ಸಾಕಷ್ಟು ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಆಸಕ್ತಿಯನ್ನು ಹೊಂದಿರುತ್ತಾರೆ ಅಂತಹ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯು ಬಹಳ ಉಪಯುಕ್ತವಾಗಲಿದೆ. ಹೌದು ಸದ್ಯ ಇದೀಗ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಇನ್ನು ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಆಸಕ್ತರು ಆಫ್ಲೈನ್ ಮೂಲಕ ಅಥವಾ ಪೋಸ್ಟ್ ಮೂಲಕ ಕೂಡ ಅರ್ಜಿಯನ್ನ ಸಲ್ಲಿಸಬಹುದು. ಇನ್ನು ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದ್ದು, ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಲು ಅರ್ಹರು ಪ್ರಯತ್ನಿಸಬಹುದು. ಈ ವಿಷಯದ ಕುರಿತು ಇನ್ನಷ್ಟು ಮಾಹಿತಿಯನ್ನ ನೋಡ್ತಾ ಹೋಗೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಹ ಅಭ್ಯರ್ಥಿಗಳಿಗೆ ಸಿಗಲಿದೆ 63000 ರೂಪಾಯಿಯವರೆಗೆ ಸಂಬಳ
ಹೌದು ಅರ್ಹ ಅಭ್ಯರ್ಥಿಗಳು ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಅಂಚೆ ಇಲಾಖೆಯಲ್ಲಿ ಕೆಲವೊಂದು ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳಿಗೆ ಅರ್ಜಿ ಯನ್ನು ಆಹ್ವಾನ ಮಾಡಲಾಗಿದೆ. ಹೀಗಾಗಿ ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು, ಮತ್ತೊಂದಷ್ಟು ವಿಷಯಗಳ ಬಗ್ಗೆ ಪರಿಪೂರ್ಣವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಹೌದು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗುತ್ತದೆ.
ಇನ್ನು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಹಾಗೂ ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 9, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು ಅಂತ ತಿಳಿಸಿದ್ದಾರೆ ಇದರ ಜೊತೆಗೆ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಅಂತ ಕೂಡ ಹೇಳಲಾಗಿದೆ. ಇದೇ ರೀತಿಯ ಹೆಚ್ಚಿನ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಸೆರಲು ಇಲ್ಲಿ ಕ್ಲಿಕ್ ಮಾಡಿ
ಇನ್ನು ಉದ್ಯೋಗ ಪಡೆಯಲು ಅರ್ಜಿ ಸಲ್ಲಿಕೆ ಆರಂಭ ದಿನಾಂಕ 29/12/2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 9, 2024 ಆಗಿದೆ. ಇನ್ನು ಮ್ಯಾನೇಜರ್ ಮೇಲ್ ಮೋಟಾರ್ ಸೇವೆ, ಕಾನ್ಪುರ್ GPO ಕಾಂಪ್ಲೆಕ್ಸ್ ಕಾನ್ಪುರ್-208001, ಉತ್ತರ ಪ್ರದೇಶದಲ್ಲಿ ಈ ಮೇಲಿನ ಉದ್ಯೋಗಗಳು ಖಾಲಿಯಿದ್ದು, ಅರ್ಜಿ ಸಲ್ಲಿಸಿದವರನ್ನ ಟ್ರೇಡ್ ಟೆಸ್ಟ್, ಡ್ರೈವಿಂಗ್ ಟೆಸ್ಟ್, ಥಿಯರಿ ಟೆಸ್ಟ್ ಹಾಗೂ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ಆಯ್ಕೆ ಆದವರಿಗೆ ಮಾಸಿಕ 19,900-63,200ದವರೆಗೂ ಕೂಡ ವೇತನ ನಿಗಧಿ ಮಾಡಲಿದ್ದಾರೆ. ಅಂದ್ರೆ ಆಯಾ ಪೋಸ್ಟ್ ಗಳಿಗೆ ಅನುಗುಣವಾಗಿ ವೇತನವನ್ನ ನಿಗಧಿ ಮಾಡಲಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ವೇತನದ ಸಂಪೂರ್ಣ ವಿಷಯ ತಿಳಿಯಲಿದೆ.
ಇದನ್ನೂ ಓದಿ: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್; ಚಿಟ್ ಫಂಡ್ ನಲ್ಲಿ ಮಹಿಳೆಯರಿಗೆ ಹಣ ಹೂಡಿಕೆಗೆ ಅವಕಾಶ