ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್( Data Entry Operators) ನೇಮಕ ಮಾಡಲು ಆದೇಶ ಹೊರಡಿಸಿದೆ. ಅಲ್ದೇ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಹೌದು ಈ ಮೂಲಕ ಕರ್ನಾಟಕ ಸರ್ಕಾರವು ದ್ವಿತೀಯ ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇನ್ನು ಮಾಸಿಕ ರೂ.16,738 ವೇತನ ನೀಡುವ ಡಾಟಾ ಎಂಟ್ರಿ ಆಪರೇಟರ್ ಪೋಸ್ಟ್‌ಗಳನ್ನು ಪ್ರತಿ ಪಂಚಾಯ್ತಿಗಳಲ್ಲಿ ನೇಮಕ ಮಾಡಲು ನಿರ್ದೇಶನ ನೀಡಿದೆ. ಕರ್ನಾಟಕ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಒಬ್ಬರಂತೆ ಒಟ್ಟು 5980 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಸೂಚನೆ ನೀಡಿದೆ.
ಹೌದು ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಕೆಲಸದ ಒತ್ತಡ, ಕಡತಗಳ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ನೇರ ನೇಮಕಾತಿ ಮುಖೇನ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಗಳನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು ಅಂತ ಇಲಾಖೆ ಹೇಳಿದೆ.
ಹೌದು ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಈ ಕುರಿತು ಪತ್ರದ ಮೂಲಕ ಆದೇಶ ನೀಡಿದೆ. ಈ ಆದೇಶ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗಳಿಗೂ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಅನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುವ ಕುರಿತು ಎಂಬ ವಿಷಯ ಒಳಗೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ, ವಿದ್ಯಾರ್ಹತ ಆಯ್ಕೆ ಸಮಿತಿ ನಿಗದಿ ಪಡಿಸಿ ಆದೇಶಿಸಲಾಗಿರುತ್ತದೆ ಎಂದು ಹೇಳಿದೆ.
ಇನ್ನು ಡಾಟಾ ಎಂಟ್ರಿ ಆಪರೇಟರ್‌ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ನಿರ್ದೇಶಿಸಿರುವಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಈ ಮೂಲಕ ಸೂಚಿಸಿದೆ ಎಂದು ಆದೇಶ ತಿಳಿಸಿಲಾಗಿದೆ.
ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp
ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ
ಇನ್ನು ಅಧಿಸೂಚನೆ ಹೋರಾಡಿಸಿರುವ ಹುದ್ದೆಯ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತೆ ಬೇಕಾಗಿರುವ ದಾಖಲಾತಿಗಳೇನು ಅಂತ ನೋಡೋದಾದ್ರೆ ಮೊದಲಿಗೆ, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ವಿದ್ಯಾರ್ಹತೆ ಏನು ಅನ್ನೋದಾದ್ರೆ ಈ ಮೊದಲೇ ತಿಳಿಸಿರುವಂತೆ
ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಕಿಯೋನಿಕ್ಸ್ ಅಥವಾ ರಾಜ್ಯ ಸರ್ಕಾರ ದಿಂದ ಮಾನ್ಯತೆ ಪಡೆದ ಕಂಪ್ಯೂಟರ್ ಕೇಂದ್ರಗಳಿಂದ ತರಬೇತಿ ಪಡೆದ ಕಂಪ್ಯೂಟರ್ ಟ್ರೈನಿಂಗ್ ತರಬೇತಿ ಪ್ರಮಾಣ ಲಗತ್ತಿಸಬೇಕು ಅಂತ ಸೂಚಿಸಲಾಗಿದೆ. ಇನ್ನು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ವೇತನ ಎಸ್ಟಿರುತ್ತೆ ಅಂದ್ರೆ, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಮಾಸಿಕ ಅಂದ್ರೆ ಪ್ರತಿ ತಿಂಗಳು ರೂ.16,738 ವೇತನ ನೀಡಲಾಗುತ್ತದೆ. ಜೊತೆಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ ಹೇಗಿರುತ್ತದೆ ಅಂದ್ರೆ ನೇರ ನೇಮಕಾತಿ ವಿಧಾನವಿರುತ್ತೆ.
ಇಲ್ಲಿ ಯಾವುದೇ ಪರೀಕ್ಷೆ ಇರೋದಿಲ್ಲ. ಹೌದು ಗ್ರಾಮ ಪಂಚಾಯ್ತಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಯಲ್ಲಿ ನೇರ ನೇಮಕಾತಿ ಪ್ರಕ್ರಿಯೆಯನ್ನ ಅನುಸರಿಸಲಿದ್ದು, ದ್ವಿತೀಯ ಪಿಯುಸಿ ಅರ್ಹತೆಯ ಅಂಕಗಳು ಹಾಗೂ ಕಂಪ್ಯೂಟರ್ ತರಬೇತಿ ಸರ್ಟಿಫಿಕೇಟ್ ಗಳನ್ನು ಆಧರಿಸಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ. ಇದರ ಜೊತೆಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವವರನ್ನು ಮೊದಲ ಆದ್ಯತೆಯಲ್ಲಿ ಪರಿಗಣಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಈಗಾಗಲೇ ಈ ಹುದ್ದೆಗಳ ಭರ್ತಿ ಕುರಿತು ಸುತ್ತೋಲೆ ಹೊರಡಿಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸ್ವೀಕರಿಸುವ ಸಾಧ್ಯತೆಗಳಿವೆ ಅಂತ ಹೇಳಲಾಗುತ್ತಿದೆ.
ಇದನ್ನೂ ಓದಿ: 2024 ಕೆಟಿಎಂ 125 ಡ್ಯೂಕ್ : ಹೊಸ ಕೆಟಿಎಂ ವೈಶಿಷ್ಟ್ಯಗಳು ಹಾಗೂ ಇದರ ಬಗ್ಗೆ ಸಂಪೂರ್ಣ ಮಾಹಿತಿ.
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram