ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿತ್ತು. ಆದರೆ ಇತ್ತೀಚೆಗಷ್ಟೇ ನಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂದು ಬಹುತೇಕ ಮಹಿಳೆಯರು ಆರೋಪ ಮಾಡಿದ್ದರು. ಬಳಿಕ ತಕ್ಷಣ ಎಚ್ಚೆತ್ತ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಒಂದಷ್ಟು ಕ್ರಮಗಳನ್ನ ತೆಗೆದುಕೊಂಡು ಯಾವುದೇ ತೊಡಕುಗಳಿಲ್ಲದ ಹಣ ಜಮೆ ಮಾಡಲು ನಿರ್ಧಾರ ಮಾಡಿದ್ರು. ಇದೀಗ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ. ಮನೆ ಯಜಮಾನಿಯ ಹೆಸರು ಮತ್ತು ವಿಳಾಸ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು, ನಿಮ್ಮ ಮೊಬೈಲ್ ನಂಬರ್ ಹಾಗೂ ಇತರೆ ಮಾಹಿತಿಯನ್ನು ಭರ್ತಿ ಮಾಡಬೇಕಾಗಿದೆ ಅಂತ ಹೇಳಿತ್ತು, ಅದರಂತೆ ಇದೀಗ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವು ವರ್ಗಾವಣೆ ಆಗುತ್ತಿದ್ದು, ಮೊದಲ ಹಂತದಲ್ಲಿ 15ಜಿಲ್ಲೆಗಳ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೌದು 5,96,268 ಫಲಾನುಭವಿಗಳ ಖಾತೆ ಆಧಾರ್ ಕಾರ್ಡ್ಗೆ ಲಿಂಕ್ ಆಗಿಲ್ಲ. ಆದರೆ 2,17,536 ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್‌ನೊಂದಿಗೆ ಲಿಂಕ್ ಆಗಿದ್ದು, ಅವರಿಗೆ ಯೋಜನೆಯ ಹಣ ಜಮಾ ಆಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮವಹಿಸಲಾಗಿದ್ದು, ಸದ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಈ ಯೋಜನೆಯ 4ನೇ ಕಂತಿನ ಹಣವನ್ನು ಜಿಲ್ಲಾವಾರು ವರ್ಗಾವಣೆ ಮಾಡಲಾಗುತ್ತಿದೆ. ಹಾಗಾದ್ರೆ ಇದೀಗ ಯಾವ ಜಿಲ್ಲೆಯವರಿಗೆ ಹಣ ಬಂದಿದೆ ಉಳಿದವರಿಗೆ ಯಾವಾಗ ಬರಲಿದೆ ನೋಡೋಣ ಬನ್ನಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram
ಈ ಜಿಲ್ಲೆಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆ
ಹೌದು ಈಗಾಗ್ಲೇ ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ 15 ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ DBT ಮೂಲಕ ಜಮಾ ಮಾಡಲಾಗುವುದು ಎನ್ನುವ ಮಾಹಿತಿ ತಿಳಿದುಬಂದಿದೆ. ಹೌದು ಪ್ರತಿ ತಿಂಗಳು ದಿನಾಂಕ 20ರ ಒಳಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ವರ್ಗಾವಣೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ನೀಡಿದ್ದರು, ಅಷ್ಟೇ ಅಲ್ಲದೆ, ಪ್ರತಿ ಗ್ರಾಮಗಳಲ್ಲಿ ಅದಾಲತ್ತು ನಡೆಸುವಂತೆ ಸೂಚನೆ ನೀಡಿದ್ದರು. ಫಲಾನುಭವಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಥವಾ ಅಂಗನವಾಡಿ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸದ್ಯ ಯಾವೆಲ್ಲ ಜಿಲ್ಲೆಯ ಯಜಮಾನಿಯರಿಗೆ 4ನೇ ಕಂತಿನ ಹಣ ಬಿಡುಗಡೆಯಾಗಿದೆ ಅಂತ ನೋಡೋದಾದ್ರೆ ಚಿತ್ರದುರ್ಗ, ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾಸನ, ಬಿಜಾಪುರ, ಉತ್ತರ ಕನ್ನಡ, ದಾವಣಗೆರೆ, ಗದಗ, ರಾಯಚೂರು, ಕಲಬುರಗಿ, ಮೈಸೂರು ಜಿಲ್ಲೆಯ ಫಲನುಭವಿಗಳ ಖಾತೆಗೆ ಹಣ ಜಮೆ ಆಗಿದ್ಯಂತೆ.
ಇನ್ನು ಕೆಲವು ನೊಂದಣಿದಾರರಿಗೆ ತಾಂತ್ರಿಕ ದೋಷದಿಂದ ಅಥವಾ KYC ಸಮಸ್ಯೆಯಿಂದ ಇನ್ನೂ ಕೂಡ ಹಣ ಜಮೆಯಾಗಿಲ್ಲ. ಇದರ ಜೊತೆಗೆ ಕೆಲವು ನೊಂದಣಿದಾರರ ಆಧಾರ್ ಲಿಂಕ್ ಆಗದಿರುವುದಕ್ಕೆ ಸಮಸ್ಯೆ ಆಗಿದೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವುದಕ್ಕಾಗಿ ಅನೇಕ ಮಂದಿ ತಪ್ಪು ವಿಳಾಸಗಳನ್ನು ಸಲ್ಲಿಸಿರುವುದು ಹಣ ಬಾರದಿರಲು ಪ್ರಮುಖ ಸಮಸ್ಯೆಯಾಗಿದೆ. ಇನ್ನು ನೊಂದಣಿದಾರರು ಅರ್ಜಿ ಸಲ್ಲಿಸುವಾಗ ನೀಡಿರುವ ಬ್ಯಾಂಕ್ ಖಾತೆಗಳು ನಿಷ್ಕ್ರೀಯಾಗಿದ್ದರೆ ಪರಿಶೀಲನೆ ಮಾಡಿ, ಕೆವೈಸಿ ಪರಿಶೀಲನೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಇತ್ಯಾದಿಯನ್ನು ಗಮನಿಸಿವುದು ಮುಖ್ಯ. ಇನ್ನು ಈಗಾಗಲೇ ನವೆಂಬರ್ ತಿಂಗಳ ಗೃಹಲಕ್ಷ್ಮಿ ಹಣ ಕೆಲವು ಮಹಿಳೆಯರಿಗೆ ಬಂದಿಲ್ಲ. ಅದೇ ರೀತಿ ನೊಂದಣಿ ಮಾಡಿದ್ದರೂ ಒಂದು ಕಂತಿನ ಹಣವೂ ಕೆಲವು ಮಹೀಳೆಯರಿಗೆ ಜಮೆಯಾಗಿಲ್ಲ. ಈ ಎಲ್ಲಾ ಕಂತಿನ ಹಣ ಈ ಡಿಸೆಂಬರ್ ತಿಂಗಳ 31ರ ಒಳಗೆ ಜಮೆಯಾಗಲಿದೆ ಅಂತ ಹೇಳಲಾಗುತ್ತಿದೆ.
ಇದನ್ನೂ ಓದಿ: ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಅಹ್ವಾನ; 20ಸಾವಿರದವರೆಗೆ ಸಿಗಲಿದೆ ಪ್ರೋತ್ಸಾಹ ಧನ!ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?