ಈಗಾಗಲೇ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮಹಾ ನಗರ ಬೆಂಗಳೂರಿನಲ್ಲಿನ ಗುಡುಗು ಸಹಿತ ಭಾರಿ ಮಳೆ ಆಗಿದೆ. ಈಗ ಹವಾಮಾನ ಇಲಾಖೆಯು ಮತ್ತೆ ಮೇ 20 ರ ವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಮಳೆಯಾದರೂ ಬಿಸಿಲಿನ ತಾಪಮಾನ ಕಡಿಮೆ ಆಗಲಿಲ್ಲ.:- ರಾಜ್ಯದಲ್ಲಿ ಮಳೆ ಆದರೂ ಸಹ ಬಿಸಿಲಿನ ಝಳ ಇನ್ನು ಕಡಿಮೆ ಆಗಲಿಲ್ಲ. ಮಳೆ ಆರಂಭ ಆದರೆ ತಾಪಮಾನ ಕಡಿಮೆ ಆಗುವುದು ಸಾಮಾನ್ಯ. ಆದರೆ ಈ ಬಾರಿ ಸೂರ್ಯನ ಬಿಸಿಲಿನ ತಾಪಮಾನ ಮಾತ್ರ ಕಡಿಮೆ ಆಗಲಿಲ್ಲ. ಮಳೆ ಬೀಳುವ ಸಮಯ ಹೊರತು ಪಡಿಸಿ ಉಳಿದ ಸಮಯದಲ್ಲಿ ಹೆಚ್ಚಿನ ತಾಪಮಾನ ದಾಖಲಾಗುತ್ತಿವೆ.
ಮೇ 14 ಮಂಗಳವಾರ ಎಲ್ಲೆಲ್ಲಿ ಮಳೆಯಾಗಲಿದೆ?
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮಂದುವರೆಯಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಮಟ್ಟಿವ್ ಚಿಕ್ಕಮಗಳೂರು ಹಾಗೂ ಹಾಸನ ಮತ್ತು ಕೊಡಗು ಮತ್ತು ಮಂಡ್ಯ ಹಾಗೂ ಮೈಸೂರು ಮತ್ತು ಕಲಬುರಗಿ ಹಾಗೂ ಯಾದಗಿರಿ ಮತ್ತು ಬೆಳಗಾವಿ ಹಾಗೂ ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿಯನ್ನೂ ಹವಾಮಾನ ಇಲಾಖೆ ನೀಡಿದ. ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಹಾಗೂ ತುಮಕೂರು ಮತ್ತು ಕೋಲಾರ ಹಾಗೂ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಬೀದರ್ ಹಾಗೂ ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಮೇ 15 ರಂದು ರಾಜ್ಯದ ಹಲವೆಡೆ ಮಳೆ ಆಗಲಿದೆ :- ಉಡುಪಿ ಹಾಗೂ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹಾಗೂ ವಿಜಯಪುರ, ಮತ್ತು ಕಲಬುರಗಿ ಹಾಗೂ ಬಾಗಲಕೋಟೆ ಮತ್ತು ಬೆಳಗಾವಿ ಹಾಗೂ ಯಾದಗಿರಿ ಮತ್ತು ದಾವಣಗೆರೆ, ಹಾಗೂ ಬಳ್ಳಾರಿ ಮತ್ತು ಮಂಡ್ಯ ಹಾಗೂ ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಎಂದು ಮುನ್ಸೂಚನೆ ಇದೆ.
May 16 ರಂದು ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ?: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂಬ ಮಾಹಿತಿ ಲಭ್ಯವಿದೆ.
ಮೇ 17 ರಂದು ಎಲ್ಲೆಲ್ಲಿ ಮಳೆ ಆಗಲಿದೆ?: ಉಡುಪಿ ಹಾಗೂ ಚಿಕ್ಕಮಗಳೂರು ಮತ್ತು ಕೊಡಗು, ಮೈಸೂರು ಹಾಗೂ ಮಂಡ್ಯ ಮತ್ತು ಶಿವಮೊಗ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ.
ಮೇ 18 ರಿಂದ 20 ರ ವರೆಗೆ ಯಾವ ಪ್ರದೇಶದಲ್ಲಿ ಮಳೆ ಆಗಲಿದೆ?: ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ಪಿಎಂ ಉಜ್ವಲ ಯೋಜನೆಯ ಲಿಸ್ಟ್ ನಲ್ಲಿ ನಿಮ್ಮ ಹೆಸರನ್ನು ಆನ್ಲೈನ್ ಮೂಲಕ ತಿಳಿಯುವ ವಿಧಾನ ಇಲ್ಲಿದೆ