು, ಹೊಸದಾಗಿ ಕಾರ್ಡ್ ಮಾಡಿಸುವವರು, ಈಗಾಗ್ಲೇ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವವರು, ಮತ್ತು ತಿದ್ದು ಪಡಿ ಸೇರ್ಪಡೆಗಾಗಿ ಕಾಯುತ್ತಿರುವವರಿಗೆ ಇದೀಗ ರಾಜ್ಯ ಸರ್ಕಾರದಿಂದ ಇದು ಗುಡ್ ನ್ಯೂಸ್ ಅಂತಲೇ ಹೇಳಬಹುದು.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಇಲ್ಲಿದೆ 5 ಬೆಸ್ಟ್ ಲ್ಯಾಪ್ ಟಾಪ್ ಗಳು; ಉತ್ತಮ ಬ್ಯಾಟರಿ ಬ್ಯಾಕಪ್ ನೊಂದಿಗೆ..

ಇದನ್ನೂ ಓದಿ: ಈ ಏಳು ರಾಶಿಯವರಿಗೆ 2024 ಅದೃಷ್ಟದ ವರ್ಷ

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram